IND vs ENG: ಶುಭ್​ಮನ್ ಗಿಲ್ ಔಟ್: ಸರ್ಫರಾಝ್ ಖಾನ್ ಇನ್..!

India vs England 2nd Test: ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ (209) ಹಾಗೂ ಶುಭ್​ಮನ್ ಗಿಲ್ (104) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಅದರಂತೆ ದ್ವಿತೀಯ ಇನಿಂಗ್ಸ್​ನಲ್ಲಿ ಇಂಗ್ಲೆಂಡ್ ತಂಡಕ್ಕೆ 399 ರನ್​ಗಳ ಗುರಿ ನೀಡಲಾಗಿದ್ದು, ಈ ಗುರಿಯನ್ನು ಬೆನ್ನತ್ತಿರುವ ಸ್ಟೋಕ್ಸ್​ ಪಡೆಗೆ ಇದೀಗ ಟೀಮ್ ಇಂಡಿಯಾ ಬೌಲರ್​ಗಳು ಆಘಾತ ನೀಡಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Feb 05, 2024 | 12:02 PM

ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಿಂದ ಶುಭ್​ಮನ್ ಗಿಲ್ ಹೊರಗುಳಿದಿದ್ದಾರೆ. ಬ್ಯಾಟಿಂಗ್ ವೇಳೆ ಗಿಲ್ ಅವರ ಬಲ ತೋರು ಬೆರಳಿಗೆ ಗಾಯವಾಗಿದ್ದು, ಹೀಗಾಗಿ ನಾಲ್ಕನೇ ದಿನದಾಟದಲ್ಲಿ ಅವರು ಫೀಲ್ಡಿಂಗ್​ಗೆ ಆಗಮಿಸಿರಲಿಲ್ಲ.

1 / 6
ಇತ್ತ ಶುಭ್​ಮನ್ ಗಿಲ್ ಅಲಭ್ಯತೆಯ ನಡುವೆ 12ನೇ ಆಟಗಾರ ಸರ್ಫರಾಝ್ ಖಾನ್ ಮೈದಾನದಲ್ಲಿ ಕಾಣಿಸಿಕೊಂಡಿದ್ದಾರೆ. ಇದೇ ಮೊದಲ ಬಾರಿ ಟೀಮ್ ಇಂಡಿಯಾಗೆ ಆಯ್ಕೆಯಾಗಿರುವ ಸರ್ಫರಾಝ್​ಗೆ ಆಡುವ ಬಳಗದಲ್ಲಿ ಅವಕಾಶ ಸಿಕ್ಕಿರಲಿಲ್ಲ. ಇದೀಗ ಬದಲಿ ಫೀಲ್ಡರ್​ ಆಗಿ ಕಣಕ್ಕಿಳಿದಿದ್ದಾರೆ.

2 / 6
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ (209) ಭರ್ಜರಿ ದ್ವಿಶತಕ ಬಾರಿಸಿ ಮಿಂಚಿದ್ದರು. ಈ ಡಬಲ್ ಸೆಂಚುರಿ ನೆರವಿನಿಂದ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 396 ರನ್ ಕಲೆಹಾಕಿ ಆಲೌಟ್ ಆಗಿತ್ತು.

3 / 6
ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್​ ಆರಂಭಿಸಿದ ಇಂಗ್ಲೆಂಡ್ ತಂಡವು ಜಸ್​ಪ್ರೀತ್ ಬುಮ್ರಾ ಅವರ ಮಾರಕ ದಾಳಿಗೆ ತತ್ತರಿಸಿತು. 15.5 ಓವರ್​ಗಳನ್ನು ಎಸೆದ ಬುಮ್ರಾ ಕೇವಲ 45 ರನ್ ನೀಡಿ 6 ವಿಕೆಟ್ ಕಬಳಿಸಿ ಮಿಂಚಿದರು. ಪರಿಣಾಮ ಇಂಗ್ಲೆಂಡ್ ತಂಡವು 253 ರನ್​ಗಳಿಗೆ ಆಲೌಟ್ ಆಯಿತು.

4 / 6
143 ರನ್​ಗಳ ಮೊದಲ ಇನಿಂಗ್ಸ್​ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಈ ಬಾರಿ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಇದಾಗ್ಯೂ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶುಭ್​ಮನ್ ಗಿಲ್ (104) ಆಕರ್ಷಕ ಶತಕ ಸಿಡಿಸಿ ತಂಡಕ್ಕೆ ಆಸರೆಯಾದರು. ಈ ಶತಕದ ನೆರವಿನಿಂದ ಭಾರತ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ 255 ರನ್​ಗಳಿಸಿ ಆಲೌಟ್ ಆಗಿದೆ.

5 / 6
ಮೊದಲ ಇನಿಂಗ್ಸ್​ ಮುನ್ನಡೆ ಹಾಗೂ ದ್ವಿತೀಯ ಇನಿಂಗ್ಸ್​ನ 255 ರನ್​ಗಳೊಂದಿಗೆ ಇಂಗ್ಲೆಂಡ್ ತಂಡಕ್ಕೆ ಟೀಮ್ ಇಂಡಿಯಾ 399 ರನ್​ಗಳ ಗುರಿ ನೀಡಿದೆ. ಈ ಬೃಹತ್ ಗುರಿಯನ್ನು ಬೆನ್ನತ್ತಿರುವ ಇಂಗ್ಲೆಂಡ್ 4ನೇ ದಿನದಾಟದ ಭೋಜನ ವಿರಾಮದ ವೇಳೆಗೆ 6 ವಿಕೆಟ್ ಕಳೆದುಕೊಂಡು 194 ರನ್ ಕಲೆಹಾಕಿದೆ. ಸದ್ಯ ಕ್ರೀಸ್​ನಲ್ಲಿ ಬೆನ್ ಸ್ಟೋಕ್ಸ್ ಹಾಗೂ ಬೆನ್ ಫೋಕ್ಸ್​ ಬ್ಯಾಟಿಂಗ್ ಮಾಡುತ್ತಿದ್ದಾರೆ.

6 / 6
Follow us
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ

ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ

ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ

70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್

ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್

ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್

ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್