ICC Test Rankings: ಬರೋಬ್ಬರಿ 15 ಸ್ಥಾನ ಮೇಲೇರಿದ ಶುಭ್​ಮನ್ ಗಿಲ್

Updated on: Jul 09, 2025 | 3:48 PM

ICC Test Rankings: ಎಡ್ಜ್‌ಬಾಸ್ಟನ್ ಟೆಸ್ಟ್ ಪಂದ್ಯದಲ್ಲಿ 430 ರನ್ ಗಳಿಸಿದ ಶುಭ್ಮನ್ ಗಿಲ್ ಐಸಿಸಿ ಟೆಸ್ಟ್ ಬ್ಯಾಟ್ಸ್‌ಮನ್ ಶ್ರೇಯಾಂಕದಲ್ಲಿ 21ನೇ ಸ್ಥಾನದಿಂದ 6ನೇ ಸ್ಥಾನಕ್ಕೆ ಏರಿದ್ದಾರೆ. ಇಂಗ್ಲೆಂಡ್ ವಿರುದ್ಧದ ಅದ್ಭುತ ಪ್ರದರ್ಶನದಿಂದಾಗಿ ಗಿಲ್​ಗೆ ಈ ಭರ್ಜರಿ ಮುಂಬಡ್ತಿ ಸಿಕ್ಕಿದೆ. ಹ್ಯಾರಿ ಬ್ರೂಕ್ ಅಗ್ರಸ್ಥಾನದಲ್ಲಿದ್ದರೆ, ಜೋ ರೂಟ್ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ.

1 / 7
ಎಡ್ಜ್‌ಬಾಸ್ಟನ್ ಟೆಸ್ಟ್ ಪಂದ್ಯದಲ್ಲಿ 400 ಕ್ಕೂ ಅಧಿಕ ರನ್ ಕಲೆಹಾಕಿದ್ದ ಟೀಂ ಇಂಡಿಯಾ ನಾಯಕ ಶುಭ್​ಮನ್ ಗಿಲ್ ಇದೀಗ ಐಸಿಸಿ ಹೊಸ ಟೆಸ್ಟ್ ಶ್ರೇಯಾಂಕದಲ್ಲಿ ಭರ್ಜರಿ ಮುಂಬಡ್ತಿ ಪಡೆದುಕೊಂಡಿದ್ದಾರೆ. ನೂತನ ರ್ಯಾಂಕಿಂಗ್​ನಲ್ಲಿ 15 ಬ್ಯಾಟ್ಸ್‌ಮನ್‌ಗಳನ್ನು ಹಿಂದಿಕ್ಕಿರುವ ಶುಭಮನ್ ಗಿಲ್ ಆರನೇ ಸ್ಥಾನಕ್ಕೆ ಬಂದಿದ್ದಾರೆ.

ಎಡ್ಜ್‌ಬಾಸ್ಟನ್ ಟೆಸ್ಟ್ ಪಂದ್ಯದಲ್ಲಿ 400 ಕ್ಕೂ ಅಧಿಕ ರನ್ ಕಲೆಹಾಕಿದ್ದ ಟೀಂ ಇಂಡಿಯಾ ನಾಯಕ ಶುಭ್​ಮನ್ ಗಿಲ್ ಇದೀಗ ಐಸಿಸಿ ಹೊಸ ಟೆಸ್ಟ್ ಶ್ರೇಯಾಂಕದಲ್ಲಿ ಭರ್ಜರಿ ಮುಂಬಡ್ತಿ ಪಡೆದುಕೊಂಡಿದ್ದಾರೆ. ನೂತನ ರ್ಯಾಂಕಿಂಗ್​ನಲ್ಲಿ 15 ಬ್ಯಾಟ್ಸ್‌ಮನ್‌ಗಳನ್ನು ಹಿಂದಿಕ್ಕಿರುವ ಶುಭಮನ್ ಗಿಲ್ ಆರನೇ ಸ್ಥಾನಕ್ಕೆ ಬಂದಿದ್ದಾರೆ.

2 / 7

ವಾಸ್ತವವಾಗಿ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ನಂತರ 21 ನೇ ಸ್ಥಾನದಲ್ಲಿದ್ದ ಶುಭ್​ಮನ್ ಗಿಲ್ ಇದೀಗ ಎರಡನೇ ಟೆಸ್ಟ್ ನಂತರ ಆರನೇ ಸ್ಥಾನಕ್ಕೆ ತಲುಪಿದ್ದಾರೆ. ಉಳಿದಂತೆ ಇಂಗ್ಲೆಂಡ್‌ ತಂಡದ ಉಪನಾಯಕ ಹ್ಯಾರಿ ಬ್ರೂಕ್ ನಂಬರ್ 1 ಸ್ಥಾನವನ್ನು ಅಲಂಕರಿಸಿಕೊಂಡಿದ್ದರೆ, ಜೋ ರೂಟ್ ನಂಬರ್ 1 ರಿಂದ ನಂಬರ್ 2 ಸ್ಥಾನಕ್ಕೆ ಕುಸಿದಿದ್ದಾರೆ.

3 / 7

ಶುಭ್‌ಮನ್ ಗಿಲ್ ಇಂಗ್ಲೆಂಡ್ ಪ್ರವಾಸಕ್ಕೆ ಬಂದಾಗ, ವಿಮರ್ಶಕರು ಅವರ ತಂತ್ರವನ್ನು ಪ್ರಶ್ನಿಸುತ್ತಿದ್ದರು. ಆದರೆ ಮೊದಲ ಟೆಸ್ಟ್‌ನಲ್ಲಿಯೇ ಗಿಲ್ ಶತಕ ಗಳಿಸುವ ಮೂಲಕ ವಿಮರ್ಶಕರ ಬಾಯಿ ಮುಚ್ಚಿಸಿದರು. ಆದಾಗ್ಯೂ ಭಾರತ ಆ ಟೆಸ್ಟ್‌ನಲ್ಲಿ ಸೋಲನುಭವಿಸಿತು. ಇದರ ನಂತರ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಗಿಲ್ ಅದ್ಭುತ ಪ್ರದರ್ಶನ ನೀಡಿದರು.

4 / 7

ಮೊದಲ ಇನ್ನಿಂಗ್ಸ್‌ನಲ್ಲಿ ದ್ವಿಶತಕ ಬಾರಿಸಿದ್ದ ಗಿಲ್, ಎರಡನೇ ಇನ್ನಿಂಗ್ಸ್‌ನಲ್ಲಿ ಶತಕದ ಇನ್ನಿಂಗ್ಸ್ ಆಡಿದ್ದರು. ಈ ಮೂಲಕ ಎಡ್ಜ್‌ಬಾಸ್ಟನ್ ಟೆಸ್ಟ್‌ನಲ್ಲಿ ಬರೋಬ್ಬರಿ 430 ರನ್ ಬಾರಿಸಿದ್ದರು. ಈ ಪ್ರದರ್ಶನದ ಆಧಾರದ ಮೇಲೆ, 807 ರೇಟಿಂಗ್ ಪಾಯಿಂಟ್ ಪಡೆದಿರುವ ಶುಭ್​ಮನ್ ಗಿಲ್ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಆರನೇ ಸ್ಥಾನದಲ್ಲಿದ್ದಾರೆ.

5 / 7

ಅಗ್ರಸ್ಥಾನಕ್ಕೇರಿರುವ ಹ್ಯಾರಿ ಬ್ರೂಕ್ ಮೊದಲ ಟೆಸ್ಟ್‌ನಲ್ಲಿ 99 ರನ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ ಅದ್ಭುತ ಶತಕ ಬಾರಿಸಿದ್ದರು. ಹೀಗಾಗಿ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಮೊದಲ ಸ್ಥಾನಕ್ಕೆ ಬಂದಿದ್ದಾರೆ. ಇತ್ತ ಎರಡೂ ಟೆಸ್ಟ್‌ಗಳಲ್ಲಿ ವಿಫಲರಾದ ಜೋ ರೂಟ್, ನಂಬರ್ 1 ಸ್ಥಾನವನ್ನು ಕಾಯ್ದುಕೊಳ್ಳಲು ಸಾಧ್ಯವಾಗದೆ ನಂ.2 ಸ್ಥಾನಕ್ಕೆ ಕುಸಿದಿದ್ದಾರೆ.

6 / 7

ಇತರ ಬ್ಯಾಟ್ಸ್‌ಮನ್‌ಗಳ ಬಗ್ಗೆ ಹೇಳುವುದಾದರೆ, ಕೇನ್ ವಿಲಿಯಮ್ಸನ್ ಮೂರನೇ ಸ್ಥಾನದಲ್ಲಿದ್ದರೆ, ಯಶಸ್ವಿ ಜೈಸ್ವಾಲ್ ನಾಲ್ಕನೇ ಸ್ಥಾನದಲ್ಲಿದ್ದಾರೆ ಮತ್ತು ಸ್ಟೀವ್ ಸ್ಮಿತ್ ಐದನೇ ಸ್ಥಾನದಲ್ಲಿದ್ದಾರೆ. ಟೆಂಬಾ ಬವುಮಾ 7 ನೇ ಸ್ಥಾನದಲ್ಲಿದ್ದು, ಇಂಗ್ಲೆಂಡ್‌ ವಿರುದ್ಧದ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ರಿಷಭ್ ಪಂತ್ ಒಂದು ಸ್ಥಾನ ಕುಸಿದು 8 ನೇ ಸ್ಥಾನಕ್ಕೆ ಇಳಿದಿದ್ದಾರೆ.

7 / 7

ಇಂಗ್ಲೆಂಡ್‌ನ ಜೇಮೀ ಸ್ಮಿತ್ 16 ಬ್ಯಾಟ್ಸ್‌ಮನ್‌ಗಳನ್ನು ಹಿಂದಿಕ್ಕುವ ಮೂಲಕ ಟಾಪ್ 10 ರೊಳಗೆ ಸ್ಥಾನ ಪಡೆದಿದ್ದಾರೆ. ಈಗ ಲಾರ್ಡ್ಸ್ ಟೆಸ್ಟ್ ಪ್ರಾರಂಭವಾಗಲಿದ್ದು, ಈ ಪಂದ್ಯದಲ್ಲಿ ರನ್ ಗಳಿಸುವ ಆಟಗಾರರು ಮತ್ತೆ ಟೆಸ್ಟ್ ಶ್ರೇಯಾಂಕದಲ್ಲಿ ಭರ್ಜರಿ ಮುಂಬಡ್ತಿ ಪಡೆಯಲಿದ್ದಾರೆ. ಇದೀಗ 6ನೇ ಸ್ಥಾನದಲ್ಲಿರುವ ಗಿಲ್ ಟೆಸ್ಟ್ ಸರಣಿ ಮುಗಿಯುವ ವೇಳೆಗೆ ಯಾವ ಸ್ಥಾನಕ್ಕೆ ಬರುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

Loading...
Unable to load recommendations.
Follow Us