AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಆಫ್ರಿಕಾ ವಿರುದ್ಧ ಟಿ20 ಸರಣಿ ಆಡ್ತರಾ ಗಿಲ್? ಬಿಸಿಸಿಐ ನೀಡದ ಹೊಸ ಅಪ್​ಡೇಟ್ ಏನು?

Shubman Gill Fit for SA T20 Series: ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಮುನ್ನ ಭಾರತ ತಂಡಕ್ಕೆ ಶುಭ ಸುದ್ದಿಯಿದೆ. ಗಾಯದಿಂದ ಚೇತರಿಸಿಕೊಂಡಿರುವ ಉಪನಾಯಕ ಶುಭ್​ಮನ್ ಗಿಲ್ ಸಂಪೂರ್ಣ ಫಿಟ್ ಆಗಿದ್ದಾರೆ. BCCI ನ ಸೆಂಟರ್ ಆಫ್ ಎಕ್ಸಲೆನ್ಸ್ ಅವರು ಆಡಲು ಅನುಮತಿ ನೀಡಿದ್ದು, ಟಿ20 ಸರಣಿಗೆ ಲಭ್ಯರಿದ್ದಾರೆ. ಗಿಲ್ ಆಗಮನ ತಂಡದ ಬ್ಯಾಟಿಂಗ್ ವಿಭಾಗಕ್ಕೆ ಮತ್ತಷ್ಟು ಬಲ ನೀಡಲಿದೆ.

ಪೃಥ್ವಿಶಂಕರ
|

Updated on:Dec 06, 2025 | 6:58 PM

Share
ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೂ ಮುನ್ನ ಟೀಂ ಇಂಡಿಯಾಕ್ಕೆ ಒಳ್ಳೆಯ ಸುದ್ದಿ ಸಿಕ್ಕಿದೆ. ಭಾರತದ ಟಿ20 ತಂಡದ ಉಪನಾಯಕ ಶುಭ್​ಮನ್ ಗಿಲ್ ಅವರು ಫಿಟ್ ಆಗಿದ್ದಾರೆ ಎಂದು ವರದಿಯಾಗಿದೆ. ಅಲ್ಲದೆ ಬಿಸಿಸಿಐನ ಸೆಂಟರ್ ಆಫ್ ಎಕ್ಸಲೆನ್ಸ್, ಶುಭ್​ಮನ್ ಗಿಲ್ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಆಡಲು ಅನುಮತಿ ನೀಡಿದೆ.

1 / 5
ವಾಸ್ತವವಾಗಿ ದಕ್ಷಿಣ ಆಫ್ರಿಕಾ ವಿರುದ್ಧ ಕೋಲ್ಕತ್ತಾದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ವೇಳೆ ಶುಭ್​ಮನ್ ಗಿಲ್​ಗೆ ಕುತ್ತಿಗೆ ನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ತಂಡದಿಂದ ಹೊರಗಿಡಲಾಯಿತು. ಇದರಿಂದಾಗಿ ಅವರು ಏಕದಿನ ಸರಣಿಯಲ್ಲಿ ಆಡಲು ಸಾಧ್ಯವಾಗಿರಲಿಲ್ಲ. ಹಾಗೆಯೇ ಈ ಮೊದಲು ಗಿಲ್ ಟಿ20 ಸರಣಿ ಆಡುವುದು ಅನುಮಾನವಾಗಿತ್ತು. ಆದರೀಗ ಪೂರ್ಣವಾಗಿ ಚೇತರಿಸಿಕೊಂಡಿರುವ ಗಿಲ್, ಆಫ್ರಿಕಾ ವಿರುದ್ಧ ಕಣಕ್ಕಿಳಿಯಲಿದ್ದಾರೆ.

2 / 5
ಈ ಮೊದಲು ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಿದ್ದ ಆಯ್ಕೆ ಮಂಡಳಿ ಶುಭಮನ್ ಗಿಲ್ ಅವರನ್ನು ತಂಡದಲ್ಲಿ ಆಯ್ಕೆ ಮಾಡಿತ್ತು. ಆದರೆ ಅವರು ಆಡುವುದು ಅವರ ಫಿಟ್ನೆಸ್ ಆಧರಿಸಿರುತ್ತದೆ ಎಂದಿತ್ತು. ಆದ್ದರಿಂದ ಶುಭ್​ಮನ್ ಗಿಲ್ ಟಿ20 ಸರಣಿಯಲ್ಲಿ ಭಾಗವಹಿಸುವುದು ಖಚಿತವಾಗಿರಲಿಲ್ಲ.

3 / 5
ಇದೀಗ ಬೆಂಗಳೂರಿನಲ್ಲಿ ಸೆಂಟರ್ ಆಫ್ ಎಕ್ಸಲೆನ್ಸ್, ಟೀಂ ಇಂಡಿಯಾದ ಮ್ಯಾನೇಜ್​ಮೆಂಟ್​ಗೆ ಕಳುಹಿಸಿದ ಪತ್ರದಲ್ಲಿ, ಶುಭಮನ್ ಗಿಲ್ ತಮ್ಮ ಪುನರ್ವಸತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಅವರು ಅಗತ್ಯವಿರುವ ಮಾನದಂಡಗಳನ್ನು ಪೂರೈಸಿದ್ದಾರೆ. ಹೀಗಾಗಿ ಅವರು ಆಟದ ಎಲ್ಲಾ ಸ್ವರೂಪಗಳನ್ನು ಆಡಲು ಫಿಟ್ ಆಗಿದ್ದಾರೆ ಎಂದು ತಿಳಿಸಿದೆ.

4 / 5
ಮೇಲೆ ಹೇಳಿದಂತೆ ಗಾಯದ ಕಾರಣದಿಂದಾಗಿ ಶುಭ್​ಮನ್ ಗಿಲ್ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿದಿದ್ದರು. ಆದರೆ ಈಗ ಅವರು ಟಿ20 ಸರಣಿಯಲ್ಲಿ ಭಾಗವಹಿಸುವ ಬಗ್ಗೆ ಇದ್ದ ಎಲ್ಲಾ ಸಸ್ಪೆನ್ಸ್ ಕೊನೆಗೊಂಡಿದೆ. ಗಿಲ್ ಆಗಮನದಿಂದಾಗಿ ತಂಡದ ಬ್ಯಾಟಿಂಗ್ ವಿಭಾಗ ಮತ್ತಷ್ಟು ಬಲಗೊಳ್ಳಲಿದೆ.

5 / 5

Published On - 6:58 pm, Sat, 6 December 25

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು

ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!

ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್

ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?

ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ

ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ

ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್

ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ

ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ