- Kannada News Photo gallery Cricket photos SL vs NZ Srilanka Cricket Board Announced 17 Probable Team For New Zealand Test Series
SL vs NZ: ಕಿವೀಸ್ ವಿರುದ್ಧದ ಸರಣಿಗೆ ಲಂಕಾ ತಂಡ ಪ್ರಕಟ; ಸರಣಿ ಗೆದ್ದರೆ, ಡಬ್ಲ್ಯುಟಿಸಿ ಫೈನಲ್ನಿಂದ ಆಸೀಸ್ ಔಟ್!
SL vs NZ: ಮಾರ್ಚ್ 9 ರಿಂದ ಪ್ರಾರಂಭವಾಗಲಿರುವ ಶ್ರೀಲಂಕಾ ಮತ್ತು ನ್ಯೂಜಿಲೆಂಡ್ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿಗೆ ಶ್ರೀಲಂಕಾ ಕ್ರಿಕೆಟ್ ಮಂಡಳಿಯು 17 ಸದಸ್ಯರ ತಂಡವನ್ನು ಪ್ರಕಟಿಸಿದೆ.
Updated on: Feb 25, 2023 | 11:40 AM

ಮಾರ್ಚ್ 9 ರಿಂದ ಪ್ರಾರಂಭವಾಗಲಿರುವ ಶ್ರೀಲಂಕಾ ಮತ್ತು ನ್ಯೂಜಿಲೆಂಡ್ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿಗೆ ಶ್ರೀಲಂಕಾ ಕ್ರಿಕೆಟ್ ಮಂಡಳಿಯು 17 ಸದಸ್ಯರ ತಂಡವನ್ನು ಪ್ರಕಟಿಸಿದೆ.

ದಿಮುತ್ ಕರುಣಾರತ್ನೆ ನಾಯಕತ್ವದಲ್ಲಿ ಕುಶಾಲ್ ಮೆಂಡಿಸ್, ಏಂಜೆಲೊ ಮ್ಯಾಥ್ಯೂಸ್, ಧನುಂಜಯ ಡಿ ಸಿಲ್ವಾ, ದಿನೇಶ್ ಚಾಂಡಿಮಲ್, ಲಹಿರು ಕುಮಾರ, ಚಾಮಿಕಾ ಕರುಣಾರತ್ನೆ, ಕಸುನ್ ರಜಿತಾ ಮೊದಲಾದವರನ್ನೊಳಗೊಂಡ ಬಲಿಷ್ಠ ತಂಡ ಕಿವೀಸ್ ತಂಡವನ್ನು ಎದುರಿಸಲು ಸಜ್ಜಾಗಿದೆ.

ನ್ಯೂಜಿಲೆಂಡ್ ವಿರುದ್ಧದ ಈ ಎರಡು ಟೆಸ್ಟ್ ಪಂದ್ಯಗಳ ಸರಣಿಯನ್ನು ಲಂಕಾ ತಂಡ ವೈಟ್ ವಾಶ್ ಮಾಡಿದರೆ, ಡಬ್ಲ್ಯುಟಿಸಿ ಫೈನಲ್‌ನಲ್ಲಿ ಟೀಂ ಇಂಡಿಯಾವನ್ನು ಎದುರಿಸುವ ಅವಕಾಶವನ್ನು ಪಡೆದುಕೊಳ್ಳಲಿದೆ.

ಆದರೆ ಡಬ್ಲ್ಯುಟಿಸಿ ಫೈನಲ್‌ನಲ್ಲಿ ಭಾರತ- ಲಂಕಾ ಮುಖಾಮುಖಿಯಾಗಬೇಕೆಂದರೆ, ಬಾರ್ಡರ್ ಗವಾಸ್ಕರ್ ಟ್ರೋಫಿಯ ಉಳಿದ ಎರಡು ಟೆಸ್ಟ್‌ಗಳನ್ನು ಭಾರತ ಗೆಲ್ಲಬೇಕಿದೆ. ಇತ್ತ ಲಂಕಾ ತಂಡ ಕೂಡ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಬೇಕಿದೆ. ಹೀಗಾದರೆ ಮಾತ್ರ ಡಬ್ಲ್ಯುಟಿಸಿ ಫೈನಲ್‌ನಲ್ಲಿ ಟೀಂ ಇಂಡಿಯಾ ಮತ್ತು ಶ್ರೀಲಂಕಾ ಮುಖಾಮುಖಿಯಾಗಲಿವೆ.

ಲಂಕಾ ತಂಡ: ದಿಮುತ್ ಕರುಣಾರತ್ನೆ (ನಾಯಕ), ಓಷಾದ ಫೆರ್ನಾಂಡೋ, ಕುಶಾಲ್ ಮೆಂಡಿಸ್, ಏಂಜೆಲೊ ಮ್ಯಾಥ್ಯೂಸ್, ಧನುಂಜಯ ಡಿ ಸಿಲ್ವಾ, ದಿನೇಶ್ ಚಾಂಡಿಮಲ್, ಕಮಿಂದು ಮೆಂಡಿಸ್, ನಿರೋಶನ್ ಡಿಕ್ವೆಲ್ಲಾ, ನಿಶಾನ್ ಮದುಶಂಕ, ರಮೇಶ್ ಮೆಂಡಿಸ್, ಪ್ರಬತ್ ಕುಮಾರ ಜಯಸೂರ್ಯ, ಚಮಿಕಾ ಕರುಣರತ್ನೆ, ಎ. ಫೆರ್ನಾಂಡೋ, ವಿಶ್ವ ಫೆರ್ನಾಂಡೋ, ಮಿಲನ್ ರತ್ನನಾಯಕ್.




