AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ವರ್ಷದವರೆಗೆ ಶುಭ್​ಮನ್ ಗಿಲ್ ತಂಡದಿಂದ ಔಟ್..!

Shubman Gill: ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ವೇಳೆ ಕುತ್ತಿಗೆಯ ಸ್ನಾಯು ಸೆಳೆತಕ್ಕೆ ಒಳಗಾಗಿದ್ದ ಶುಭ್​ಮನ್ ಗಿಲ್ ಅವರ ವೈದ್ಯಕೀಯ ವರದಿಗಳು ಇದೀಗ ಬಿಸಿಸಿಐ ಆಯ್ಕೆ ಸಮಿತಿ ಕೈ ಸೇರಿದೆ. ಈ ವರದಿಯಲ್ಲಿ ಅವರಿಗೆ ನರಗಳ ಸೆಳೆತವಿರುವುದನ್ನು ಪ್ರಸ್ತಾಪಿಸಲಾಗಿದ್ದು, ಹೀಗಾಗಿ ಕನಿಷ್ಠ 1 ತಿಂಗಳುಗಳ ಕಾಲ ವಿಶ್ರಾಂತಿ ನೀಡುವಂತೆ ಸೂಚಿಸಲಾಗಿದೆ ಎಂದು ವರದಿಯಾಗಿದೆ.

ಝಾಹಿರ್ ಯೂಸುಫ್
|

Updated on:Nov 23, 2025 | 12:58 PM

Share
ಭಾರತ ತಂಡದ ನಾಯಕ ಶುಭ್​​ಮನ್ ಗಿಲ್ (Shubman Gill) ಮತ್ತೆ ಕಣಕ್ಕಿಳಿಯಲು ಮುಂದಿನ ವರ್ಷದವರೆಗೆ ಕಾಯಬೇಕಿದೆ. ಏಕೆಂದರೆ ಗಿಲ್ ನರಗಳ ಸೆಳೆತದ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ವೈದ್ಯರು ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದಾರೆ ಎಂದು ವರದಿಯಾಗಿದೆ.

1 / 5
ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನ ಬ್ಯಾಟಿಂಗ್ ವೇಳೆ ಶುಭ್​​ಮನ್ ಗಿಲ್ ಅವರು ಕುತ್ತಿಗೆ ನೋವಿನ ಸಮಸ್ಯೆಗೀಡಾಗಿದ್ದರು. ಹೀಗಾಗಿ ಅರ್ಧದಲ್ಲೇ ಬ್ಯಾಟಿಂಗ್ ನಿಲ್ಲಿಸಿ ಮೈದಾನ ತೊರೆದಿದ್ದರು.

2 / 5
ಇದಾದ ಬಳಿಕ ಕೊಲ್ಕತ್ತಾದ ಆಸ್ಪತ್ರೆಗೆ ದಾಖಲಾಗಿದ್ದ ಶುಭ್​​ಮನ್ ಗಿಲ್ ಅವರ ಸ್ಕ್ಯಾನಿಂಗ್ ರಿಪೋರ್ಟ್​ನಲ್ಲಿ ನರಗಳಲ್ಲಿ ಸೆಳೆತವಿರುವುದು ಕಂಡು ಬಂದಿದೆ. ಅಲ್ಲಿ ಚಿಕಿತ್ಸೆ ಪಡೆದ ಬಳಿಕ ಗಿಲ್ ಮುಂಬೈನ ಖ್ಯಾತ ವೈದ್ಯ ಡಾ. ಅಭಯ್ ನೇನೆ ಅವರನ್ನು ಸಂಪರ್ಕಿಸಿದ್ದಾರೆ ಎಂದು ತಿಳಿದು ಬಂದಿದೆ. 

3 / 5
ಅಭಯ್ ನೇನೆ ಅವರು ಕೂಡ ಶುಭ್​​ಮನ್ ಗಿಲ್ ಅವರು ನರಗಳ ಸೆಳೆತದಿಂದ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದಾರೆ ಎಂದು ವರದಿಯಾಗಿದೆ. ಅದರಂತೆ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಹಾಗೂ ಟಿ20 ಸರಣಿಗಳಿಂದ ಗಿಲ್ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ.

4 / 5
ಅಲ್ಲದೆ ಮುಂದಿನ ವರ್ಷ ಜನವರಿ 11 ರಿಂದ ಶುರುವಾಗಲಿರುವ ನ್ಯೂಝಿಲೆಂಡ್ ವಿರುದ್ಧದದ ಸರಣಿಯ ಮೂಲಕ ಶುಭ್​​ಮನ್ ಗಿಲ್ ಮತ್ತೆ ಮರಳುವ ಸಾಧ್ಯತೆಯಿದೆ. ಅಲ್ಲಿಯವರೆಗೆ ಭಾರತ ತಂಡದಿಂದ ಗಿಲ್ ಹೊರಗುಳಿಯುವುದು ಬಹುತೇಕ ಖಚಿತ ಎಂದೇ ಹೇಳಬಹುದು.

5 / 5

Published On - 12:54 pm, Sun, 23 November 25