AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಕೊಹ್ಲಿ ಹಾದಿಯಲ್ಲಿ ಶುಭ್​ಮನ್; 60 ಎಸೆತಗಳಲ್ಲಿ 129 ರನ್ ಚಚ್ಚಿದ ಗಿಲ್ ಬರೆದ ದಾಖಲೆಗಳಿವು

IPL 2023: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ರನ್​ಗಳ ಸುನಾಮಿ ಎಬ್ಬಿಸಿದ ಗುಜರಾತ್ ಬ್ಯಾಟರ್ ಶುಭ್​ಮನ್ ಗಿಲ್ ಸಿಡಿಲಬ್ಬರದ ಶತಕ ಸಿಡಿಸಿ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ.

ಪೃಥ್ವಿಶಂಕರ
|

Updated on:May 26, 2023 | 10:46 PM

Share
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ರನ್​ಗಳ ಸುನಾಮಿ ಎಬ್ಬಿಸಿದ ಗುಜರಾತ್ ಬ್ಯಾಟರ್ ಶುಭ್​ಮನ್ ಗಿಲ್ ಸಿಡಿಲಬ್ಬರದ ಶತಕ ಸಿಡಿಸಿ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ.

1 / 7
ತಮ್ಮ ಇನ್ನಿಂಗ್ಸ್​ನಲ್ಲಿ 60 ಎಸೆತಗಳನ್ನು ಎದುರಿಸಿದ ಗಿಲ್ 7 ಬೌಂಡರಿ ಹಾಗೂ 10 ಭರ್ಜರಿ ಸಿಕ್ಸರ್​ನೊಂದಿಗೆ 129 ರನ್ ಬಾರಿಸಿದರು. ಇದರೊಂದಿಗೆ ಈ ಆವೃತ್ತಿಯ ಆರೆಂಜ್ ಕ್ಯಾಪ್​ ಹೋಲ್ಡರ್ ಎನಿಸಿಕೊಂಡಿದ್ದಾರೆ.

2 / 7
ಐದು ಬಾರಿಯ ಚಾಂಪಿಯನ್ ಮುಂಬೈ ವಿರುದ್ಧ ಮನಮೋಹಕ ಶತಕ ಬಾರಿಸಿದ ಗಿಲ್ ಆಟಕ್ಕೆ ಮನಸೋತ ಮುಂಬೈ ನಾಯಕ ರೋಹಿತ್, ಗಿಲ್ ಶತಕದ ಬಳಿಕ ಅವರ ಕೈಕುಲುಕಿ ಅಭಿನಂಧಿಸಿದರು.

3 / 7
ಈ ಆವೃತ್ತಿಯ ಕಳೆದ 4 ಪಂದ್ಯಗಳಲ್ಲಿ 3 ಶತಕ ಬಾರಿಸಿರುವ ಗಿಲ್ 2016 ರಲ್ಲಿ ನಾಲ್ಕು ಶತಕಗಳನ್ನು ಸಿಡಿಸಿದ ಕೊಹ್ಲಿಯ ದಾಖಲೆಯನ್ನು ಸರಿಗಟ್ಟಲು ಇನ್ನೊಂದು ಶತಕ ಹಿಂದಿದ್ದಾರೆ. ಅಲ್ಲದೆ ಕೊಹ್ಲಿ ನಂತರ ಒಂದು ಆವೃತ್ತಿಯಲ್ಲಿ ಮೂರು ಅಥವಾ ಅದಕ್ಕಿಂತ ಹೆಚ್ಚು ಶತಕಗಳನ್ನು ಬಾರಿಸಿದ ಎರಡನೇ ಭಾರತೀಯ ಎಂಬ ಖ್ಯಾತಿಗೆ ಗಿಲ್ ಪಾತ್ರರಾಗಿದ್ದಾರೆ.

4 / 7
ಇನ್ನು ಒಟ್ಟಾರೆಯಾಗಿ ನೋಡುವುದಾದರೆ, ಭಾರತೀಯನಾಗಿ ಕೊಹ್ಲಿ 4 ಶತಕ ಸಿಡಿಸಿದ್ದರೆ, ವಿದೇಶಿ ಆಟಗಾರನಾಗಿ 2022 ರ ಆವೃತ್ತಿಯಲ್ಲಿ ನಾಲ್ಕು ಶತಕ ಬಾರಿಸಿದ್ದ ಜೋಸ್ ಬಟ್ಲರ್ 2ನೇ ಸ್ಥಾನದಲ್ಲಿದ್ದಾರೆ. ಆ ನಂತರ ಒಂದು ಆವೃತ್ತಿಯಲ್ಲಿ ಅಧಿಕ ಶತಕ ಬಾರಿಸಿದ ಮೂರನೇ ಬ್ಯಾಟರ್ ಆಗಿ ಗಿಲ್ ಹೊರಹೊಮ್ಮಿದ್ದಾರೆ.

5 / 7
ಹಾಗೆಯೇ ಒಂದು ಆವೃತ್ತಿಯಲ್ಲಿ ಅತ್ಯಧಿಕ ರನ್ ಬಾರಿಸಿದ ಎರಡನೇ ಭಾರತೀಯ ಎಂಬ ದಾಖಲೆಯನ್ನು ಗಿಲ್ ಬರೆದಿದ್ದಾರೆ. ಈ ಹಿಂದೆ 2016 ರ ಆವೃತ್ತಿಯಲ್ಲಿ ಕಿಂಗ್ ಕೊಹ್ಲಿ ಆರ್​ಸಿಬಿ ಪರ 973 ರನ್ ಬಾರಿಸಿ ಒಂದು ಆವೃತ್ತಿಯಲ್ಲಿ ಅತು ಹೆಚ್ಚು ರನ್ ಬಾರಿಸಿದವರಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

6 / 7
ಒಟ್ಟಾರೆಯಾಗಿ ನೋಡುವುದಾದರೆ 973 ರನ್​ಗಳೊಂದಿಗೆ ಕೊಹ್ಲಿ ಮೊದಲ ಸ್ಥಾನದಲ್ಲಿದ್ದರೆ, ಜೋಸ್ ಬಟ್ಲರ್ 863 ರನ್​ಗಳೊಂದಿಗೆ ಎರಡನೇ ಸ್ಥಾನದ್ದಾರೆ. ಇದೀಗ ಈ ಪಟ್ಟಿಯಲ್ಲಿ ಗಿಲ್ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ.

7 / 7

Published On - 10:40 pm, Fri, 26 May 23

ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ

ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್

‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ

ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’

ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್

ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು

ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್

ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು

ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್

RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ