AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ನಾಯಕನಾಗಿ ವಿದೇಶಿ ನೆಲದಲ್ಲಿ ಮೊದಲ ಸರಣಿ ಗೆದ್ದ ಶುಭ್​ಮನ್ ಗಿಲ್

Shubman Gill captaincy: ಶುಭ್​ಮನ್ ಗಿಲ್ ನಾಯಕತ್ವದಲ್ಲಿ ಭಾರತ ತಂಡ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯನ್ನು 1-0 ಅಂತರದಿಂದ ಗೆದ್ದುಕೊಂಡಿದೆ. ಇದು ಗಿಲ್ ಅವರ ನಾಯಕತ್ವದಲ್ಲಿ ಭಾರತಕ್ಕೆ ದೊರೆತ ಮೊದಲ ವಿದೇಶಿ ಸರಣಿ ಜಯವಾಗಿದೆ. ಗಾಲೆಯಲ್ಲಿ ಮೊದಲ ಟೆಸ್ಟ್ ಗೆದ್ದು, ಕೊಲಂಬೊದಲ್ಲಿ ಎರಡನೇ ಟೆಸ್ಟ್ ಡ್ರಾಗೊಂಡರೂ, ಅಜೇಯ ಓಟ ಮುಂದುವರೆಯಿತು. ಗಿಲ್ ನಾಯಕತ್ವದಲ್ಲಿ ಭಾರತ ಇದುವರೆಗೆ ಟೆಸ್ಟ್ ಸರಣಿಯನ್ನು ಸೋತಿಲ್ಲ.

ಪೃಥ್ವಿಶಂಕರ
|

Updated on: Aug 27, 2026 | 10:26 PM

Share
ಕೊಲಂಬೊದಲ್ಲಿ ನಡೆದ ಭಾರತ ಮತ್ತು ಶ್ರೀಲಂಕಾ ನಡುವಿನ ಎರಡನೇ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿತು. ಆದಾಗ್ಯೂ ಶುಭ್​ಮನ್ ಗಿಲ್ ನಾಯಕತ್ವದಲ್ಲಿ ಟೀಂ ಇಂಡಿಯಾ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 1-0 ಅಂತರದಿಂದ ಗೆದ್ದುಕೊಂಡಿತು. ಈ ಮೂಲಕ ಗಿಲ್, ವಿದೇಶಿ ನೆಲದಲ್ಲಿ ತಮ್ಮ ಮೊದಲ ಸರಣಿ ಗೆದ್ದ ಸಾಧನೆಯನ್ನು ಮಾಡಿದರು(PC-PTI).

1 / 5
ಗಾಲೆಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ 165 ರನ್​ಗಳಿಂದ ಗೆದ್ದುಕೊಂಡಿತ್ತು. ಎರಡನೇ ಟೆಸ್ಟ್​ನಲ್ಲೂ ಟೀಂ ಇಂಡಿಯಾ ಗೆಲುವಿನ ಸನಿಹದಲ್ಲಿತ್ತು. ಆದರೆ ಭಾರತದ ಗೆಲುವಿಗೆ ಲಂಕಾ ತಂಡ ಅವಕಾಶ ಮಾಡಿಕೊಡಲಿಲ್ಲ. ಹೀಗಾಗಿ ಟೀಂ ಇಂಡಿಯಾ 1-0 ಅಂತರದಲ್ಲಿ ಸರಣಿಯನ್ನು ಗೆದ್ದು ಟ್ರೋಫಿಯನ್ನು ಎತ್ತಿಹಿಡಿಯಿತು(PC-PTI).

2 / 5
ಶುಭ್​ಮನ್ ಗಿಲ್ ನಾಯಕತ್ವದಲ್ಲಿ ಇದು ಟೀಂ ಇಂಡಿಯಾದದ ಎರಡನೇ ವಿದೇಶಿ ಸರಣಿಯಾಗಿದೆ 2025 ರಲ್ಲಿ ಭಾರತ ಟೆಸ್ಟ್ ತಂಡದ ನಾಯಕರಾಗಿ ಅಧಿಕಾರ ವಹಿಸಿಕೊಂಡ ಗಿಲ್, ತಮ್ಮ ನಾಯಕತ್ವದಲ್ಲಿ ಮೊದಲಿಗೆ ಇಂಗ್ಲೆಂಡ್ ಪ್ರವಾಸ ಮಾಡಿದ್ದರು. ಆ ಪ್ರವಾಸವನ್ನು ಟೀಂ ಇಂಡಿಯಾ 2-2 ರಿಂದ ಡ್ರಾದಲ್ಲಿ ಕೊನೆಗೊಳಿಸಿತ್ತು(PC-PTI).

3 / 5
ಒಟ್ಟಾರೆಯಾಗಿ, ಗಿಲ್ ನಾಯಕತ್ವದಲ್ಲಿ ಭಾರತ ಇದುವರೆಗೆ ಟೆಸ್ಟ್ ಸರಣಿಯನ್ನು ಸೋತಿಲ್ಲ. ಇಂಗ್ಲೆಂಡ್‌ ಪ್ರವಾಸವನ್ನು 2-2 ರ ಸಮಬಲದೊಂದಿಗೆ ಅಂತ್ಯಗೊಳಿಸಿದ್ದ ಭಾರತ, ವೆಸ್ಟ್ ಇಂಡೀಸ್ ವಿರುದ್ಧದ ತವರು ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿತ್ತು. ನಂತರ ಅಫ್ಘಾನಿಸ್ತಾನ ವಿರುದ್ಧದ ಒಂದೇ ಒಂದು ಟೆಸ್ಟ್ ಪಂದ್ಯವನ್ನು ಗೆದ್ದಿತ್ತು(PC-PTI).

4 / 5
ಇನ್ನು ಈ ಸರಣಿಯಲ್ಲಿ ಶುಭ್​ಮನ್ ಗಿಲ್ ಅವರ ಪ್ರದರ್ಶನವನ್ನು ನೋಡುವುದಾದರೆ.. ಗಾಲೆಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ 16 ರನ್ ಬಾರಿಸಿದರೆ, ಎರಡನೇ ಇನ್ನಿಂಗ್ಸ್​ನಲ್ಲಿ 8 ರನ್​ಗಳಿಗೆ ಸುಸ್ತಾಗಿದ್ದರು. ಕೊಲಂಬೊದಲ್ಲಿ ನಡೆದ ಎರಡನೇ ಟೆಸ್ಟ್​ನ ಮೊದಲ ಇನ್ನಿಂಗ್ಸ್​ನಲ್ಲಿ ಗಿಲ್ 50 ರನ್​ಗಳ ಇನ್ನಿಂಗ್ಸ್ ಆಡಿ ತಂಡ ಬೃಹತ್ ಮೊತ್ತ ಕಲೆಹಾಕುವಲ್ಲಿ ನೆರವಾದರು(PC-PTI).

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಓಂಪ್ರಕಾಶ್ ರಾವ್ ನನ್ನ ಗುರುಗಳು: ‘ಪ್ರೇಮದ ಊರಲಿ’ ಡೈರೆಕ್ಟರ್ ಹೆಮ್ಮೆಯ ಮಾತು

ಇ-ಕೆವೈಸಿ ನೆಪದಲ್ಲಿ ಹಣ ವಸೂಲಿ
ಇ-ಕೆವೈಸಿ ನೆಪದಲ್ಲಿ ಹಣ ವಸೂಲಿ
ಹನೂರಿನ ಇಂಡಿಗನತ್ತ-ಮೆಂದಾರೆ ಗ್ರಾಮಸ್ಥರ ನರಕಯಾತನೆ

‘ಪ್ರೇಮದ ಊರಲಿ’ ನಟಿಯರಿಗೆ ಕನ್ನಡದ ಬಗ್ಗೆ ಸಂಕಲ್ಪ ಮಾಡಿಸಿದ ರಂಗಾಯಣ ರಘು

ಕೊನೆಗೂ ತಾಲೂಕು, ಜಿಲ್ಲಾ ಪಂಚಾಯ್ತಿ ಚುನಾವಣೆಗೆ ಮುಹೂರ್ತ ಫಿಕ್ಸ್

ಜಿಬಿಎ ವ್ಯಾಪ್ತಿಯಲ್ಲಿ ಐದು ನಗರ ಪೊಲೀಸ್ ಕಮಿಷನರೇಟ್‌ಗಳಿಗೆ ಸಂಪುಟ ಅನುಮೋದನೆ

ದಸರಾ, ದೀಪಾವಳಿ ಹೊತ್ತಲ್ಲೇ ಬೆಲೆ ಏರಿಕೆ ಶಾಕ್: ಹಾಲಿನ ದರ 8 ರೂ. ಹೆಚ್ಚಳ

ಕೆಪಿಎಸ್​ಸಿ ಅಕ್ರಮ: ಮಾಜಿ ಅಧ್ಯಕ್ಷ ಶಿವಶಂಕರಪ್ಪ,ಸದಸ್ಯೆ ಗೀತಾ ಇಡಿ ವಶಕ್ಕೆ

ಬಿಗ್​​ಬಾಸ್ ಕನ್ನಡ: ‘ಅಯ್ಯೋ ಉರಿ’ ಕಣ್ಣೀರು ಹಾಕಿದ ಕಿರಣ್ ಶಾಸ್ತ್ರಿ

ನಮ್ಮ್ ಸಿಎಂ ಫೋನ್‌ಗೆ ಸಿಗಲ್ಲ ಎಂದ ಲಕ್ಷ್ಮಿ ಹೆಬ್ಬಾಳ್ಕರ್