
ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿ ಸೆಪ್ಟೆಂಬರ್ 27 ರಂದು ಆರಂಭವಾಗಲಿದೆ. ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯ ಭಾನುವಾರ ತಿರುವನಂತಪುರದಲ್ಲಿ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಆತಿಥೇಯ ಟೀಂ ಇಂಡಿಯಾಕ್ಕೆ ನಾಯಕ ಶುಭ್ಮನ್ ಗಿಲ್ ಗಾಯದ ರೂಪದಲ್ಲಿ ಆಘಾತ ಎದುರಾಗಿತ್ತು(PC-PTI).
ಶುಕ್ರವಾರ ನಡೆದ ತಂಡದ ಅಭ್ಯಾಸದ ಸಮಯದಲ್ಲಿ ಶುಭ್ಮನ್ ಗಿಲ್ ಗಾಯಗೊಂಡಿದ್ದರು. ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಅವರ ಚೆಂಡು ಗಿಲ್ ಅವರ ಬಲ ಮೊಣಕೈಗೆ ತಗುಲಿತು. ಇದರಿಂದ ತೀವ್ರ ನೋವಿನಿಂದ ಬಳಲಾರಂಭಿಸಿದ ಗಿಲ್, ತಮ್ಮ ಅಭ್ಯಾಸವನ್ನು ಅರ್ಧಕ್ಕೆ ಮೊಟಕುಗೊಳಿಸಿದ್ದರು. ಹೀಗಾಗಿ ಗಿಲ್ ಮೊದಲ ಪಂದ್ಯದಲ್ಲಿ ಆಡುವುದು ಅನುಮಾನ ಎನ್ನಲಾಗುತಿತ್ತು(PC-PTI).
ಶುಬ್‌ಮನ್ ಗಿಲ್ ತಮ್ಮ ಸತತ ಎರಡನೇ ಸರಣಿಗೆ ಮೊದಲು ಗಾಯಕ್ಕೆ ತುತ್ತಾಗಿದ್ದಾರೆ. ಕಳೆದ ತಿಂಗಳು ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಸ್ವಲ್ಪ ಮೊದಲು ಅವರು ನೆಟ್ಸ್‌ನಲ್ಲಿ ತಮ್ಮ ಉಂಗುರದ ಬೆರಳಿಗೆ ಗಾಯ ಮಾಡಿಕೊಂಡಿದ್ದರು. ಆದಾಗ್ಯೂ, ಅವರು ಸಮಯಕ್ಕೆ ಸರಿಯಾಗಿ ಚೇತರಿಸಿಕೊಂಡು ಎರಡೂ ಟೆಸ್ಟ್ ಪಂದ್ಯಗಳನ್ನು ಆಡಿದ್ದರು(PC-PTI).
ಇದೀಗ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೂ ಮುನ್ನ ಗಾಯಕ್ಕೆ ತುತ್ತಾಗಿರುವ ಶುಭ್ಮನ್ ಗಿಲ್ ಲಭ್ಯತೆಯ ಬಗ್ಗೆ ಮಾಹಿತಿ ನೀಡಿದ ತಂಡದ ಬ್ಯಾಟಿಂಗ್ ಕೋಚ್ ಸೀತಾಂಶು ಕೋಟಕ್, ‘ಗಿಲ್ ಚೆನ್ನಾಗಿದ್ದಾರೆ, ಅವರು ಭಾನುವಾರ ನಡೆಯಲಿರುವ ಮೊದಲ ಏಕದಿನ ಪಂದ್ಯದಲ್ಲಿ ಆಡಲು ಸಂಪೂರ್ಣವಾಗಿ ಸಿದ್ಧರಾಗಿದ್ದಾರೆ ಎಂದು ನಾನು ಭಾವಿಸುತ್ತೇನೆ’ ಎಂದಿದ್ದಾರೆ. ಇದರರ್ಥ ಮೊದಲ ಏಕದಿನ ಪಂದ್ಯದಲ್ಲಿ ಗಿಲ್ ಆಡುವುದು ಖಚಿತವಾಗಿದೆ(PC-PTI).
ಭಾರತ ಏಕದಿನ ತಂಡ: ಶುಭ್ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರುತುರಾಜ್ ಗಾಯಕ್ವಾಡ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಪ್ರಸಿದ್ಧ್ ಕೃಷ್ಣ, ಗುರ್ನೂರ್ ಬ್ರಾರ್, ಮೊಹಮ್ಮದ್ ಸಿರಾಜ್, ಔಕಿಬ್ ನಬಿ, ಯಶಸ್ವಿ ಜೈಸ್ವಾಲ್ ಮತ್ತು ನಮನ್ ಧೀರ್(PC-PTI).