AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ 27 ರನ್ ಗಳಿಂದ ವಿಶ್ವ ದಾಖಲೆ ತಪ್ಪಿಸಿಕೊಂಡ ಗಿಲ್

England vs India, 2nd Test: ಭಾರತ ಮತ್ತು ಇಂಗ್ಲೆಂಡ್ ನಡುವಣ 2ನೇ ಟೆಸ್ಟ ಪಂದ್ಯವು ಅಂತಿಮ ದಿನದಾಟಕ್ಕೆ ಕಾಲಿಟ್ಟಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ   ಪ್ರಥಮ ಇನಿಂಗ್ಸ್​ನಲ್ಲಿ 587 ರನ್​ ಕಲೆಹಾಕಿದರೆ, ಇಂಗ್ಲೆಂಡ್ 407 ರನ್​ಗಳಿಸಿ ಆಲೌಟ್ ಆಯಿತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ 427 ರನ್​ಗಳಿಸಿ ಟೀಮ್ ಇಂಡಿಯಾ ಡಿಕ್ಲೇರ್ ಘೋಷಿಸಿದೆ. ಅದರಂತೆ ಕೊನೆಯ ಇನಿಂಗ್ಸ್​ನಲ್ಲಿ ಇಂಗ್ಲೆಂಡ್​ ತಂಡವು 608 ರನ್​ಗಳ ಗುರಿ ಪಡೆದುಕೊಂಡಿದೆ.

ಝಾಹಿರ್ ಯೂಸುಫ್
|

Updated on: Jul 06, 2025 | 12:55 PM

Share
ಎಡ್ಜ್​ಬಾಸ್ಟನ್​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್​ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ಶುಭ್​ಮನ್ ಗಿಲ್ (Shubman Gill) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 269 ರನ್ ಬಾರಿಸಿದ್ದ ಗಿಲ್, ದ್ವಿತೀಯ ಇನಿಂಗ್ಸ್​ನಲ್ಲಿ 161 ರನ್​ ಕಲೆಹಾಕಿ ಮಿಂಚಿದ್ದಾರೆ. ಈ ಮೂಲಕ ಒಂದೇ ಪಂದ್ಯದಲ್ಲಿ ಬರೋಬ್ಬರಿ 430 ರನ್​ಗಳಿಸಿದ್ದಾರೆ.

1 / 5
ಇತ್ತ ಒಂದೇ ಪಂದ್ಯದಲ್ಲಿ 430 ರನ್​ ಕಲೆಹಾಕಿದರೂ, ಟೆಸ್ಟ್ ಕ್ರಿಕೆಟ್​ನಲ್ಲಿ ವಿಶ್ವ ದಾಖಲೆಯೊಂದನ್ನು ಬರೆಯುವ ಅವಕಾಶವೊಂದನ್ನು ಶುಭ್​ಮನ್ ಗಿಲ್ ತಪ್ಪಿಸಿಕೊಂಡರು. ಅದು ಕೂಡ ಕೇವಲ 27 ರನ್​ಗಳಿಂದ. ಅಂದರೆ ಟೆಸ್ಟ್ ಪಂದ್ಯವೊಂದರಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ವಿಶ್ವ ದಾಖಲೆ ಗ್ರಹಾಂ ಗೂಚ್ ಹೆಸರಿನಲ್ಲಿದೆ.

2 / 5
1990 ರಲ್ಲಿ ಲಂಡನ್​ನ ಲಾರ್ಡ್ಸ್​ ಮೈದಾನದಲ್ಲಿ ನಡೆದ ಭಾರತದ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ನಾಯಕ ಗ್ರಹಾಂ ಗೂಚ್ ಮೊದಲ ಇನಿಂಗ್ಸ್​ನಲ್ಲಿ 333 ರನ್ ಬಾರಿಸಿದ್ದರು. ಅಲ್ಲದೆ ದ್ವಿತೀಯ ಇನಿಂಗ್ಸ್​ನಲ್ಲಿ 123 ರನ್ ಕಲೆಹಾಕಿದ್ದರು. ಈ ಮೂಲಕ ಒಂದೇ ಪಂದ್ಯದಲ್ಲಿ 456 ರನ್​ಗಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು.

3 / 5
ಇತ್ತ ಶುಭ್​ಮನ್ ಗಿಲ್ ಮೊದಲ ಇನಿಂಗ್ಸ್​ನಲ್ಲಿ 269 ರನ್ ಹಾಗೂ ದ್ವಿತೀಯ ಇನಿಂಗ್ಸ್​ನಲ್ಲಿ 161 ರನ್​ಗಳಿಸಿ ಈ ವಿಶ್ವ ದಾಖಲೆಯ ಸಮೀಪಕ್ಕೆ ತಲುಪಿದ್ದರು. ಆದರೆ ದ್ವಿತೀಯ ಇನಿಂಗ್ಸ್​ನಲ್ಲಿ 161 ರನ್​ಗಳಿಸಿ ಔಟಾದರು. ಇದರೊಂದಿಗೆ ಶುಭ್​ಮನ್ ಗಿಲ್ ಅವರ ವೈಯುಕ್ತಿಕ ಸ್ಕೋರ್  430 ರನ್​ಗಳೊಂದಿಗೆ ಅಂತ್ಯಗೊಂಡಿತು.

4 / 5
ಒಂದು ವೇಳೆ ದ್ವಿತೀಯ ಇನಿಂಗ್ಸ್​ನಲ್ಲಿ ಶುಭ್​ಮನ್ ಗಿಲ್ ಹೆಚ್ಚುವರಿ 27 ರನ್​ ಕಲೆಹಾಕಿದ್ದರೆ, ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಪಂದ್ಯವೊಂದರಲ್ಲಿ ಅತ್ಯಧಿಕ ರನ್​ಗಳಿಸಿದ ಗ್ರಹಾಂ ಗೂಚ್ (456) ಅವರ ವಿಶ್ವ ದಾಖಲೆಯನ್ನು ಮುರಿಯಬಹುದಿತ್ತು. ಆದರೆ ಈ ದಾಖಲೆಯನ್ನು ತಪ್ಪಿಸಿಕೊಂಡ ಗಿಲ್, ಟೆಸ್ಟ್ ಪಂದ್ಯವೊಂದರಲ್ಲಿ ಅತೀ ಹೆಚ್ಚು ರನ್​ಗಳಿಸಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 5
Follow Us
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್

ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ

ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​

ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್

ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್

ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್

ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ

‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ

ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ

1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು