- Kannada News Photo gallery Cricket photos Smriti Mandhana Achieves 10,000 International Runs Record in Cricket
IND-W vs SL-W: ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 10000 ರನ್ ಪೂರೈಸಿದ ಸ್ಮೃತಿ ಮಂಧಾನ
Smriti Mandhana: ಶ್ರೀಲಂಕಾ ವಿರುದ್ಧದ 4ನೇ ಟಿ20 ಪಂದ್ಯದಲ್ಲಿ ಸ್ಮೃತಿ ಮಂಧಾನ ಭರ್ಜರಿ ಕಂಬ್ಯಾಕ್ ಮಾಡಿ, ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 10,000 ರನ್‌ಗಳ ಗಡಿ ದಾಟಿದ್ದಾರೆ. ಮಿಥಾಲಿ ರಾಜ್ ನಂತರ ಈ ಸಾಧನೆ ಮಾಡಿದ ಎರಡನೇ ಭಾರತೀಯ ಮಹಿಳಾ ಕ್ರಿಕೆಟರ್ ಇವರಾಗಿದ್ದಾರೆ. ಆರಂಭಿಕ ಪಂದ್ಯಗಳಲ್ಲಿ ರನ್ ಬರ ಎದುರಿಸಿದ್ದ ಸ್ಮೃತಿ, ಈ ಐತಿಹಾಸಿಕ ಮೈಲಿಗಲ್ಲನ್ನು ತಲುಪಿ ಭಾರತೀಯ ಮಹಿಳಾ ಕ್ರಿಕೆಟ್‌ನಲ್ಲಿ ಹೊಸ ದಾಖಲೆ ನಿರ್ಮಿಸಿದ್ದಾರೆ.
Updated on: Dec 28, 2025 | 7:58 PM

ಭಾರತ ಹಾಗೂ ಶ್ರೀಲಂಕಾ ಮಹಿಳಾ ತಂಡಗಳ ನಡುವಿನ 4ನೇ ಟಿ20 ಪಂದ್ಯ ತಿರುವನಂತಪುರದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಸೋತ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡುತ್ತಿದೆ. ತಂಡಕ್ಕೆ ಆರಂಭಿಕರಿಬ್ಬರು ಉತ್ತಮ ಆರಂಭ ಒದಗಿಸಿಕೊಟ್ಟಿದ್ದಾರೆ. ಅದರಲ್ಲೂ ಮೊದಲ ಮೂರು ಪಂದ್ಯಗಳಲ್ಲಿ ರನ್ ಬರ ಎದುರಿಸಿದ್ದ ಸ್ಮೃತಿ ಈ ಪಂದ್ಯದಲ್ಲಿ ಭರ್ಜರಿಯಾಗಿ ಬ್ಯಾಟ್ ಬೀಸಿದ್ದಾರೆ.

ವಾಸ್ತವವಾಗಿ ಲಂಕಾ ವಿರುದ್ಧದ ಮೊದಲ 3 ಪಂದ್ಯಗಳಲ್ಲಿ ಸ್ಮೃತಿಗೆ ಉತ್ತಮ ಆರಂಭ ಒದಗಿಸಲು ಸಾಧ್ಯವಾಗಿರಲಿಲ್ಲ. ಆದರೆ 4ನೇ ಟಿ20 ಪಂದ್ಯದಲ್ಲಿ ತಮ್ಮ ಹಳೆಯ ಲಯಕ್ಕೆ ಮರಳಿರುವ ಸ್ಮೃತಿ, ಶಫಾಲಿಯೊಂದಿಗೆ ಉತ್ತಮ ಜೊತೆಯಾಟ ಕಟ್ಟುವ ಮೂಲಕ ತಂಡಕ್ಕೆ ಭದ್ರ ಬುನಾದಿ ಹಾಕಿಕೊಟ್ಟಿರುವುದಲ್ಲದೆ ದಾಖಲೆಯನ್ನು ಸಹ ನಿರ್ಮಿಸಿದ್ದಾರೆ.

ತಿರುವನಂತಪುರದಲ್ಲಿ ನಡೆಯುತ್ತಿರುವ 4ನೇ ಟಿ20 ಪಂದ್ಯದಲ್ಲಿ ಸ್ಮೃತಿ ಮಂಧಾನ 27 ರನ್‌ಗಳ ಗಡಿ ದಾಟುವ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 10000 ರನ್‌ಗಳ ಗಡಿ ದಾಟಿದ್ದಾರೆ. ಈ ಮೂಲಕ ಭಾರತದ ಪರ ಈ ಸಾಧನೆ ಮಾಡಿದ ಎರಡನೇ ಮಹಿಳಾ ಕ್ರಿಕೆಟರ್ ಎನಿಸಿಕೊಂಡಿದ್ದಾರೆ. ಸ್ಮೃತಿಗೂ ಮೊದಲು ತಂಡದ ಮಾಜಿ ನಾಯಕಿ ಮಿಥಾಲಿ ರಾಜ್ ಈ ಸಾಧನೆ ಮಾಡಿದ್ದರು.

ಭಾರತದ ಪರ ಇದುವರೆಗೆ ಏಳು ಟೆಸ್ಟ್ ಪಂದ್ಯಗಳನ್ನಾಡಿರುವ ಸ್ಮೃತಿ ಇದರಲ್ಲಿ 629 ರನ್‌ಗಳು ಮತ್ತು 117 ಏಕದಿನ ಪಂದ್ಯಗಳಲ್ಲಿ 5,322 ರನ್‌ಗಳನ್ನು ಗಳಿಸಿದ್ದಾರೆ. ಹಾಗೆಯೇ ಟಿ20 ಕ್ರಿಕೆಟ್‌ನಲ್ಲಿ 4000 ಕ್ಕೂ ಅಧಿಕ ರನ್ ಕಲೆಹಾಕಿರುವ ಸ್ಮೃತಿ ಇದೀಗ ಭಾರತ ಮಹಿಳಾ ಕ್ರಿಕೆಟ್‌ನಲ್ಲಿ ಐತಿಹಾಸಿಕ ಮೈಲಿಗಲ್ಲು ದಾಟಿದ್ದಾರೆ.

ಮಹಿಳಾ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿರುವ ಮಿಥಾಲಿ ರಾಜ್ ತಮ್ಮ ವೃತ್ತಿಜೀವನದಲ್ಲಿ ಮೂರು ಸ್ವರೂಪಗಳಲ್ಲಿ 10,868 ರನ್ ಕಲೆಹಾಕಿದ್ದರೆ, ಇದೀಗ 10000 ರನ್‌ಗಳ ಗಡಿ ದಾಟಿರುವ ಸ್ಮೃತಿ, ಮಿಥಾಲಿ ಅವರ ದಾಖಲೆಯನ್ನು ಇನ್ನು ಕೆಲವೇ ಪಂದ್ಯಗಳಲ್ಲಿ ಮುರಿಯಲಿದ್ದಾರೆ.
