IND vs AUS: ಡೇ-ನೈಟ್ ಟೆಸ್ಟ್ಗೆ ಶುಭ್ಮನ್ ಗಿಲ್ ಅನುಮಾನ
India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್ನಲ್ಲಿ ಟೀಮ್ ಇಂಡಿಯಾ 295 ರನ್ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡವು 1-0 ಅಂತರದಿಂದ ಸರಣಿಯಲ್ಲಿ ಮುನ್ನಡೆ ಸಾಧಿಸಿದೆ. ಇದೀಗ ಉಭಯ ತಂಡಗಳು ದ್ವಿತೀಯ ಟೆಸ್ಟ್ಗೆ ಸಜ್ಜಾಗುತ್ತಿದೆ.
Updated on: Nov 28, 2024 | 8:06 AM

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಎರಡನೇ ಪಂದ್ಯವು ಡಿಸೆಂಬರ್ 6 ರಿಂದ ಶುರುವಾಗಲಿದೆ. ಅಡಿಲೇಡ್ನ ಓವಲ್ ಮೈದಾನದಲ್ಲಿ ಜರುಗಲಿರುವ ಈ ಪಂದ್ಯವು ಪಿಂಕ್ ಬಾಲ್ ಟೆಸ್ಟ್ ಎಂಬುದು ವಿಶೇಷ. ಅಂದರೆ ಡೇ-ನೈಟ್ ಟೆಸ್ಟ್. ಹೊನಲು-ಬೆಳಕಿನಲ್ಲಿ ನಡೆಯಲಿರುವ ಈ ಪಂದ್ಯಕ್ಕೂ ಟೀಮ್ ಇಂಡಿಯಾದ ಯುವ ದಾಂಡಿಗ ಶುಭ್ಮನ್ ಗಿಲ್ ಅಲಭ್ಯರಾಗುವ ಸಾಧ್ಯತೆಯಿದೆ.

ಇದಕ್ಕೂ ಮುನ್ನ ಪರ್ತ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಿಂದ ಗಿಲ್ ಹೊರಗುಳಿದಿದ್ದರು. ಫೀಲ್ಡಿಂಗ್ ಅಭ್ಯಾಸದ ವೇಳೆ ಗಿಲ್ ಅವರ ಎಡಗೈ ಹೆಬ್ಬೆರಳು ಮುರಿತಕ್ಕೊಳಗಾಗಿದ್ದು, ಹೀಗಾಗಿ ಮೊದಲ ಪಂದ್ಯದಿಂದ ಹೊರಗುಳಿದಿದ್ದರು. ಇದಾಗ್ಯೂ ಅವರು ಅಡಿಲೇಡ್ ಟೆಸ್ಟ್ ಆಡಲಿದ್ದಾರೆ ಎನ್ನಲಾಗಿತ್ತು.

ಆದರೀಗ ಅವರು ಗಾಯದಿಂದ ಸಂಪೂರ್ಣ ಚೇತರಿಸಿಕೊಂಡಿಲ್ಲ ಎಂದು ವರದಿಯಾಗಿದೆ. ಹೀಗಾಗಿ ನವೆಂಬರ್ 30 ರಿಂದ ಕ್ಯಾನ್‌ಬೆರಾದಲ್ಲಿ ಶುರುವಾಗಲಿರುವ ಪ್ರೆಸಿಡೆಂಟ್ ಇಲೆವೆನ್ ವಿರುದ್ದದ ಅಭ್ಯಾಸ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂದು ತಿಳಿದು ಬಂದಿದೆ.

ಅತ್ತ ಗಾಯದಿಂದ ಸಂಪೂರ್ಣ ಚೇತರಿಸಿಕೊಳ್ಳಲು ವೈದ್ಯರು 2 ವಾರಗಳ ವಿಶ್ರಾಂತಿ ಸೂಚಿಸಿದ್ದು, ಹೀಗಾಗಿ ಡಿಸೆಂಬರ್ 6 ರಿಂದ ಆರಂಭವಾಗಲಿರುವ ಎರಡನೇ ಟೆಸ್ಟ್ ಪಂದ್ಯದಲ್ಲೂ ಕಣಕ್ಕಿಳಿಯುವುದು ಅನುಮಾನ. ಇನ್ನು ಗಿಲ್ ಹೊರಗುಳಿದರೆ ಅವರ ಸ್ಥಾನದಲ್ಲಿ ದೇವದತ್ ಪಡಿಕ್ಕಲ್ ಕಾಣಿಸಿಕೊಳ್ಳಲಿದ್ದಾರೆ.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ದೇವದತ್ ಪಡಿಕ್ಕಲ್.
