AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN: ಒಂದೇ ಪಂದ್ಯದಲ್ಲಿ ಲಾರಾ, ಗವಾಸ್ಕರ್, ಕೊಹ್ಲಿಯಂತಹ ದಿಗ್ಗಜರ ದಾಖಲೆ ಮುರಿದ ಗಿಲ್

Shubman Gill: ಶುಭ್ಮನ್ ಗಿಲ್ ಇಂಗ್ಲೆಂಡ್ ವಿರುದ್ಧದ ಎಡ್ಜ್‌ಬಾಸ್ಟನ್ ಟೆಸ್ಟ್ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಎರಡೂ ಇನ್ನಿಂಗ್ಸ್‌ಗಳಲ್ಲಿ ಶತಕ ಮತ್ತು ದ್ವಿಶತಕ ಗಳಿಸಿ, ಒಟ್ಟು 400 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಇದರಿಂದ ಅನೇಕ ಹೊಸ ದಾಖಲೆಗಳನ್ನು ನಿರ್ಮಿಸಿದ್ದಾರೆ. ಭಾರತದ ನಾಯಕನಾಗಿ ಮೊದಲ ಟೆಸ್ಟ್ ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನೂ ಅವರು ಸೃಷ್ಟಿಸಿದ್ದಾರೆ.

ಪೃಥ್ವಿಶಂಕರ
|

Updated on: Jul 05, 2025 | 10:02 PM

Share
ಭಾರತ ಟೆಸ್ಟ್ ತಂಡದ ನೂತನ ನಾಯಕನಾಗಿ ಆಯ್ಕೆಯಾಗಿರುವ ಶುಭ್​ಮನ್ ಗಿಲ್ ಇಂಗ್ಲೆಂಡ್‌ ಪ್ರವಾಸವನ್ನು ಸ್ಮರಣೀಯಗೊಳಿಸುತ್ತಿದ್ದಾರೆ. ಲೀಡ್ಸ್​ ಟೆಸ್ಟ್‌ನಲ್ಲಿ ಶತಕ ಬಾರಿಸಿದ್ದ ಗಿಲ್, ಇದೀಗ ಎಡ್ಜ್‌ಬಾಸ್ಟನ್ ಟೆಸ್ಟ್‌ನಲ್ಲಿಯೂ ದ್ವಿಶತಕ ಹಾಗೂ ಶತಕ ಬಾರಿಸಿ ಹಲವಾರು ದಾಖಲೆಗಳನ್ನು ನಿರ್ಮಿಸಿದ್ದಾರೆ.

1 / 7
ಎಡ್ಜ್‌ಬಾಸ್ಟನ್ ಟೆಸ್ಟ್ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ ಗಿಲ್ ಅದ್ಭುತ ಪ್ರದರ್ಶನ ನೀಡಿ ತಮ್ಮ ಹೆಸರಿನಲ್ಲಿ ಅನೇಕ ದೊಡ್ಡ ದಾಖಲೆಗಳನ್ನು ನಿರ್ಮಿಸಿದ್ದಾರೆ. ಈ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 269 ರನ್ ಬಾರಿಸಿದ್ದ ಗಿಲ್, ಇದೀಗ ಎರಡನೇ ಇನ್ನಿಂಗ್ಸ್‌ನಲ್ಲಿ 161 ರನ್​ಗಳ ಇನ್ನಿಂಗ್ಸ್ ಆಡಿದ್ದಾರೆ.

2 / 7
ಇದರೊಂದಿಗೆ ಗಿಲ್ ಟೆಸ್ಟ್ ಪಂದ್ಯವೊಂದರಲ್ಲಿ ದ್ವಿಶತಕ ಮತ್ತು ಶತಕ ಗಳಿಸಿದ ವಿಶ್ವದ 9 ನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಅಲ್ಲದೆ ಭಾರತದ ಪರ ಈ ಸಾಧನೆ ಮಾಡಿದ ಎರಡನೇ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಗಿಲ್​ಗಿಂತ ಮೊದಲು, ಸುನಿಲ್ ಗವಾಸ್ಕರ್ 1971 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಈ ಸಾಧನೆ ಮಾಡಿದ್ದರು.

3 / 7
ಈ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ ಶುಭ​​ಮನ್ ಗಿಲ್ 400 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಇದರೊಂದಿಗೆ, ಗಿಲ್ ಟೆಸ್ಟ್‌ ಪಂದ್ಯವೊಂದರಲ್ಲಿ ಇಷ್ಟು ರನ್ ಗಳಿಸಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದಕ್ಕೂ ಮೊದಲು ಈ ದಾಖಲೆ ಸುನಿಲ್ ಗವಾಸ್ಕರ್ ಹೆಸರಿನಲ್ಲಿತ್ತು. 1971 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್‌ನಲ್ಲಿ ಅವರು 344 ರನ್ ಸಿಡಿಸಿದ್ದರು.

4 / 7
ಈ ಪಂದ್ಯದ ಎರಡೂ ಇನ್ನಿಂಗ್ಸ್​ಗಳನ್ನು ಸೇರಿ ಒಟ್ಟು 430 ರನ್ ಕಲೆಹಾಕಿರುವ ಗಿಲ್, ಟೆಸ್ಟ್ ಪಂದ್ಯವೊಂದರಲ್ಲಿ ಅತ್ಯಧಿಕ ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ವೆಸ್ಟ್​ ಇಂಡೀಸ್​ನ ದಿಗ್ಗಜ ಬ್ಯಾಟರ್ ಬ್ರಿಯಾನ್ ಲಾರಾ ಅವರ 400 ರನ್​ಗಳ ದಾಖಲೆಯನ್ನು ಮುರಿದಿದ್ದಾರೆ. 2004 ರಲ್ಲಿ ಇದೇ ಇಂಗ್ಲೆಂಡ್‌ ವಿರುದ್ಧ ಲಾರಾ ಒಂದೇ ಇನ್ನಿಂಗ್ಸ್​ನಲ್ಲಿ ಅಜೇಯ 400 ರನ್ ಬಾರಿಸಿದ್ದರು.

5 / 7
ಅಲ್ಲದೆ ಶುಭ್​ಮನ್ ಗಿಲ್ ನಾಯಕನಾಗಿ ತಮ್ಮ ವೃತ್ತಿಜೀವನವನ್ನು ಅತ್ಯಂತ ಸ್ಫೋಟಕ ರೀತಿಯಲ್ಲಿ ಪ್ರಾರಂಭಿಸಿದ್ದು, ಈ ಸರಣಿಯಲ್ಲಿ ಇಲ್ಲಿಯವರೆಗೆ 500 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಇದರಿಂದಾಗಿ ಅವರು ಭಾರತೀಯ ನಾಯಕನಾಗಿ ಮೊದಲ ಟೆಸ್ಟ್ ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಮಾಡಿದ್ದಾರೆ. ಇದಕ್ಕೂ ಮೊದಲು, ವಿರಾಟ್ ಕೊಹ್ಲಿ ನಾಯಕನಾಗಿ ಮೊದಲ ಟೆಸ್ಟ್ ಸರಣಿಯಲ್ಲಿ 449 ರನ್ ಗಳಿಸಿದ್ದರು.

6 / 7
ಶುಭಮನ್ ಗಿಲ್ ಸೆನಾ ಟೆಸ್ಟ್ ಪಂದ್ಯದಲ್ಲಿ 300 ಕ್ಕೂ ಹೆಚ್ಚು ರನ್ ಗಳಿಸಿದ ಮೂರನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅದೇ ಸಮಯದಲ್ಲಿ, ಇಂಗ್ಲೆಂಡ್‌ನಲ್ಲಿ ಟೆಸ್ಟ್ ಪಂದ್ಯದಲ್ಲಿ 300 ರನ್‌ಗಳ ಗಡಿಯನ್ನು ತಲುಪಿದ ಏಷ್ಯಾದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೂ ಗಿಲ್ ಪಾತ್ರರಾಗಿದ್ದಾರೆ.

7 / 7
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ

ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್

ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್

ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು

ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು

ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ

ಮುಂಬೈನಲ್ಲಿ ಟೆಸ್ಲಾ ಕಾರು ಚಲಾಯಿಸಿದ ಡಿಸಿಎಂ ಏಕನಾಥ್ ಶಿಂಧೆ

ಏರೋಸ್ಪೇಸ್ ಯೋಜನೆ ಬಗ್ಗೆ ಸಿಎಂ ಹೇಳಿಕೆ ಗೊಂದಲಮಯ: ವಿಜಯೇಂದ್ರ

ಮನೆ ಕಟ್ಟಿಸಿಕೊಟ್ಟಿಲ್ಲ: KGF​ ಬಾಬು ಮನೆ ಮುಂದೆ ಜನರ ಪ್ರತಿಭಟನೆ

ಬೀಗರನ್ನು ಒಮ್ಮೆ ನಂಬಿ ಮೋಸ ಹೋಗಿದ್ದೇನೆ, ಪುನಃ ನಂಬಲಾರೆ: ಕೆಜಿಎಫ್ ಬಾಬು