
ಐರ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಮಹಿಳಾ ತಂಡ ಆರು ವಿಕೆಟ್‌ಗಳಿಂದ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಟೀಂ ಇಂಡಿಯಾದ ಈ ಗೆಲುವಿನಲ್ಲಿ ಪ್ರತೀಕಾ ರಾವಲ್, ತೇಜಲ್ ಹಸ್ಬಾನಿಸ್ ಹಾಗೂ ನಾಯಕಿ ಸ್ಮೃತಿ ಮಂಧಾನ ಅವರ ಕೊಡುಗೆ ಅಪಾರವಾಗಿತ್ತು.

ಈ ವೇಳೆ ಆರಂಭಿಕ ಆಟಗಾರ್ತಿ ಪ್ರತೀಕಾ ರಾವಲ್ 89 ರನ್‌ಗಳ ಪ್ರಬಲ ಇನ್ನಿಂಗ್ಸ್ ಆಡಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದರೆ, ತೇಜಲ್ ಹಸ್ಬಾನಿಸ್ ಕೂಡ 53 ರನ್‌ಗಳ ಅಜೇಯ ಇನ್ನಿಂಗ್ಸ್ ಆಡುವ ಮೂಲಕ ಪ್ರಮುಖ ಪಾತ್ರ ವಹಿಸಿದರು. ಈ ಇಬ್ಬರಲ್ಲದೆ ನಾಯಕಿ ಸ್ಮೃತಿ ಮಂಧಾನ ಕೂಡ 41 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಕಟ್ಟಿದರು. ಈ ಮೂಲಕ ಮಂಧಾನ ಹಲವು ದಾಖಲೆಗಳನ್ನು ಮಾಡಿದರು.

ಎಂದಿನಂತೆ ಈ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ಸ್ಮೃತಿ ಮಂಧಾನ 29 ಎಸೆತಗಳಲ್ಲಿ 41 ರನ್‌ಗಳ ವೇಗದ ಇನ್ನಿಂಗ್ಸ್ ಆಡಿದರು. ಮಂಧಾನ ಅವರ ಇನ್ನಿಂಗ್ಸ್‌ನಲ್ಲಿ 6 ಬೌಂಡರಿ ಮತ್ತು ಒಂದು ಸಿಕ್ಸರ್ ಕೂಡ ಸೇರಿತ್ತು. ಈ 41 ರನ್‌ಗಳ ಇನ್ನಿಂಗ್ಸ್ನೊಂದಿಗೆ ಏಕದಿನದಲ್ಲಿ 4 ಸಾವಿರ ರನ್ ಪೂರೈಸಿದ ಮಂಧಾನ, ಮಾಜಿ ನಾಯಕಿ ಮಿಥಾಲಿ ರಾಜ್ ಅವರ ದಾಖಲೆ ಮುರಿದರು.

ಏಕದಿನದಲ್ಲಿ 4 ಸಾವಿರ ರನ್ ಪೂರೈಸಿದ ಮಂಧಾನ, ಮಹಿಳಾ ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ಕಡಿಮೆ ಇನ್ನಿಂಗ್ಸ್ಗಳಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರು ತಮ್ಮ ಏಕದಿನ ವೃತ್ತಿಜೀವನದ 95 ನೇ ಇನ್ನಿಂಗ್ಸ್‌ನಲ್ಲಿ ಈ ಮೈಲಿಗಲ್ಲು ಸಾಧಿಸಿದರು. ಈ ಮೂಲಕ ಮಂಧಾನ, ಮಿಥಾಲಿ ರಾಜ್ ಅವರ ದಾಖಲೆಯನ್ನು ಮುರಿದಿದ್ದಾರೆ.

ವಾಸ್ತವವಾಗಿ ಟೀಂ ಇಂಡಿಯಾದ ಮಾಜಿ ನಾಯಕಿ ಮಿಥಾಲಿ ರಾಜ್ 112ನೇ ಇನ್ನಿಂಗ್ಸ್‌ನಲ್ಲಿ ಈ ಸಾಧನೆ ಮಾಡಿದರು. ಅದೇ ಸಮಯದಲ್ಲಿ, ಪುರುಷರ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಮಾತ್ರ ಭಾರತದ ಪರ ಮಂಧಾನಕ್ಕಿಂತ ವೇಗವಾಗಿ 4 ಸಾವಿರ ರನ್ ಪೂರೈಸಿದ್ದಾರೆ. ವಿರಾಟ್ 4,000 ರನ್ ಪೂರೈಸಲು 93 ಇನ್ನಿಂಗ್ಸ್ ತೆಗೆದುಕೊಂಡಿದ್ದರು.

ಐರ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಸ್ಮೃತಿ ಮಂಧಾನ ಬ್ಯಾಟಿಂಗ್ ಮೂಲಕ ಸಂಚಲನ ಮೂಡಿಸಿದರು. ಮಂಧಾನ 29 ಎಸೆತಗಳಲ್ಲಿ 41 ರನ್ ಗಳಿಸಿ ಅದ್ಭುತ ಇನ್ನಿಂಗ್ಸ್ ಆಡಿದರು. 239 ರನ್‌ಗಳ ಗುರಿ ಬೆನ್ನತ್ತಿದ ಭಾರತ ತಂಡಕ್ಕೆ ಪ್ರತೀಕಾ ರಾವಲ್ ಜೊತೆ ಮಂಧಾನ ಭರ್ಜರಿ ಆರಂಭ ನೀಡಿ ಮೊದಲ ವಿಕೆಟ್‌ಗೆ 9.6 ಓವರ್‌ಗಳಲ್ಲಿ 70 ರನ್ ಸೇರಿಸಿದರು. ಆದರೆ, ಮಂಧಾನ ಉತ್ತಮ ಆರಂಭವನ್ನು ದೊಡ್ಡ ಇನ್ನಿಂಗ್ಸ್ ಆಗಿ ಪರಿವರ್ತಿಸಲು ಸಾಧ್ಯವಾಗಲಿಲ್ಲ.