- TV9 Kannada Photo gallery Cricket photos Shubman Gill No. 1 ODI Batsman: Tops ICC Rankings after Stellar Performance
ICC ODI Ranking: ಏಕದಿನದಲ್ಲಿ ಪ್ರಿನ್ಸ್ ಶುಭ್ಮನ್ ಗಿಲ್ಗೆ ನಂ.1 ಕಿರೀಟ
Shubman Gill No. 1 ODI Batsman: ಅಫ್ಘಾನಿಸ್ತಾನ ಹಾಗೂ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ ಟೀಂ ಇಂಡಿಯಾ ನಾಯಕ ಶುಭ್ಮನ್ ಗಿಲ್ ಇದೀಗ ಐಸಿಸಿ ಏಕದಿನ ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. 801 ಅಂಕಗಳೊಂದಿಗೆ ವಿಶ್ವದ ನಂಬರ್ 1 ಬ್ಯಾಟ್ಸ್‌ಮನ್ ಆಗಿರುವ ಗಿಲ್, ಕಳೆದ ನಾಲ್ಕು ಇನ್ನಿಂಗ್ಸ್‌ಗಳಲ್ಲಿ ಎರಡು ಅರ್ಧಶತಕ ಹಾಗೂ ಒಂದು ಶತಕ ಸಿಡಿಸಿ ಮಿಂಚಿದ್ದಾರೆ. ಅವರ ಅತ್ಯುತ್ತಮ ಪ್ರದರ್ಶನ ಈ ಗರಿಮೆಗೆ ಕಾರಣವಾಗಿದೆ.
Updated on:Jul 29, 2026 | 3:28 PM

ಅಫ್ಘಾನಿಸ್ತಾನ ಹಾಗೂ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಟೀಂ ಇಂಡಿಯಾ ನಾಯಕ ಶುಭ್ಮನ್ ಗಿಲ್ ಏಕದಿನ ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಕಳೆದ ವಾರ ಕೇವಲ 1 ಪಾಯಿಂಟ್ನಿಂದ ಅಗ್ರಸ್ಥಾನದಿಂದ ವಂಚಿತರಾಗಿದ್ದ ಗಿಲ್, ಈ ವಾರ ಅಗ್ರಸ್ಥಾನವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ(PC-PTI).

ಕಳೆದ ನಾಲ್ಕು ಏಕದಿನ ಇನ್ನಿಂಗ್ಸ್‌ಗಳಲ್ಲಿ ಗಿಲ್ ಎರಡು ಅರ್ಧಶತಕ ಮತ್ತು ಒಂದು ಶತಕ ಬಾರಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳಲ್ಲಿ ಗಿಲ್ 188 ರನ್ ಕಲೆಹಾಕಿದ್ದರು. ಈ ವರ್ಷ, ಶುಭ್ಮನ್ ಗಿಲ್ 142 ಸರಾಸರಿಯಲ್ಲಿ 426 ರನ್ ಗಳಿಸಿದ್ದಾರೆ, ಸ್ಟ್ರೈಕ್ ರೇಟ್ 116.71 ಆಗಿದೆ. ಏಕದಿನ ವೃತ್ತಿಜೀವನದಲ್ಲಿ ಗಿಲ್ 60.33 ಸರಾಸರಿಯಲ್ಲಿ 3,379 ರನ್‌ಗಳನ್ನು ಗಳಿಸಿದ್ದಾರೆ. ಈ ಅಂಕಿಅಂಶಗಳೇ ಏಕದಿನ ಸ್ವರೂಪದಲ್ಲಿ ಗಿಲ್ನ ಅಗ್ರಸ್ಥಾನಕ್ಕೇರಿಸಿವೆ(PC-PTI).

ಶುಭ್ಮನ್ ಗಿಲ್ 801 ಪಾಯಿಂಟ್‌ಗಳೊಂದಿಗೆ ಅಗ್ರಸ್ಥಾನಕ್ಕೇರಿದರೆ, ಇಷ್ಟು ದಿನ ಅಗ್ರಸ್ಥಾನದಲ್ಲಿದ್ದ ನ್ಯೂಜಿಲೆಂಡ್ ಬ್ಯಾಟ್ಸ್‌ಮನ್ ಡ್ಯಾರಿಲ್ ಮಿಚೆಲ್ 794 ಅಂಕಗಳೊಂದಿಗೆ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ. ಇಬ್ಬರ ನಡುವೆ 7 ಅಂಕಗಳ ಅಂತರವಿದೆ. ಉಳಿದಂತೆ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿ ಮುಂದುವರೆದಿದ್ದಾರೆ(PC-PTI).

ವಿರಾಟ್ ಕೊಹ್ಲಿ 767 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, ರೋಹಿತ್ ಶರ್ಮಾ 758 ರೇಟಿಂಗ್ ಪಾಯಿಂಟ್‌ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ. ಇಬ್ರಾಹಿಂ ಜದ್ರಾನ್ 712 ರೇಟಿಂಗ್‌ನೊಂದಿಗೆ ಐದನೇ ಸ್ಥಾನದಲ್ಲಿದ್ದು, ಬಾಬರ್ ಆಝಂ 689 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಆರನೇ ಸ್ಥಾನದಲ್ಲಿದ್ದಾರೆ. ಜೋ ರೂಟ್ 674 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಈ ಶ್ರೇಯಾಂಕದಲ್ಲಿ 8 ನೇ ಸ್ಥಾನದಲ್ಲಿದ್ದಾರೆ(PC-PTI).

ಇನ್ನು ಟೆಸ್ಟ್ ಬ್ಯಾಟಿಂಗ್ ಶ್ರೇಯಾಂಕದ ಬಗ್ಗೆ ಹೇಳುವುದಾದರೆ, ಟಾಪ್ -10 ಬ್ಯಾಟ್ಸ್‌ಮನ್‌ಗಳಲ್ಲಿ ಕೇವಲ ಇಬ್ಬರು ಭಾರತೀಯರು ಮಾತ್ರ ಇದ್ದಾರೆ. ಭಾರತದ ನಾಯಕ ಶುಭ್ಮನ್ ಗಿಲ್ ಪ್ರಸ್ತುತ 7 ನೇ ಸ್ಥಾನದಲ್ಲಿದ್ದರೆ, ಯಶಸ್ವಿ ಜೈಸ್ವಾಲ್ 9 ನೇ ಸ್ಥಾನದಲ್ಲಿದ್ದಾರೆ. ಗಿಲ್ ಪ್ರಸ್ತುತ 743 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿದ್ದರೆ, ಯಶಸ್ವಿ 733 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿದ್ದಾರೆ(PC-PTI).
Published On - 3:27 pm, Wed, 29 July 26




