Shubman Gill: ಶುಭ್​ಮನ್ ಗಿಲ್​ಗೆ ಟೀಮ್ ಇಂಡಿಯಾ ನಾಯಕತ್ವ..?

|

Updated on: Jun 24, 2024 | 2:52 PM

India tour of Zimbabwe: ಭಾರತ ಮತ್ತು ಝಿಂಬಾಬ್ವೆ ನಡುವಣ ಟಿ20 ಸರಣಿಯು ಜುಲೈ 6 ರಿಂದ ಶುರುವಾಗಲಿದೆ. ಹರಾರೆಯಲ್ಲಿ ನಡೆಯಲಿರುವ 5 ಪಂದ್ಯಗಳ ಈ ಸರಣಿಯ ಮೊದಲೆರಡು ಪಂದ್ಯಗಳು ಜುಲೈ 6 ಮತ್ತು ಜುಲೈ 7 ರಂದು ನಡೆಯಲಿದೆ. ಇನ್ನು ಮೂರನೇ ಪಂದ್ಯವು ಜುಲೈ 10 ರಂದು ನಡೆದರೆ, ಕೊನೆಯ ಎರಡು ಪಂದ್ಯಗಳು ಜುಲೈ 13 ಮತ್ತು 14 ರಂದು ಜರುಗಲಿದೆ.

1 / 5
T20 World Cup 2024: ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಭಾರತ ತಂಡವು ಝಿಂಬಾಬ್ವೆ ವಿರುದ್ಧ ಸರಣಿ ಆಡಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಶುಭ್​ಮನ್ ಗಿಲ್ (Shubman Gill) ಮುನ್ನಡೆಸಲಿದ್ದಾರೆ ಎಂದು ವರದಿಯಾಗಿದೆ. ವಿಶ್ವಕಪ್ ಮುಕ್ತಾಯದ ಬಳಿಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಸೇರಿದಂತೆ ಪ್ರಮುಖ ಆಟಗಾರರು ವಿಶ್ರಾಂತಿ ಪಡೆಯುವ ಸಾಧ್ಯತೆಯಿದೆ.

2 / 5
ಹೀಗಾಗಿ ಝಿಂಬಾಬ್ವೆ ವಿರುದ್ಧದ ಟಿ20 ಸರಣಿಗೆ ಯುವ ಪಡೆಯನ್ನು ಆಯ್ಕೆ ಮಾಡಲು ಬಿಸಿಸಿಐ ನಿರ್ಧರಿಸಿದ್ದು, ಅದರಂತೆ ತಂಡದ ಸಾರಥ್ಯವನ್ನು ಶುಭ್​ಮನ್ ಗಿಲ್​ಗೆ ವಹಿಸುವ ಸಾಧ್ಯತೆಯಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

3 / 5
ಭಾರತ ಮತ್ತು ಝಿಂಬಾಬ್ವೆ ನಡುವಣ ಟಿ20 ಸರಣಿಯು ಜುಲೈ 6 ರಿಂದ ಶುರುವಾಗಲಿದೆ. ಜುಲೈ 14 ರವರೆಗೆ ನಡೆಯಲಿರುವ ಈ ಸರಣಿಯಲ್ಲಿ ಒಟ್ಟು 5 ಪಂದ್ಯಗಳನ್ನಾಡಲಾಗುತ್ತದೆ. ಈ ಸರಣಿಯ ಬಳಿಕ ಭಾರತ ಮತ್ತು ಶ್ರೀಲಂಕಾ ನಡುವಣ 6 ಪಂದ್ಯಗಳ ಸೀಮಿತ ಓವರ್​ಗಳ ಸರಣಿ ನಡೆಯಲಿದೆ.

4 / 5
ಹೀಗಾಗಿ ಝಿಂಬಾಬ್ವೆ ವಿರುದ್ಧದ ಸರಣಿಯಿಂದ ಹಿರಿಯ ಆಟಗಾರರು ಹೊರಗುಳಿಯುವುದು ಬಹುತೇಕ ಖಚಿತ ಎನ್ನಬಹುದು. ಅಲ್ಲದೆ ಯುವ ಆಟಗಾರರಾದ ಅಭಿಷೇಕ್ ಶರ್ಮಾ, ರಿಯಾನ್ ಪರಾಗ್, ಮಯಾಂಕ್ ಯಾದವ್​ಗೆ ಝಿಂಬಾಬ್ವೆ ಸರಣಿಯಲ್ಲಿ ಚಾನ್ಸ್ ಸಿಗಲಿದೆ ಎಂದು ವರದಿಯಾಗಿದೆ.

5 / 5
ಈ ಯುವ ಪಡೆಯನ್ನು ಶುಭ್​ಮನ್ ಗಿಲ್ ಮುನ್ನಡೆಸುವ ಸಾಧ್ಯತೆಯಿದ್ದು, ಈ ಮೂಲಕ ಗಿಲ್ ಭಾರತ ತಂಡದ ಹೊಸ ನಾಯಕನಾಗಿ ಇನಿಂಗ್ಸ್ ಆರಂಭಿಸಬಹುದು. ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮುನ್ನಡೆಸಿರುವ ಅನುಭವ ಹೊಂದಿರುವ ಶುಭ್​ಮನ್ ಗಿಲ್ ಈ ಬಾರಿಯ ಟಿ20 ವಿಶ್ವಕಪ್​ಗೆ ಮೀಸಲು ಆಟಗಾರನಾಗಿ ಆಯ್ಕೆಯಾಗಿದ್ದರು. ಇದೀಗ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ಗಿಲ್​ಗೆ ನಾಯಕತ್ವ ನೀಡಲು ಬಿಸಿಸಿಐ ಮುಂದಾಗಿರುವುದು ವಿಶೇಷ.