AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಇವರಂತೆ ಭಾರತ ತಂಡದ ಹೊಸ ನಾಯಕ

India Test Team Captain: ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಈ ವಿದಾಯದ ಬೆನ್ನಲ್ಲೇ ಟೀಮ್ ಇಂಡಿಯಾದ ಮುಂದಿನ ನಾಯಕ ಯಾರಾಗಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿತ್ತು. ಈ ಕುತೂಹಲಕ್ಕೆ ಬಿಸಿಸಿಐ ಶೀಘ್ರದಲ್ಲೇ ತೆರೆ ಎಳೆಯಲಿದ್ದು, ಯುವ ಆಟಗಾರನಿಗೆ ಕ್ಯಾಪ್ಟನ್ ಪಟ್ಟ ನೀಡಲು ನಿರ್ಧರಿಸಿದೆ.

ಝಾಹಿರ್ ಯೂಸುಫ್
|

Updated on: May 11, 2025 | 9:04 AM

Share
ರೋಹಿತ್ ಶರ್ಮಾ (Rohit Sharma) ನಿವೃತ್ತಿ ಬೆನ್ನಲ್ಲೇ ಭಾರತ ಟೆಸ್ಟ್ ತಂಡದ ನಾಯಕ ಯಾರಾಗಲಿದ್ದಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿತ್ತು. ಈ ಪ್ರಶ್ನೆಯ ಮುಂದೆ ಶುಭ್​ಮನ್ ಗಿಲ್, ಕೆಎಲ್ ರಾಹುಲ್, ರಿಷಭ್ ಪಂತ್ ಹಾಗೂ ಜಸ್​ಪ್ರೀತ್ ಬುಮ್ರಾ ಆಯ್ಕೆಗಳಿದ್ದವು. ಹೀಗಾಗಿ ಇವರಲ್ಲಿ ಒಬ್ಬರು ಕ್ಯಾಪ್ಟನ್ ಆಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿತ್ತು.

1 / 5
ಅದರಂತೆ ಇದೀಗ ಆಯ್ಕೆ ಸಮಿತಿ ಟೀಮ್ ಇಂಡಿಯಾದ ಯುವ ದಾಂಡಿಗ ಶುಭ್​ಮನ್ ಗಿಲ್​ಗೆ ನಾಯಕತ್ವ ನೀಡಲು ನಿರ್ಧರಿಸಿದೆ ಎಂದು ಬಿಸಿಸಿಐ ಮೂಲಗಳಿಂದ ತಿಳಿದು ಬಂದಿದೆ. ಭವಿಷ್ಯದ ದೃಷ್ಟಿಯಿಂದ ಗಿಲ್​ಗೆ ಕ್ಯಾಪ್ಟನ್ ಪಟ್ಟ ಕಟ್ಟಲು ಬಿಸಿಸಿಐ ನಿರ್ಧರಿಸಿದ್ದು, ಮೇ 23 ರಂದು ಇದರ ಅಧಿಕೃತ ಘೋಷಣೆಯಾಗಲಿದೆ.

2 / 5
ಇನ್ನು ಉಪನಾಯಕನಾಗಿ ಜಸ್​ಪ್ರೀತ್ ಬುಮ್ರಾ ಅವರ ಹೆಸರು ಮುಂಚೂಣಿಯಲ್ಲಿದ್ದರೂ, ಇದೀಗ ರಿಷಭ್ ಪಂತ್ ಹೆಸರು ಕೂಡ ಮುನ್ನಲೆಗೆ ಬಂದಿದೆ. ಹೀಗಾಗಿ ವೈಸ್ ಕ್ಯಾಪ್ಟನ್ ಪಟ್ಟ ಪಂತ್ ಪಾಲಾಗುವ ಸಾಧ್ಯತೆ ಹೆಚ್ಚಿದೆ ಎಂದು ವರದಿಯಾಗಿದೆ. ಅದರಂತೆ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಶುಭ್​ಮನ್ ಗಿಲ್ ಹಾಗೂ ರಿಷಭ್ ಪಂತ್ ಟೀಮ್ ಇಂಡಿಯಾದ ನಾಯಕ ಹಾಗೂ ಉಪನಾಯಕರಾಗಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

3 / 5
ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜೂನ್ 20 ರಿಂದ ಶುರುವಾಗಲಿದೆ. ಆಂಗ್ಲರ ನಾಡಿನಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಒಟ್ಟು 5 ಟೆಸ್ಟ್ ಪಂದ್ಯಗಳನ್ನಾಡಲಾಗುತ್ತದೆ. ಈ ಸರಣಿಯ ಮೂಲಕ ಭಾರತದ ಪರ ನಾಯಕನಾಗಿ ಶುಭ್​ಮನ್ ಗಿಲ್ ಪಾದಾರ್ಪಣೆ ಮಾಡುವ ಸಾಧ್ಯತೆಯಿದೆ.

4 / 5
ಇದಕ್ಕೂ ಮುನ್ನ ಶುಭ್​ಮನ್ ಗಿಲ್ ಪಂಜಾಬ್ ರಾಜ್ಯ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದರು. ಅಲ್ಲದೆ ಭಾರತ ಟಿ20 ಹಾಗೂ ಏಕದಿನ ತಂಡಗಳ ಉಪನಾಯಕರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೀಗ ಗಿಲ್​ಗೆ ಪೂರ್ಣ ಪ್ರಮಾಣದ ಜವಾಬ್ದಾರಿವಹಿಸಲು ಬಿಸಿಸಿಐ ನಿರ್ಧರಿಸಿದ್ದು, ಅದರಂತೆ ರೋಹಿತ್ ಶರ್ಮಾ ಉತ್ತರಾಧಿಕಾರಿಯಾಗಿ ಶುಭ್​ಮನ್ ಗಿಲ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತವಾಗಿದೆ.

5 / 5
Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ

ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ

‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’

ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ

ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ

ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ

ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್

ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ

ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​

ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್