Virat Kohli: ಕಿಂಗ್ ಕೊಹ್ಲಿಯ ವಿಶ್ವ ದಾಖಲೆ ಮುರಿದ ಸಿಕಂದರ್ ರಾಝ
TV9 Web | Updated By: ಝಾಹಿರ್ ಯೂಸುಫ್
Updated on:
Oct 29, 2022 | 11:24 PM
Sikandar Raza: ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ 4 ಓವರ್ಗಳಲ್ಲಿ ಕೇವಲ 25 ರನ್ ನೀಡಿ 3 ವಿಕೆಟ್ ಕಬಳಿಸಿದ್ದರು. ಅಲ್ಲದೆ ಅಂತಿಮ ಎಸೆತದಲ್ಲಿ ಶಾಹೀನ್ ಅಫ್ರಿದಿಯನ್ನು ರನೌಟ್ ಮಾಡುವ ಮೂಲಕ ಜಿಂಬಾಬ್ವೆ ತಂಡಕ್ಕೆ 1 ರನ್ಗಳ ರೋಚಕ ತಂದು ಕೊಟ್ಟಿದ್ದರು.
1 / 5
ಈ ಬಾರಿ ಟಿ20 ವಿಶ್ವಕಪ್ ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ಜಿಂಬಾಬ್ವೆ ಸ್ಟಾರ್ ಆಟಗಾರ ಸಿಕಂದರ್ ರಾಝ ಇದೀಗ ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ ವಿರಾಟ್ ಕೊಹ್ಲಿಯ ದಾಖಲೆ ಮುರಿದು ಎಂಬುದು ವಿಶೇಷ.
2 / 5
ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ 4 ಓವರ್ಗಳಲ್ಲಿ ಕೇವಲ 25 ರನ್ ನೀಡಿ 3 ವಿಕೆಟ್ ಕಬಳಿಸಿದ್ದರು. ಅಲ್ಲದೆ ಅಂತಿಮ ಎಸೆತದಲ್ಲಿ ಶಾಹೀನ್ ಅಫ್ರಿದಿಯನ್ನು ರನೌಟ್ ಮಾಡುವ ಮೂಲಕ ಜಿಂಬಾಬ್ವೆ ತಂಡಕ್ಕೆ 1 ರನ್ಗಳ ರೋಚಕ ತಂದು ಕೊಟ್ಟಿದ್ದರು.
3 / 5
ವಿಶೇಷ ಎಂದರೆ ಈ ಭರ್ಜರಿ ಪ್ರದರ್ಶನ ಫಲವಾಗಿ ಸಿಕಂದರ್ ರಾಝ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು. ಇದರೊಂದಿಗೆ ಟಿ20 ಕ್ರಿಕೆಟ್ನಲ್ಲಿ ಒಂದೇ ವರ್ಷದಲ್ಲಿ ಅತ್ಯಧಿಕ ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
4 / 5
ಈ ಹಿಂದೆ ಒಂದೇ ವರ್ಷದಲ್ಲಿ ಅತ್ಯಧಿಕ ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದು ವಿಶ್ವ ದಾಖಲೆ ನಿರ್ಮಿಸಿದ್ದು ವಿರಾಟ್ ಕೊಹ್ಲಿ. ಕಿಂಗ್ ಕೊಹ್ಲಿ 2016 ರಲ್ಲಿ 6 ಬಾರಿ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿಗೆ ಭಾಜನರಾಗಿದ್ದರು.
5 / 5
ಇದೀಗ 2022 ರಲ್ಲಿ 7 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆಯುವ ಮೂಲಕ ಸಿಕಂದರ್ ರಾಝ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಮುರಿದು ಹೊಸ ಇತಿಹಾಸ ನಿರ್ಮಿಸಿದ್ದಾರೆ.