- Kannada News Photo gallery Cricket photos Shubman Gill is set to be appointed India's new ODI captain
ಭಾರತ ಏಕದಿನ ತಂಡಕ್ಕೆ ಶುಭ್ಮನ್ ಗಿಲ್ ನಾಯಕ
India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿಯು ಅಕ್ಟೋಬರ್ 19 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಶುಭ್ಮನ್ ಗಿಲ್ ಮುನ್ನಡೆಸಲಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೂಲಕ ಭಾರತ ಟೆಸ್ಟ್ ತಂಡದ ನಾಯಕತ್ವ ವಹಿಸಿಕೊಂಡ ಗಿಲ್, ಇದೀಗ ಏಕದಿನ ತಂಡದ ಕ್ಯಾಪ್ಟನ್ ಆಗಿ ಆಯ್ಕೆಯಾಗಿದ್ದಾರೆ.
Updated on:Oct 04, 2025 | 3:20 PM

India ODI Squad: ಭಾರತ ಏಕದಿನ ತಂಡದ ನಾಯಕನಾಗಿ ಶುಭ್ಮನ್ ಗಿಲ್ (Shubman Gill) ಆಯ್ಕೆಯಾಗಿದ್ದಾರೆ. ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಏಕದಿನ ಸರಣಿ ಮೂಲಕ ಗಿಲ್ ಏಕದಿನ ತಂಡದ ನಾಯಕನಾಗಿ ಪಾದಾರ್ಪಣೆ ಮಾಡಲಿದ್ದಾರೆ.

ಇದರೊಂದಿಗೆ ಏಕದಿನ ಕ್ರಿಕೆಟ್ನಲ್ಲಿ ರೋಹಿತ್ ಶರ್ಮಾ ಅವರ ನಾಯಕತ್ವದ ಯುಗಾಂತ್ಯವಾಗಿದೆ ಎನ್ನಬಹುದು. ಇದಕ್ಕೂ ಮುನ್ನ ಹಿಟ್ಮ್ಯಾನ್ ನಾಯಕತ್ವದಲ್ಲಿ ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಆಡಿತ್ತು. ಇದೀಗ ಟೀಮ್ ಇಂಡಿಯಾದ ನಾಯಕತ್ವ ಬದಲಿಸಲು ಬಿಸಿಸಿಐ ನಿರ್ಧರಿಸಿದೆ.

ಇದಾಗ್ಯೂ ಏಕದಿನ ತಂಡದಲ್ಲಿ ರೋಹಿತ್ ಶರ್ಮಾ ಕಾಣಿಸಿಕೊಂಡಿದ್ದಾರೆ. ಅಂದರೆ ಅಕ್ಟೋಬರ್ 19 ರಿಂದ ಆರಂಭವಾಗಲಿರುವ ಮೂರು ಪಂದ್ಯಗಳ ಸರಣಿಗಾಗಿ ಆಯ್ಕೆ ಮಾಡಲಾಗಿರುವ ಏಕದಿನ ತಂಡದಲ್ಲಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಸ್ಥಾನ ಪಡೆದಿದ್ದಾರೆ.

ಈ ಸರಣಿಯ ಬಳಿಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್ನಲ್ಲಿ ಮುಂದುವರೆಯಲಿದ್ದಾರಾ ಎಂಬುದೇ ಈಗ ಪ್ರಶ್ನೆ. ಏಕೆಂದರೆ ಇಬ್ಬರು ದಿಗ್ಗಜರು ಉತ್ತಮ ಪ್ರದರ್ಶನ ನೀಡಿದರೆ ಮಾತ್ರ ಹಿರಿಯ ಆಟಗಾರರನ್ನು ತಂಡದಲ್ಲಿ ಉಳಿಸಿಕೊಳ್ಳಬಹುದು.

ಏಕೆಂದರೆ 2027ರ ಏಕದಿನ ವಿಶ್ವಕಪ್ ಅನ್ನು ದೃಷ್ಟಿಯಲ್ಲಿಟ್ಟುಕೊಂಡು ತಂಡದ ನಾಯಕತ್ವನ್ನು ಶುಭ್ಮನ್ ಗಿಲ್ಗೆ ನೀಡಲಾಗಿದೆ. ಹೀಗಾಗಿ 38 ವರ್ಷದ ರೋಹಿತ್ ಶರ್ಮಾ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ವಿಫಲರಾದರೆ ಟೀಮ್ ಇಂಡಿಯಾದಿಂದ ಹೊರಬೀಳುವುಸು ಸಹ ಬಹುತೇಕ ಖಚಿತ ಎಂದೇ ಹೇಳಬಹುದು.

ಭಾರತ ಏಕದಿನ ತಂಡ : ಶುಭ್ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಧ್ರುವ್ ಜುರೆಲ್.
Published On - 2:24 pm, Sat, 4 October 25
