ಅತಿ ಹೆಚ್ಚು ಟೆಸ್ಟ್ ಗೆಲುವು; ರೋಹಿತ್-ಕೊಹ್ಲಿ ದಾಖಲೆ ಮುರಿದ ಶುಭ್​ಮನ್ ಗಿಲ್

Updated on: Aug 19, 2026 | 7:34 PM

Shubman Gill Test captaincy: ಶುಭ್​ಮನ್ ಗಿಲ್ ನಾಯಕತ್ವದಲ್ಲಿ ಟೀಂ ಇಂಡಿಯಾ ಶ್ರೀಲಂಕಾ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಗಿಲ್, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರ ಪ್ರಮುಖ ದಾಖಲೆಯನ್ನು ಮುರಿದಿದ್ದಾರೆ. ತಮ್ಮ ಮೊದಲ 10 ಟೆಸ್ಟ್‌ಗಳಲ್ಲಿ ಅತಿ ಹೆಚ್ಚು ಗೆಲುವು ಸಾಧಿಸಿದ ನಾಯಕರ ಪಟ್ಟಿಯಲ್ಲಿ ಗಿಲ್ ಸೌರವ್ ಗಂಗೂಲಿ ದಾಖಲೆಯನ್ನು ಸರಿಗಟ್ಟಿ, ಎರಡನೇ ಸ್ಥಾನಕ್ಕೇರಿದ್ದಾರೆ.

1 / 5
ಶುಭ್​ಮನ್ ಗಿಲ್ ನಾಯಕತ್ವದಲ್ಲಿ ಎರಡು ಪಂದ್ಯಗಳ ಟೆಸ್ಟ್ ಸರಣಿಗಾಗಿ ಶ್ರೀಲಂಕಾ ಪ್ರವಾಸ ಮಾಡಿರುವ ಟೀಂ ಇಂಡಿಯಾ ಮೊದಲ ಟೆಸ್ಟ್ ಪಂದ್ಯವನ್ನು ಭಾರಿ ಅಂತರದಲ್ಲಿ ಗೆಲ್ಲುವ ಮೂಲಕ ಸರಣಿಯಲ್ಲಿ ಶುಭಾರಂಭ ಮಾಡಿದೆ. ಗಿಲ್ ಶ್ರೀಲಂಕಾ ನೆಲದಲ್ಲಿ ಮೊದಲ ಬಾರಿಗೆ ಟೆಸ್ಟ್ ಪಂದ್ಯದಲ್ಲಿ ಭಾರತವನ್ನು ಮುನ್ನಡೆಸಿದ್ದು, ಅದ್ಭುತ ಆರಂಭವನ್ನು ಪಡೆದುಕೊಂಡಿದ್ದಾರೆ. ಅಲ್ಲದೆ ಈ ಗೆಲುವಿನೊಂದಿಗೆ ಗಿಲ್, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರ ಪ್ರಮುಖ ದಾಖಲೆಯನ್ನು ಮುರಿದಿದ್ದಾರೆ(PC-BCCI).

2 / 5

ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಜಯಗಳಿಸುವ ಮೂಲಕ ಶುಭ್​ಮನ್ ಗಿಲ್, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರ ದಾಖಲೆಯನ್ನು ಮುರಿದಿದ್ದು, ಟೆಸ್ಟ್ ಸ್ವರೂಪದಲ್ಲಿ ಟೀಂ ಇಂಡಿಯಾದ ನಾಯಕರಾಗಿ ಮೊದಲ 10 ಟೆಸ್ಟ್ ಪಂದ್ಯಗಳಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದ ಆಟಗಾರರ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ(PC-BCCI).

3 / 5

ಈ ಮೊದಲು ಟೀಂ ಇಂಡಿಯಾದ ಟೆಸ್ಟ್ ತಂಡದ ನಾಯಕರಾಗಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಮೊದಲ 10 ಟೆಸ್ಟ್ ಪಂದ್ಯಗಳಲ್ಲಿ ತಲಾ 5 ಪಂದ್ಯಗಳನ್ನು ಗೆದ್ದಿದ್ದರು. ಆದರೆ ಗಿಲ್ ಆರನೇ ಗೆಲು ವು ಸಾಧಿಸುವ ಮೂಲಕ ಇವರಿಬ್ಬರನ್ನು ಹಿಂದಿಕ್ಕಿದ್ದಾರೆ(PC-PTI).

4 / 5

ಇದರೊಂದಿಗೆ ಮೊದಲ 10 ಪಂದ್ಯಗಳಲ್ಲಿ ನಾಯಕರಾಗಿ 6 ಪಂದ್ಯಗಳನ್ನು ಗೆದ್ದಿದ್ದ ಸೌರವ್ ಗಂಗೂಲಿ ಅವರ ದಾಖಲೆಯನ್ನು ಗಿಲ್ ಸರಿಗಟ್ಟಿದ್ದಾರೆ. ಉಳಿದಂತೆ ಎಂಎಸ್ ಧೋನಿ 7 ಗೆಲುವುಗಳೊಂದಿಗೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ(PC-PTI).

5 / 5

ಇದರ ಜೊತೆಗೆ ಅತಿ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಗೆದ್ದ ಭಾರತೀಯ ನಾಯಕರ ಪಟ್ಟಿಯಲ್ಲಿ ಗಿಲ್ ಎಂಟನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಉಳಿದಂತೆ 40 ಟೆಸ್ಟ್ ಪಂದ್ಯಗಳನ್ನು ಗೆದ್ದಿರುವ ವಿರಾಟ್ ಕೊಹ್ಲಿ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, ಎಂಎಸ್ ಧೋನಿ 27 ಗೆಲುವುಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ಗಂಗೂಲಿ 21 ಗೆಲುವುಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, ಈ ಪಟ್ಟಿಯಲ್ಲಿ ಮೊಹಮ್ಮದ್ ಅಜರುದ್ದೀನ್ ನಾಲ್ಕನೇ ಸ್ಥಾನ ಮತ್ತು ರೋಹಿತ್ ಶರ್ಮಾ ಐದನೇ ಸ್ಥಾನದಲ್ಲಿದ್ದಾರೆ(PC-BCCI).

Loading...
Unable to load recommendations.
Follow Us