
ಕೊಲಂಬೊದಲ್ಲಿ ನಡೆದ ಭಾರತ ಮತ್ತು ಶ್ರೀಲಂಕಾ ನಡುವಿನ ಎರಡನೇ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿತು. ಆದಾಗ್ಯೂ ಶುಭ್ಮನ್ ಗಿಲ್ ನಾಯಕತ್ವದಲ್ಲಿ ಟೀಂ ಇಂಡಿಯಾ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 1-0 ಅಂತರದಿಂದ ಗೆದ್ದುಕೊಂಡಿತು. ಈ ಮೂಲಕ ಗಿಲ್, ವಿದೇಶಿ ನೆಲದಲ್ಲಿ ತಮ್ಮ ಮೊದಲ ಸರಣಿ ಗೆದ್ದ ಸಾಧನೆಯನ್ನು ಮಾಡಿದರು(PC-PTI).
ಗಾಲೆಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ 165 ರನ್ಗಳಿಂದ ಗೆದ್ದುಕೊಂಡಿತ್ತು. ಎರಡನೇ ಟೆಸ್ಟ್ನಲ್ಲೂ ಟೀಂ ಇಂಡಿಯಾ ಗೆಲುವಿನ ಸನಿಹದಲ್ಲಿತ್ತು. ಆದರೆ ಭಾರತದ ಗೆಲುವಿಗೆ ಲಂಕಾ ತಂಡ ಅವಕಾಶ ಮಾಡಿಕೊಡಲಿಲ್ಲ. ಹೀಗಾಗಿ ಟೀಂ ಇಂಡಿಯಾ 1-0 ಅಂತರದಲ್ಲಿ ಸರಣಿಯನ್ನು ಗೆದ್ದು ಟ್ರೋಫಿಯನ್ನು ಎತ್ತಿಹಿಡಿಯಿತು(PC-PTI).
ಶುಭ್ಮನ್ ಗಿಲ್ ನಾಯಕತ್ವದಲ್ಲಿ ಇದು ಟೀಂ ಇಂಡಿಯಾದದ ಎರಡನೇ ವಿದೇಶಿ ಸರಣಿಯಾಗಿದೆ 2025 ರಲ್ಲಿ ಭಾರತ ಟೆಸ್ಟ್ ತಂಡದ ನಾಯಕರಾಗಿ ಅಧಿಕಾರ ವಹಿಸಿಕೊಂಡ ಗಿಲ್, ತಮ್ಮ ನಾಯಕತ್ವದಲ್ಲಿ ಮೊದಲಿಗೆ ಇಂಗ್ಲೆಂಡ್ ಪ್ರವಾಸ ಮಾಡಿದ್ದರು. ಆ ಪ್ರವಾಸವನ್ನು ಟೀಂ ಇಂಡಿಯಾ 2-2 ರಿಂದ ಡ್ರಾದಲ್ಲಿ ಕೊನೆಗೊಳಿಸಿತ್ತು(PC-PTI).
ಒಟ್ಟಾರೆಯಾಗಿ, ಗಿಲ್ ನಾಯಕತ್ವದಲ್ಲಿ ಭಾರತ ಇದುವರೆಗೆ ಟೆಸ್ಟ್ ಸರಣಿಯನ್ನು ಸೋತಿಲ್ಲ. ಇಂಗ್ಲೆಂಡ್ ಪ್ರವಾಸವನ್ನು 2-2 ರ ಸಮಬಲದೊಂದಿಗೆ ಅಂತ್ಯಗೊಳಿಸಿದ್ದ ಭಾರತ, ವೆಸ್ಟ್ ಇಂಡೀಸ್ ವಿರುದ್ಧದ ತವರು ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿತ್ತು. ನಂತರ ಅಫ್ಘಾನಿಸ್ತಾನ ವಿರುದ್ಧದ ಒಂದೇ ಒಂದು ಟೆಸ್ಟ್ ಪಂದ್ಯವನ್ನು ಗೆದ್ದಿತ್ತು(PC-PTI).
ಇನ್ನು ಈ ಸರಣಿಯಲ್ಲಿ ಶುಭ್ಮನ್ ಗಿಲ್ ಅವರ ಪ್ರದರ್ಶನವನ್ನು ನೋಡುವುದಾದರೆ.. ಗಾಲೆಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ 16 ರನ್ ಬಾರಿಸಿದರೆ, ಎರಡನೇ ಇನ್ನಿಂಗ್ಸ್ನಲ್ಲಿ 8 ರನ್ಗಳಿಗೆ ಸುಸ್ತಾಗಿದ್ದರು. ಕೊಲಂಬೊದಲ್ಲಿ ನಡೆದ ಎರಡನೇ ಟೆಸ್ಟ್ನ ಮೊದಲ ಇನ್ನಿಂಗ್ಸ್ನಲ್ಲಿ ಗಿಲ್ 50 ರನ್ಗಳ ಇನ್ನಿಂಗ್ಸ್ ಆಡಿ ತಂಡ ಬೃಹತ್ ಮೊತ್ತ ಕಲೆಹಾಕುವಲ್ಲಿ ನೆರವಾದರು(PC-PTI).