AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆಸ್ಟ್ ಮತ್ತು ಏಕದಿನದಲ್ಲಿ ದ್ವಿಶತಕ ಬಾರಿಸಿರುವವರ ಪಟ್ಟಿಯಲ್ಲಿ ಭಾರತೀಯರದ್ದೇ ಪಾರುಪತ್ಯ

Elite double century club: ಶುಭ್ಮನ್ ಗಿಲ್ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಅದ್ಭುತವಾದ 269 ರನ್ ಗಳಿಸುವ ಮೂಲಕ ಅನೇಕ ದಾಖಲೆಗಳನ್ನು ನಿರ್ಮಿಸಿದ್ದಾರೆ. ಅವರು ಏಕದಿನ ಮತ್ತು ಟೆಸ್ಟ್ ಪಂದ್ಯಗಳಲ್ಲಿ ದ್ವಿಶತಕ ಗಳಿಸಿದ ಕೆಲವೇ ಆಟಗಾರರಲ್ಲಿ ಒಬ್ಬರಾಗಿದ್ದಾರೆ. ಈ ಸಾಧನೆಯೊಂದಿಗೆ ಅವರು ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್ ಮತ್ತು ರೋಹಿತ್ ಶರ್ಮಾ ಅವರಂತಹ ದಂತಕಥೆಗಳ ಸಾಲಿಗೆ ಸೇರಿದ್ದಾರೆ.

ಪೃಥ್ವಿಶಂಕರ
|

Updated on: Jul 05, 2025 | 4:28 PM

Share
ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಭಾರತದ ನಾಯಕ ಶುಭಮನ್ ಗಿಲ್ ಅದ್ಭುತ ದ್ವಿಶತಕ ಗಳಿಸುವ ಮೂಲಕ ಅನೇಕ ದಾಖಲೆಗಳನ್ನು ನಿರ್ಮಿಸಿದರು. ಅದರಲ್ಲಿ ಸೆನಾ ದೇಶಗಳಲ್ಲಿ ದ್ವಿಶತಕ ಗಳಿಸಿದ ಮೊದಲ ಏಷ್ಯಾದ ಆಟಗಾರ ಎಂಬ ದಾಖಲೆಯೂ ಸೇರಿದೆ. 269 ರನ್‌ಗಳ ಇನ್ನಿಂಗ್ಸ್ ಆಡುವ ಮೂಲಕ, ಅವರು ಟೆಸ್ಟ್ ಮತ್ತು ಏಕದಿನ ಎರಡೂ ಸ್ವರೂಪಗಳಲ್ಲಿ ದ್ವಿಶತಕ ಗಳಿಸಿದ ಆಯ್ದ ಕ್ರಿಕೆಟಿಗರ ಪಟ್ಟಿಯಲ್ಲೂ ಸ್ಥಾನ ಪಡೆದಿದ್ದಾರೆ. ವಿಶೇಷವೆಂದರೆ ಈ ಪಟ್ಟಿಯಲ್ಲಿ ನಾಲ್ವರು ಭಾರತೀಯರು ಇದ್ದಾರೆ.

1 / 6
ಈ ಪಟ್ಟಿಯಲ್ಲಿ ಮೊದಲ ಹೆಸರು ಶ್ರೇಷ್ಠ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಅವರದ್ದು. ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಏಕದಿನ ಪಂದ್ಯಗಳಲ್ಲಿ ದ್ವಿಶತಕ ಗಳಿಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರು 2010 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದರು. ಈ ಪಂದ್ಯದಲ್ಲಿ ಅವರು ಅಜೇಯ 200 ರನ್ ಕಲೆಹಾಕಿದ್ದರು. ಏಕದಿನದ ಜೊತೆಗೆ ಸಚಿನ್ ಟೆಸ್ಟ್‌ನಲ್ಲಿ 6 ದ್ವಿಶತಕಗಳನ್ನು ಬಾರಿಸಿದ್ದಾರೆ. ಇದರಲ್ಲಿ ಅವರ ಅತ್ಯಧಿಕ ಸ್ಕೋರ್ ಅಜೇಯ 248 ರನ್‌.

2 / 6
ಟೀಂ ಇಂಡಿಯಾದ ಮಾಜಿ ಸ್ಫೋಟಕ ಬ್ಯಾಟ್ಸ್‌ಮನ್ ವೀರೇಂದ್ರ ಸೆಹ್ವಾಗ್ ಕೂಡ ಈ ಪಟ್ಟಿಯಲ್ಲಿದ್ದಾರೆ. ಅವರು 2011 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಪಂದ್ಯದಲ್ಲಿ 219 ರನ್​ಗಳ ದ್ವಿಶತಕದ ಇನ್ನಿಂಗ್ಸ್ ಆಡಿದ್ದರು. ಹಾಗೆಯೇ ಟೆಸ್ಟ್ ಕ್ರಿಕೆಟ್‌ನಲ್ಲಿ ಸೆಹ್ವಾಗ್ ಎರಡು ತ್ರಿಶತಕ ಬಾರಿಸಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ 319 ರನ್ ಬಾರಿಸಿದ್ದ ಸೆಹ್ವಾಗ್ ಪಾಕಿಸ್ತಾನ ವಿರುದ್ಧ 309 ರನ್‌ಗಳ ಇನ್ನಿಂಗ್ಸ್ ಆಡಿದ್ದರು. ಇದಲ್ಲದೆ, ಅವರು ಟೆಸ್ಟ್‌ನಲ್ಲಿ ಹಲವು ಬಾರಿ ದ್ವಿಶತಕಗಳನ್ನು ಬಾರಿಸಿದ್ದಾರೆ.

3 / 6
ಟೀಂ ಇಂಡಿಯಾದ ಆರಂಭಿಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಏಕದಿನ ಮತ್ತು ಟೆಸ್ಟ್ ಮಾದರಿಯಲ್ಲಿ  ದ್ವಿಶತಕ ಬಾರಿಸಿರುವ ಮತ್ತೊಬ್ಬ ಭಾರತೀಯ ಬ್ಯಾಟರ್. ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ರನ್​ಗಳ ಇನ್ನಿಂಗ್ಸ್ ಆಡಿದ ದಾಖಲೆಯನ್ನು ಅವರು ಹೊಂದಿದ್ದಾರೆ. 2014 ರಲ್ಲಿ ಶ್ರೀಲಂಕಾ ವಿರುದ್ಧ 264 ರನ್ ಬಾರಿಸಿದ್ದ ರೋಹಿತ್ ಅವರ ಹೆಸರಿನಲ್ಲಿ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ದ್ವಿಶತಕಗಳನ್ನು ಬಾರಿಸಿದ ದಾಖಲೆಯೂ ಸೇರಿದೆ. ಹಾಗೆಯೇ ರೋಹಿತ್ ಟೆಸ್ಟ್ ಕ್ರಿಕೆಟ್‌ನಲ್ಲಿಯೂ ಒಮ್ಮೆ ದ್ವಿಶತಕ ಬಾರಿಸಿದ್ದು 2019 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 212 ರನ್ ಗಳಿಸಿದ್ದರು.

4 / 6
ಕ್ರಿಸ್ ಗೇಲ್ ಏಕದಿನ ಮತ್ತು ಟೆಸ್ಟ್ ಕ್ರಿಕೆಟ್‌ನಲ್ಲಿ ದ್ವಿಶತಕ ಗಳಿಸಿದ ಏಕೈಕ ವಿದೇಶಿ ಆಟಗಾರ. ಅವರು 2015 ರಲ್ಲಿ ಜಿಂಬಾಬ್ವೆ ವಿರುದ್ಧ ಏಕದಿನ ಕ್ರಿಕೆಟ್‌ನಲ್ಲಿ 215 ರನ್ ಕಲೆಹಾಕಿದ್ದರು. ಟೆಸ್ಟ್ ಕ್ರಿಕೆಟ್‌ನಲ್ಲಿ ಎರಡು ತ್ರಿಶತಕಗಳನ್ನು ಬಾರಿಸಿರುವ ಗೇಲ್ ದಕ್ಷಿಣ ಆಫ್ರಿಕಾ ವಿರುದ್ಧ 317 ರನ್ ಮತ್ತು ಶ್ರೀಲಂಕಾ ವಿರುದ್ಧ 333 ರನ್ ಸಿಡಿಸಿದ್ದಾರೆ.

5 / 6
ಇದೀಗ ಭಾರತೀಯ ಟೆಸ್ಟ್ ತಂಡದ ನಾಯಕ ಶುಭ್​ಮನ್ ಗಿಲ್ ಕೂಡ ಈ ಪಟ್ಟಿಗೆ ಸೇರಿದ್ದಾರೆ. 2023 ರಲ್ಲಿ ನ್ಯೂಜಿಲೆಂಡ್ ವಿರುದ್ಧದ ಏಕದಿನ ಪಂದ್ಯದಲ್ಲಿ 208 ರನ್​ಗಳ ಇನ್ನಿಂಗ್ಸ್ ಆಡಿದ್ದ ಗಿಲ್, ಈ ಮೂಲಕ ಏಕದಿನ ಪಂದ್ಯದಲ್ಲಿ ದ್ವಿಶತಕ ಗಳಿಸಿದ ಅತ್ಯಂತ ಕಿರಿಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಇದೀಗ ಇಂಗ್ಲೆಂಡ್ ವಿರುದ್ಧದ ಎಡ್ಜ್‌ಬಾಸ್ಟನ್ ಟೆಸ್ಟ್ ಪಂದ್ಯದಲ್ಲಿ 269 ರನ್ ಬಾರಿಸುವ ಮೂಲಕ ಹೊಸ ಇತಿಹಾಸವನ್ನು ಸೃಷ್ಟಿಸಿದ್ದಾರೆ.

6 / 6
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!

ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು

ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ, ಇಬ್ಬರು ಸಾವು

ಜೈಲಿನಲ್ಲೇ ಉಗ್ರರಿಗೆ ರಾಜಾತಿಥ್ಯ, ಗೃಹ ಇಲಾಖೆ ನಿದ್ದೆ ಮಾಡ್ತಿದೆ: ಅಶೋಕ್

ಹುದ್ದೆ ಒಪ್ಪಿಕೊಂಡರೂ ಸಿದ್ದರಾಮಯ್ಯ ಸಿಎಂ ಬಿಡಬೇಕಿಲ್ಲ: ಸತೀಶ್ ಜಾರಕಿಹೊಳಿ

ಹೇಗಿದೆ ನೋಡಿ ತುಕಾಲಿ ಸಂತೋಷ್ ಹೆಣ್ಣಿನ ಅವತಾರ
ಹೇಗಿದೆ ನೋಡಿ ತುಕಾಲಿ ಸಂತೋಷ್ ಹೆಣ್ಣಿನ ಅವತಾರ
ಗಡ್ಕರಿಯವರನ್ನು ಕುಮಾರಸ್ವಾಮಿ ಭೇಟಿಯಾಗಿದ್ದು ಸಂತೋಷ: ಶಿವಕುಮಾರ್

ಗುಜರಾತ್​​ನಲ್ಲಿ ಸೇತುವೆ ಕುಸಿತ, ನದಿಗೆ ಬಿದ್ದ ವಾಹನಗಳು, 9 ಮಂದಿ ಸಾವು

ಗಂಭೀರ ನಡಿಗೆ, ಧೈರ್ಯಶಾಲಿ ಅನೆಗಳನ್ನು ಅಯ್ಕೆ ಮಾಡಲಾಗುತ್ತದೆ: ಅರಣ್ಯಾಧಿಕಾರಿ

ನಮೀಬಿಯಾದ ಸಾಂಪ್ರದಾಯಿಕ ಡ್ರಮ್ ನುಡಿಸಿದ ಪ್ರಧಾನಿ ಮೋದಿ