Sikandar Raza: ಟಿ20 ಕ್ರಿಕೆಟ್​ನಲ್ಲಿ ವಿಶೇಷ ವಿಶ್ವದಾಖಲೆ ಬರೆದ ಸಿಕಂದರ್ ರಾಝ

|

Updated on: Jul 15, 2024 | 9:44 AM

India vs Zimbabwe: ಭಾರತದ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಝಿಂಬಾಬ್ವೆ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 167 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಝಿಂಬಾಬ್ವೆ 125 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ 42 ರನ್​ಗಳ ಜಯ ಸಾಧಿಸಿದೆ.

1 / 5
ಝಿಂಬಾಬ್ವೆ ವಿರುದ್ಧದ 5ನೇ ಟಿ20 ಪಂದ್ಯದಲ್ಲೂ ಟೀಮ್ ಇಂಡಿಯಾ ಜಯಭೇರಿ ಬಾರಿಸಿದೆ. ಹರಾರೆಯ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಟೀಮ್ ಇಂಡಿಯಾ 42 ರನ್​ಗಳ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಭಾರತ ತಂಡವು 5 ಪಂದ್ಯಗಳ ಸರಣಿಯನ್ನು 4-1 ಅಂತರದಿಂದ ಗೆದ್ದುಕೊಂಡಿದೆ.

2 / 5
ವಿಶೇಷ ಎಂದರೆ ಈ ಸರಣಿಯೊಂದಿಗೆ ಝಿಂಬಾಬ್ವೆ ತಂಡದ ನಾಯಕ ಸಿಕಂದರ್ ರಾಝ ಟಿ20 ಕ್ರಿಕೆಟ್​ನಲ್ಲಿ ವಿಶೇಷ ಮೈಲುಗಲ್ಲು ದಾಟಿದ್ದಾರೆ. ಕೊನೆಯ ಟಿ20 ಪಂದ್ಯದಲ್ಲಿ 8 ರನ್​ ಕಲೆಹಾಕುವುದರೊಂದಿಗೆ ರಾಝ ಟಿ20 ಕ್ರಿಕೆಟ್​ನಲ್ಲಿ 2 ಸಾವಿರ ರನ್​ಗಳನ್ನು ಪೂರೈಸಿದ್ದಾರೆ.

3 / 5
ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 2000 ರನ್ ಮತ್ತು 50 ವಿಕೆಟ್​ಗಳನ್ನು ಕಬಳಿಸಿದ ಝಿಂಬಾಬ್ವೆಯ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಹಾಗೆಯೇ ಈ ಸಾಧನೆ ಮಾಡಿದ ವಿಶ್ವದ 5ನೇ ಕ್ರಿಕೆಟಿಗ ಎಂಬ ವಿಶ್ವ ದಾಖಲೆಯನ್ನು ಸಹ ನಿರ್ಮಿಸಿದ್ದಾರೆ.

4 / 5
ಇದಕ್ಕೂ ಮುನ್ನ ಬಾಂಗ್ಲಾದೇಶದ ಶಕೀಬ್ ಅಲ್ ಹಸನ್, ಪಾಕಿಸ್ತಾನದ ಮೊಹಮ್ಮದ್ ಹಫೀಝ್, ಮಲೇಷ್ಯಾದ ವೀರನ್​ದೀಪ್ ಸಿಂಗ್ ಮತ್ತು ಅಫ್ಘಾನಿಸ್ತಾನದ ಮೊಹಮ್ಮದ್ ನಬಿ ಮಾತ್ರ ಈ ಸಾಧನೆ ಮಾಡಿದ್ದರು. ಇದೀಗ ಈ ದಾಖಲೆ ಪಟ್ಟಿಗೆ ಸಿಕಂದರ್ ರಾಝ ಐದನೇ ಆಟಗಾರನಾಗಿ ಎಂಟ್ರಿ ಕೊಟ್ಟಿದ್ದಾರೆ.

5 / 5
ಝಿಂಬಾಬ್ವೆ ಪರ 91 ಟಿ20 ಪಂದ್ಯಗಳನ್ನಾಡಿರುವ ಸಿಕಂದರ್ ರಾಝ 14 ಅರ್ಧಶತಕಗಳೊಂದಿಗೆ ಈವರೆಗೆ 2007+ ರನ್ ಕಲೆಹಾಕಿದ್ದಾರೆ. ಹಾಗೆಯೇ 80 ಟಿ20 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅವರು  66 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 2 ಸಾವಿರ ರನ್ ಹಾಗೂ 50+ ವಿಕೆಟ್ ಪಡೆದ ವಿಶ್ವದ ಐದನೇ ಆಟಗಾರ ಎಂಬ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

Published On - 9:43 am, Mon, 15 July 24