Sikandar Raza: ಟಿ20 ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆ ಬರೆದ ಸಿಕಂದರ್ ರಾಝ
Sikandar Raza Records: ಟೀಮ್ ಇಂಡಿಯಾದ ಮಿಸ್ಟರ್ 360 ಡಿಗ್ರಿ ಖ್ಯಾತಿಯ ಸೂರ್ಯಕುಮಾರ್ ಯಾದವ್ 2022 ರಲ್ಲಿ 7 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು. ಆದರೆ ಇಲ್ಲಿದೆ ರಾಝ ಅವರ ಹೆಸರಿಗೆ ವಿಶ್ವ ದಾಖಲೆ ಸೆರ್ಪಡೆಯಾಗಲು ಕಾರಣ ಬ್ಯಾಕ್ ಟು ಬ್ಯಾಕ್ ಈ ಸಾಧನೆ ಮಾಡಿರುವುದು.
Updated on: Dec 11, 2023 | 9:33 PM

ಝಿಂಬಾಬ್ವೆ ತಂಡದ ಸ್ಟಾರ್ ಆಲ್ರೌಂಡರ್ ಸಿಕಂದರ್ ರಾಝ ಟಿ20 ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಇದುವರೆಗೆ ಯಾರಿಂದಲೂ ಸಾಧ್ಯವಾಗದ ದಾಖಲೆ ಎಂಬುದು ವಿಶೇಷ.

ಅಂದರೆ ಟಿ20 ಕ್ರಿಕೆಟ್ನಲ್ಲಿ ಒಂದು ವರ್ಷದಲ್ಲಿ ಅತ್ಯಧಿಕ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ದಾಖಲೆ ಸಿಕಂದರ್ ರಾಝ ಹೆಸರಿನಲ್ಲಿದೆ. ರಾಝ ಈ ವರ್ಷ 7 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದಿದ್ದಾರೆ.

ಮತ್ತೊಂದೆಡೆ ಟೀಮ್ ಇಂಡಿಯಾದ ಮಿಸ್ಟರ್ 360 ಡಿಗ್ರಿ ಖ್ಯಾತಿಯ ಸೂರ್ಯಕುಮಾರ್ ಯಾದವ್ 2022 ರಲ್ಲಿ 7 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು. ಆದರೆ ಇಲ್ಲಿದೆ ರಾಝ ಅವರ ಹೆಸರಿಗೆ ವಿಶ್ವ ದಾಖಲೆ ಸೆರ್ಪಡೆಯಾಗಲು ಕಾರಣ ಬ್ಯಾಕ್ ಟು ಬ್ಯಾಕ್ ಈ ಸಾಧನೆ ಮಾಡಿರುವುದು.

2022 ರಲ್ಲೂ ಸಿಕಂದರ್ ರಾಝ ಟಿ20 ಕ್ರಿಕೆಟ್ನಲ್ಲಿ ಒಟ್ಟು 7 ಬಾರಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದಿದ್ದರು. ಇದೀಗ 2023 ರಲ್ಲೂ 7 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗುವ ಮೂಲಕ ಟಿ20 ಕ್ರಿಕೆಟ್ನಲ್ಲಿ 2 ವರ್ಷಗಳಲ್ಲಿ ಅತೀ ಹೆಚ್ಚು ಬಾರಿ ಬಾರಿ ಪ್ಲೇಯರ್ ಆಫ್ ಮ್ಯಾಚ್ ಗೌರವಕ್ಕೆ ಪಾತ್ರರಾದ ಆಟಗಾರ ಎನಿಸಿಕೊಂಡಿದ್ದಾರೆ.

ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಸತತ ಎರಡು ವರ್ಷ ಅತ್ಯಧಿಕ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ವಿಶ್ವ ದಾಖಲೆಯನ್ನು ಸಿಕಂದರ್ ರಾಝ್ ತಮ್ಮದಾಗಿಸಿಕೊಂಡಿದ್ದಾರೆ.

ಇನ್ನು ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಇದ್ದು, 2016 ರಲ್ಲಿ ಟಿ20 ಕ್ರಿಕೆಟ್ನಲ್ಲಿ ಕಿಂಗ್ ಕೊಹ್ಲಿ ಒಟ್ಟು 6 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದಿದ್ದರು. ಈ ದಾಖಲೆಯನ್ನು ಮುರಿಯುವ ಮೂಲಕ ಸಿಕಂದರ್ ರಾಝ್ ಇದೀಗ ಹೊಸ ಇತಿಹಾಸ ನಿರ್ಮಿಸಿರುವುದು ವಿಶೇಷ.



















