
ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನವೇ ಟೀಮ್ ಇಂಡಿಯಾದ ಪ್ರಮುಖ ಇಬ್ಬರು ಆಟಗಾರರು ಗಾಯದ ಸಮಸ್ಯೆಯಿಂದಾಗಿ ಹೊರಬಿದ್ದಿದ್ದು, ಅವರ ಜಾಗಕ್ಕೆ ಇಬ್ಬರು ಆಟಗಾರರನ್ನು ಬಿಸಿಸಿಐ (BCCI) ಬದಲಿ ಆಟಗಾರರಾಗಿ ಆಯ್ಕೆ ಮಾಡಿದೆ. ಆಗಸ್ಟ್ 15 ರಿಂದ ಗಾಲೆನಲ್ಲಿ ಆರಂಭವಾಗಲಿರುವ ಟೆಸ್ಟ್ ಸರಣಿಗೂ ಮುನ್ನ ತಂಡದಲ್ಲಿ ಆಗಿರುವ ಆ ಎರಡು ಪ್ರಮುಖ ಬದಲಾವಣೆಗಳ ವಿವರ ಇಲ್ಲಿದೆ. (PC: BCCI)

ಜಸ್ಪ್ರೀತ್ ಬುಮ್ರಾ: ಭಾರತ ತಂಡದ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಎಡಗಾಲಿನ ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದರಿಂದಾಗಿ ಅವರು ಸಂಪೂರ್ಣ ಸರಣಿಯಿಂದ ಹೊರಬಿದ್ದಿದ್ದಾರೆ. (PC: GettyImages)

ಆಖಿಬ್ ನಬಿ: ಜಸ್ಪ್ರೀತ್ ಬುಮ್ರಾ ಹೊರಗುಳಿದಿರುವ ಕಾರಣ ಬಿಸಿಸಿಐ ಜಮ್ಮು-ಕಾಶ್ಮೀರದ ಅನುಭವಿ ವೇಗಿ ಆಖಿಬ್ ನಬಿ ಅವರನ್ನು ಭಾರತ ತಂಡಕ್ಕೆ ಆಯ್ಕೆ ಮಾಡಿದ್ದಾರೆ. ಅದರಂತೆ ಇದೀಗ ನಬಿ ಟೀಮ್ ಇಂಡಿಯಾವನ್ನು ಕೂಡಿಕೊಂಡಿದ್ದಾರೆ.

ಸಾಯಿ ಸುದರ್ಶನ್: ಟೀಮ್ ಇಂಡಿಯಾದ ಯುವ ಬ್ಯಾಟರ್ ಸಾಯಿ ಸುದರ್ಶನ್ ಅವರ ಬಲಗಾಲಿನ ಹೆಬ್ಬೆರಳಿಗೆ ಗಾಯವಾಗಿದ್ದು, ಈ ಗಾಯದ ಸಮಸ್ಯೆಯಿಂದ ಅವರು ಇನ್ನೂ ಸಹ ಚೇತರಿಸಿಕೊಂಡಿಲ್ಲ. ಹೀಗಾಗಿ ಅವರು ಕೂಡ ಶ್ರೀಲಂಕಾ ಸರಣಿಯಿಂದ ಹೊರಗುಳಿದಿದ್ದಾರೆ. (PC: GettyImages)

ಸರ್ಫರಾಝ್ ಖಾನ್: ಸಾಯಿ ಸುದರ್ಶನ್ ಹೊರಗುಳಿದಿರುವ ಕಾರಣ ಅವರ ಜಾಗಕ್ಕೆ ಮುಂಬೈನ ರನ್ ಮಷಿನ್ ಖ್ಯಾತಿಯ ಮಧ್ಯಮ ಕ್ರಮಾಂಕದ ಬ್ಯಾಟರ್ ಸರ್ಫರಾಝ್ ಖಾನ್ ಅವರನ್ನು ಭಾರತ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಅದರಂತೆ ಇದೀಗ ಸರ್ಫರಾಝ್ ಶ್ರೀಲಂಕಾಗೆ ಪ್ರಯಾಣಿಸಿದ್ದಾರೆ. . (PC: GettyImages)

ಭಾರತ ಟೆಸ್ಟ್ ತಂಡ: ಶುಭ್‌ಮನ್ ಗಿಲ್ (ನಾಯಕ), ಕೆ.ಎಲ್. ರಾಹುಲ್ (ಉಪನಾಯಕ), ರಿಷಭ್ ಪಂತ್, ಧ್ರುವ್ ಜುರೆಲ್, ಯಶಸ್ವಿ ಜೈಸ್ವಾಲ್, ದೇವದತ್ ಪಡಿಕ್ಕಲ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮಾನವ್ ಸುತಾರ್, ಸರಂಶ್ ಜೈನ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಗುರ್ನೂರ್ ಬ್ರಾರ್, ಆಖಿಬ್ ನಬಿ, ಸರ್ಫರಾಝ್ ಖಾನ್. (PC: BCCI)