ಸೂರ್ಯಕುಮಾರ್ ಯಾದವ್ ವಿಶ್ವ ದಾಖಲೆ ಮುರಿದ ಸಿಕಂದರ್ ರಾಝ
Sikandar Raza Records: ಝಿಂಬಾಬ್ವೆ ಪರ ಟಿ20 ಕ್ರಿಕೆಟ್ನಲ್ಲಿ ಶತಕ ಸಿಡಿಸಿದ ಹಾಗೂ 5 ವಿಕೆಟ್ ಕಬಳಿಸಿದ ದಾಖಲೆ ಹೊಂದಿರುವ ಸಿಕಂದರ್ ರಾಝ ಇದೀಗ ಭರ್ಜರಿ ವರ್ಲ್ಡ್ ರೆಕಾರ್ಡ್ವೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದು ಕೂಡ ಸ್ಪೋಟಕ ಸೆಂಚುರಿ ಸಿಡಿಸಿ ಪ್ಲೇಯರ್ ಆಫ್ ಮ್ಯಾಚ್ ಪ್ರಶಸ್ತಿ ಪಡೆಯುವ ಮೂಲಕ.
1 / 7
ಟಿ20 ಕ್ರಿಕೆಟ್ನಲ್ಲಿ ಝಿಂಬಾಬ್ವೆ ತಂಡದ ನಾಯಕ ಸಿಕಂದರ್ ರಾಝ ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ ಟೀಮ್ ಇಂಡಿಯಾದ ವಿರಾಟ್ ಕೊಹ್ಲಿ ಹಾಗೂ ಸೂರ್ಯಕುಮಾರ್ ಯಾದವ್ ಅವರ ವಿಶ್ವ ದಾಖಲೆಗಳನ್ನು ಮುರಿಯುವ ಮೂಲಕ ಎಂಬುದು ವಿಶೇಷ.
2 / 7
ನೈರೋಬಿಯಾದಲ್ಲಿ ನಡೆದ ಟಿ20 ವಿಶ್ವಕಪ್ನ ಅರ್ಹತಾ ಸುತ್ತಿನ ಪಂದ್ಯದಲ್ಲಿ ಗ್ಯಾಂಬಿಯಾ ವಿರುದ್ಧ ಸಿಕಂದರ್ ರಾಝ ಕೇವಲ 33 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಅಲ್ಲದೆ 43 ಎಸೆತಗಳಲ್ಲಿ 15 ಸಿಕ್ಸ್ ಹಾಗೂ 7 ಫೋರ್ಗಳೊಂದಿಗೆ ಅಜೇಯ 133 ರನ್ ಬಾರಿಸಿದ್ದರು. ಈ ಭರ್ಜರಿ ಬ್ಯಾಟಿಂಗ್ ಪರಿಣಾಮ ಝಿಂಬಾಬ್ವೆ ತಂಡವು 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 344 ರನ್ ಕಲೆಹಾಕಿತು.
3 / 7
345 ರನ್ಗಳ ಕಠಿಣ ಗುರಿ ಬೆನ್ನತ್ತಿದ ಗ್ಯಾಂಬಿಯಾ ತಂಡವು 14.4 ಓವರ್ಗಳಲ್ಲಿ 54 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಝಿಂಬಾಬ್ವೆ ತಂಡವು 290 ರನ್ಗಳ ಅಮೋಘ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಸ್ಪೋಟಕ ಶತಕ ಸಿಡಿಸಿ ಮಿಂಚಿದ್ದ ಸಿಕಂದರ್ ರಾಝಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಒಲಿಯಿತು.
4 / 7
ಈ ಪಂದ್ಯ ಶ್ರೇಷ್ಠ ಪ್ರಶಸ್ತಿಯೊಂದಿಗೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಬಾರಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ಆಟಗಾರನೆಂಬ ವಿಶ್ವ ದಾಖಲೆ ಸಿಕಂದರ್ ರಾಝ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಸೂರ್ಯಕುಮಾರ್ ಯಾದವ್ ಹಾಗೂ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು.
5 / 7
ಟೀಮ್ ಇಂಡಿಯಾ ಪರ 74 ಟಿ20 ಪಂದ್ಯಗಳನ್ನಾಡಿರುವ ಸೂರ್ಯಕುಮಾರ್ ಯಾದವ್ ಒಟ್ಟು 16 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದಿದ್ದಾರೆ. ಈ ಮೂಲಕ ಅತೀ ಕಡಿಮೆ ಇನಿಂಗ್ಸ್ಗಳಲ್ಲಿ 15 ಕ್ಕಿಂತ ಹೆಚ್ಚು ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ಆಟಗಾರ ಎನಿಸಿಕೊಂಡಿದ್ದಾರೆ.
6 / 7
ಇನ್ನು ಭಾರತದ ಪರ 125 ಟಿ20 ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ ಕೂಡ 16 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇದೀಗ ಸೂರ್ಯಕುಮಾರ್ ಯಾದವ್ ಹಾಗೂ ವಿರಾಟ್ ಕೊಹ್ಲಿಯನ್ನು ಸಿಕಂದರ್ ರಾಝ ಹಿಂದಿಕ್ಕಿದ್ದಾರೆ.
7 / 7
ಝಿಂಬಾಬ್ವೆ ಪರ 95 ಟಿ20 ಪಂದ್ಯಗಳನ್ನಾಡಿರುವ ಸಿಕಂದರ್ ರಾಝ ಒಟ್ಟು 17 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಗೌರವಕ್ಕೆ ಪಾತ್ರರಾಗಿದ್ದಾರೆ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಬಾರಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
Published On - 11:08 am, Thu, 24 October 24