- TV9 Kannada Photo gallery Cricket photos Shubman Gill Sets New ODI World Record: First Batter with 60+ Average and 100+ SR
IND vs ENG: ಏಕದಿನ ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಶುಭ್ಮನ್ ಗಿಲ್
Shubman Gill Sets New ODI World Record: ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಶುಭ್ಮನ್ ಗಿಲ್ ಅರ್ಧಶತಕ ಗಳಿಸಿ ಏಕದಿನ ಕ್ರಿಕೆಟ್‌ನಲ್ಲಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ. 50ಕ್ಕೂ ಹೆಚ್ಚು ಇನ್ನಿಂಗ್ಸ್‌ಗಳಲ್ಲಿ 60ಕ್ಕೂ ಹೆಚ್ಚಿನ ಸರಾಸರಿ ಹಾಗೂ 100ಕ್ಕೂ ಹೆಚ್ಚಿನ ಸ್ಟ್ರೈಕ್‌ರೇಟ್ ಹೊಂದಿದ ವಿಶ್ವದ ಮೊದಲ ಬ್ಯಾಟರ್ ಎನಿಸಿದ್ದಾರೆ. ವಿರಾಟ್ ಕೊಹ್ಲಿ, ಸಚಿನ್ ತೆಂಡೂಲ್ಕರ್, ಎಬಿ ಡಿವಿಲಿಯರ್ಸ್‌ನಂತಹ ದಿಗ್ಗಜರಿಗೂ ಈ ಸಾಧನೆ ಸಾಧ್ಯವಾಗಿರಲಿಲ್ಲ.
Updated on: Jul 14, 2026 | 10:40 PM

ಮೊದಲ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ನೀಡಿರುವ 258 ರನ್ಗಳ ಗುರಿ ಬೆನ್ನಟ್ಟಟಿರುವ ಟೀಂ ಇಂಡಿಯಾಕ್ಕೆ ಉತ್ತಮ ಆರಂಭ ಸಿಗಲಿಲ್ಲ. ತಂಡದ ಇಬ್ಬರು ಅನುಭವಿ ಬ್ಯಾಟ್ಸ್ಮನ್ಗಳಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಬೇಗನೇ ಔಟಾದರು. ಆದರೆ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದ ನಾಯಕ ಶುಭ್ಮನ್ ಗಿಲ್ ಅರ್ಧಶತಕದ ಇನ್ನಿಂಗ್ಸ್ ಆಡಿದರು(PC-PTI).

ಈ ಅರ್ಧಶತಕದ ಇನ್ನಿಂಗ್ಸ್ ಮೂಲಕ ಶುಭ್ಮನ್ ಗಿಲ್ ವಿಶ್ವ ದಾಖಲೆಯನ್ನೂ ನಿರ್ಮಿಸಿದರು. ಇದೀಗ ಶುಭ್ಮನ್ ಗಿಲ್ ಏಕದಿನ ಕ್ರಿಕೆಟ್‌ನಲ್ಲಿ 50 ಕ್ಕೂ ಹೆಚ್ಚು ಇನ್ನಿಂಗ್ಸ್ಗಳನ್ನು ಆಡಿದ ಆಟಗಾರರ ಪಟ್ಟಿಯಲ್ಲಿ 100 ಕ್ಕಿಂತ ಹೆಚ್ಚು ಸ್ಟ್ರೈಕ್ ರೇಟ್ ಮತ್ತು 60 ರ ಸರಾಸರಿಯನ್ನು ಹೊಂದಿರುವ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ(PC-PTI).

ಎಬಿ ಡಿವಿಲಿಯರ್ಸ್‌ನಂತಹ ಹಲವು ದಿಗ್ಗಜ ಕ್ರಿಕೆಟಿಗರು ಏಕದಿನ ಕ್ರಿಕೆಟ್‌ನಲ್ಲಿ 100 ಕ್ಕಿಂತ ಹೆಚ್ಚು ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟಿಂಗ್ ಮಾಡಿದ್ದಾರೆ. ಆದರೆ ಅವರ ಸರಾಸರಿ ಎಂದಿಗೂ 60 ತಲುಪಿರಲಿಲ್ಲ. ಆದರೀಗ ಶುಭ್ಮನ್ ಗಿಲ್ ಈ ದಾಖಲೆಯನ್ನು ನಿರ್ಮಿಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ವಿರಾಟ್ ಕೊಹ್ಲಿ ಮತ್ತು ಸಚಿನ್ ತೆಂಡೂಲ್ಕರ್ ಕೂಡ ಈ ಸಾಧನೆಯನ್ನು ಮಾಡಿರಲಿಲ್ಲ(PC-PTI).

ಇಂದಿನ ಪಂದ್ಯಕ್ಕೂ ಮೊದಲು ಶುಭ್ಮನ್ ಗಿಲ್ ಅವರ ಏಕದಿನ ಸರಾಸರಿ 59 ಆಗಿತ್ತು. ಇದೀಗ ಇಂಗ್ಲೆಂಡ್ ವಿರುದ್ಧ ಗಿಲ್ ಅರ್ಧಶತಕ ಗಳಿಸಿದ ನಂತರ, ಅವರ ಸರಾಸರಿ 60 ಕ್ಕಿಂತ ಹೆಚ್ಚಾಗಿದೆ. ವಿರಾಟ್ ಕೊಹ್ಲಿ (58.5) ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ನ್ಯೂಜಿಲೆಂಡ್ ಬ್ಯಾಟ್ಸ್‌ಮನ್ ಡ್ಯಾರಿಲ್ ಮಿಚೆಲ್ (58) ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಮೈಕೆಲ್ ಬೆವನ್ 53.6 ಸರಾಸರಿಯೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ ಮತ್ತು ಎಬಿ ಡಿವಿಲಿಯರ್ಸ್ 53.5 ಸರಾಸರಿಯೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ(PC-PTI).

ಪಂದ್ಯದ ಕುರಿತು ಹೇಳುವುದಾದರೆ, ಶುಭಮನ್ ಗಿಲ್ ಪ್ರಸ್ತುತ 75 ಎಸೆತಗಳಲ್ಲಿ 11 ಬೌಂಡರಿ ಮತ್ತು ಒಂದು ಸಿಕ್ಸರ್ ಸಹಾಯದಿಂದ 80 ರನ್ ಗಳಿಸಿದ್ದಾರೆ. ಆದರೆ ಬ್ಯಾಟಿಂಗ್ ಮಾಡುವ ವೇಳೆ ಇಂಜುರಿಗೆ ತುತ್ತಾಗಿರುವ ಗಿಲ್ ಅರ್ಧಕ್ಕೆ ಬ್ಯಾಟಿಂಗ್ ನಿಲ್ಲಿಸಿ ಮೈದಾನ ತೊರೆದಿದ್ದಾರೆ. ಒಂದು ವೇಳೆ ಈ ಪಂದ್ಯದಲ್ಲಿ ಗಿಲ್ ಮತ್ತೆ ಬ್ಯಾಟಿಂಗ್ ಮಾಡುವ ಸಂದರ್ಭ ಬಂದರೆ ಅವರು ಮತ್ತೆ ಕಣಕ್ಕಿಳಿಯಬಹುದು(PC-BCCI).




