SL vs NZ: 7ನೇ ಟೆಸ್ಟ್‌ನಲ್ಲಿ ನಾಲ್ಕನೇ ಶತಕ ಸಿಡಿಸಿ ಡಾನ್ ಬ್ರಾಡ್ಮನ್ ದಾಖಲೆ ಸರಿಗಟ್ಟಿದ ಲಂಕಾ ಬ್ಯಾಟರ್
Kamindu Mendis: ಈ ಶತಕದೊಂದಿಗೆ ಕಮಿಂದು ಮೆಂಡಿಸ್ ಅವರು ಟೆಸ್ಟ್‌ನಲ್ಲಿ ಆಡಿದ 11ನೇ ಇನ್ನಿಂಗ್ಸ್‌ನಲ್ಲಿ ನಾಲ್ಕನೇ ಶತಕ ಸಿಡಿಸುವ ಮೂಲಕ ಕ್ರಿಕೆಟ್ ದಂತಕಥೆ ಆಸ್ಟ್ರೇಲಿಯಾದ ಡಾನ್ ಬ್ರಾಡ್ಮನ್ ಅವರ ವಿಶೇಷ ದಾಖಲೆಯನ್ನು ಸರಿಗಟ್ಟಿದ್ದಾರೆ. ಬ್ರಾಡ್ಮನ್ ಕೂಡ ಮೊದಲ 11 ಇನ್ನಿಂಗ್ಸ್ಗಳಲ್ಲಿ 4 ಶತಕ ಬಾರಿಸಿದ್ದ ಸಾಧನೆ ಮಾಡಿದ್ದರು.
1 / 6
ಶ್ರೀಲಂಕಾ ಹಾಗೂ ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ಎರಡು ಟೆಸ್ಟ್ ಪಂದ್ಯಗಳ ಮೊದಲ ಟೆಸ್ಟ್‌ನಲ್ಲಿ ಶ್ರೀಲಂಕಾದ ಯುವ ಬ್ಯಾಟರ್ ಕಮಿಂದು ಮೆಂಡಿಸ್, ದಾಖಲೆಯ ಶತಕ ಸಿಡಿಸಿ ಮಿಂಚಿದ್ದಾರೆ. ವಾಸ್ತವವಾಗಿ ಮೆಂಡಿಸ್ ತಮ್ಮ ಟೆಸ್ಟ್ ವೃತ್ತಿಜೀವನದ 7ನೇ ಟೆಸ್ಟ್ ಪಂದ್ಯವನ್ನಾಡುತ್ತಿದ್ದು, ಇದರಲ್ಲಿ ಬರೋಬ್ಬರಿ 4 ಶತಕಗಳನ್ನು ಬಾರಿಸಿದ್ದಾರೆ.
2 / 6
ನ್ಯೂಜಿಲೆಂಡ್ ವಿರುದ್ಧ ಇಂದಿನಿಂದ ಗಾಲೆಯಲ್ಲಿ ಆರಂಭವಾಗಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್ ಆರಂಭಿಸಿದ ಶ್ರೀಲಂಕಾ ಪರ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಬಂದ ಮೆಂಡಿಸ್, ತಂಡವನ್ನು ಸಂಕಷ್ಟದಿಂದ ಪಾರು ಮಾಡಿದಲ್ಲದೆ, ಶತಕದ ಇನ್ನಿಂಗ್ಸ್ ಕೂಡ ಆಡಿದರು.
3 / 6
ಕಮಿಂದು ಮೆಂಡಿಸ್ ಅವರ ವಿಶೇಷವೆಂದರೆ ಅವರು ಇಲ್ಲಿಯವರೆಗೆ ಯಾವುದೇ ಟೆಸ್ಟ್ ಪಂದ್ಯದಲ್ಲಿ ಕಡಿಮೆ ಮೊತ್ತಕ್ಕೆ ಇನ್ನಿಂಗ್ಸ್ ಮುಗಿಸಿಲ್ಲ. ಅಂದರೆ ಟೆಸ್ಟ್‌ಗೆ ಪದಾರ್ಪಣೆ ಮಾಡಿದ ಪ್ರತಿ ಪಂದ್ಯದಲ್ಲೂ ಮೆಂಡಿಸ್ ಶತಕ ಅಥವಾ ಅರ್ಧ ಶತಕ ಸಿಡಿಸಿದ್ದಾರೆ. ತಮ್ಮ ಟೆಸ್ಟ್ ವೃತ್ತಿಜೀವನವನ್ನು 2022 ರಲ್ಲಿ ಪ್ರಾರಂಭಿಸಿದ ಮೆಂಡಿಸ್, ಮೊದಲ ಪಂದ್ಯದಲ್ಲೇ 61 ರನ್‌ಗಳ ಇನ್ನಿಂಗ್ಸ್ ಆಡಿದ್ದರು.
4 / 6
ಇದಾದ ನಂತರ 2024 ರಲ್ಲಿ ಟೆಸ್ಟ್ ಆಡುವ ಅವಕಾಶ ಪಡೆದ ಮೆಂಡಿಸ್, ಬಾಂಗ್ಲಾದೇಶದ ವಿರುದ್ಧದ ಟೆಸ್ಟ್ನ ಎರಡೂ ಇನ್ನಿಂಗ್ಸ್ನಲ್ಲಿ ಶತಕ ಬಾರಿಸಿದ್ದರು. ಚಿತ್ತಗಾಂಗ್ ಟೆಸ್ಟ್‌ನಲ್ಲಿ ಕೂಡ ಅವರು ಅಜೇಯ 92 ರನ್ ಗಳಿಸುವಲ್ಲಿ ಯಶಸ್ವಿಯಾದರು.
5 / 6
ಆ ಬಳಿಕ ಇಂಗ್ಲೆಂಡ್ ವಿರುದ್ಧ ನಡೆದ ಮ್ಯಾಂಚೆಸ್ಟರ್ ಟೆಸ್ಟ್‌ನಲ್ಲಿ 113 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದ ಮೆಂಡಿಸ್, ಲಾರ್ಡ್ಸ್ ಟೆಸ್ಟ್‌ನಲ್ಲಿ 74 ರನ್ ಬಾರಿಸಿದ್ದರು. ಹಾಗೆಯೇ ಓವಲ್ ಟೆಸ್ಟ್‌ನಲ್ಲಿಯೂ ಅವರ ಬ್ಯಾಟ್ನಿಂದ 64 ರನ್‌ಗಳ ಇನ್ನಿಂಗ್ಸ್ ಆಡಿದ್ದರು. ಇದೀಗ ಗಾಲೆ ಟೆಸ್ಟ್‌ನಲ್ಲಿ ಶತಕ ಬಾರಿಸಿದ್ದಾರೆ. ಮೆಂಡಿಸ್ ಅವರು ಬಾಂಗ್ಲಾದೇಶ, ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್‌ನಂತಹ ಬಲಿಷ್ಠ ತಂಡಗಳ ವಿರುದ್ಧ ಟೆಸ್ಟ್ ಶತಕ ಬಾರಿಸಿರುವುದು ಗಮನಾರ್ಹ ಸಂಗತಿಯಾಗಿದೆ.
6 / 6
ಈ ಶತಕದೊಂದಿಗೆ ಕಮಿಂದು ಮೆಂಡಿಸ್ ಅವರು ಟೆಸ್ಟ್‌ನಲ್ಲಿ ಆಡಿದ 11ನೇ ಇನ್ನಿಂಗ್ಸ್‌ನಲ್ಲಿ ನಾಲ್ಕನೇ ಶತಕ ಸಿಡಿಸುವ ಮೂಲಕ ಕ್ರಿಕೆಟ್ ದಂತಕಥೆ ಆಸ್ಟ್ರೇಲಿಯಾದ ಡಾನ್ ಬ್ರಾಡ್ಮನ್ ಅವರ ವಿಶೇಷ ದಾಖಲೆಯನ್ನು ಸರಿಗಟ್ಟಿದ್ದಾರೆ. ಬ್ರಾಡ್ಮನ್ ಕೂಡ ಮೊದಲ 11 ಇನ್ನಿಂಗ್ಸ್ಗಳಲ್ಲಿ 4 ಶತಕ ಬಾರಿಸಿದ್ದ ಸಾಧನೆ ಮಾಡಿದ್ದರು.