- Kannada News Photo gallery Cricket photos Smriti Mandhana and Renuka Singh gain places in latest ICC Womens T20I rankings
ICC T20I rankings: ಟಿ20 ರ‍್ಯಾಂಕಿಂಗ್: ಸ್ಮೃತಿ ಮಂಧಾನಗೆ ಭಾರಿ ಲಾಭ; ರೇಣುಕಾ ಸಿಂಗ್ಗೂ ಮುಂಬಡ್ತಿ
ICC T20I rankings: ಇತ್ತೀಚೆಗಷ್ಟೇ ಮುಕ್ತಾಯಗೊಂಡ ಏಷ್ಯಾಕಪ್‌ನ ಫೈನಲ್‌ನಲ್ಲಿ ಭಾರತ ಮಹಿಳಾ ತಂಡ ಶ್ರೀಲಂಕಾ ವಿರುದ್ಧ ಸೋಲನ್ನು ಎದುರಿಸಬೇಕಾಗಿ ಬಂದಿದ್ದರೂ, ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಸ್ಮೃತಿ ಮಂಧಾನ ಹಾಗೂ ವೇಗದ ಬೌಲರ್ ರೇಣುಕಾ ಸಿಂಗ್ ಠಾಕೂರ್ ಅವರು ಇತ್ತೀಚಿನ ಐಸಿಸಿ ಟಿ20 ರ‍್ಯಾಂಕಿಂಗ್‌ನಲ್ಲಿ ಭರ್ಜರಿ ಲಾಭ ಗಳಿಸಿದ್ದಾರೆ.
Updated on: Jul 30, 2024 | 5:15 PM

ಇತ್ತೀಚೆಗಷ್ಟೇ ಮುಕ್ತಾಯಗೊಂಡ ಏಷ್ಯಾಕಪ್‌ನ ಫೈನಲ್‌ನಲ್ಲಿ ಭಾರತ ಮಹಿಳಾ ತಂಡ ಶ್ರೀಲಂಕಾ ವಿರುದ್ಧ ಸೋಲನ್ನು ಎದುರಿಸಬೇಕಾಗಿ ಬಂದಿದ್ದರೂ, ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಸ್ಮೃತಿ ಮಂಧಾನ ಅವರು ಇತ್ತೀಚಿನ ಐಸಿಸಿ ಟಿ20 ರ‍್ಯಾಂಕಿಂಗ್‌ನಲ್ಲಿ ಭರ್ಜರಿ ಲಾಭ ಗಳಿಸಿದ್ದಾರೆ.

ಶ್ರೀಲಂಕಾ ವಿರುದ್ಧದ ಮಹಿಳಾ ಏಷ್ಯಾಕಪ್ ಟಿ20 ಟೂರ್ನಿಯ ಫೈನಲ್ ಪಂದ್ಯದಲ್ಲಿ ಸ್ಮೃತಿ ಮಂಧಾನ ಹೊರತುಪಡಿಸಿ, ಇತರ ಎಲ್ಲಾ ಬ್ಯಾಟರ್ಸ್ಗಳು ಸಂಪೂರ್ಣವಾ ವಿಫಲರಾಗಿದ್ದರು. ಮಂಧಾನ 60 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದ್ದರು. ಅವರಿಂದಲೇ ತಂಡ ಗೌರವಾನ್ವಿತ ಸ್ಕೋರ್ ತಲುಪಲು ಸಾಧ್ಯವಾಯಿತು.

ಇದು ಮಾತ್ರವಲ್ಲದೆ ಇಡೀ ಟೂರ್ನಿಯಲ್ಲಿ ಸ್ಮೃತಿ ಆಟಗಾರ್ತಿಯಾಗಿ ಅದ್ಭುತ ಪ್ರದರ್ಶನ ನೀಡಿದ್ದರು. ಇದರ ಜೊತೆಗೆ ನೇಪಾಳ ವಿರುದ್ಧದ ಪಂದ್ಯದಲ್ಲಿ ನಿಯಮಿತ ನಾಯಕಿ ಹರ್ಮನ್‌ಪ್ರೀತ್ ಕೌರ್‌ಗೆ ವಿಶ್ರಾಂತಿ ನೀಡಲಾಗಿತ್ತು. ಹೀಗಾಗಿ ತಂಡದ ನಾಯಕತ್ವವಹಿಸಿಕೊಂಡಿದ್ದ ಮಂಧಾನ ತಂಡವನ್ನು ಗೆಲುವಿನತ್ತ ಮುನ್ನಡೆಸಿದ್ದರು.

ಇದೀಗ ಐಸಿಸಿ ಮಹಿಳಾ ಟಿ20 ಶ್ರೇಯಾಂಕದಲ್ಲಿ ಮಂಧಾನ ಒಂದು ಸ್ಥಾನ ಮೇಲಕ್ಕೇರಿದ್ದು, 743 ರೇಟಿಂಗ್ ಪಾಯಿಂಟ್ಗಳೊಂದಿಗೆ ಐದನೇ ಸ್ಥಾನದಿಂದ ನಾಲ್ಕನೇ ಸ್ಥಾನಕ್ಕೆ ತಲುಪಿದ್ದಾರೆ. ಇದರೊಂದಿಗೆ ಐಸಿಸಿ ಟಿ20 ರ್ಯಾಂಕಿಂಗ್‌ನ ಬ್ಯಾಟರ್ಸ್ಗಳ ಪಟ್ಟಿಯಲ್ಲಿ ಟಾಪ್-10 ರಲ್ಲಿರುವ ಏಕೈಕ ಭಾರತೀಯ ಮಹಿಳಾ ಆಟಗಾರ್ತಿಯಾಗಿದ್ದಾರೆ.

ಇವರಲ್ಲದೆ 11ನೇ ಸ್ಥಾನದಲ್ಲಿರುವ ಶೆಫಾಲಿ ವರ್ಮಾ 631 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿದ್ದಾರೆ.ಉಳಿದಂತೆ ನಾಯಕಿ ಹರ್ಮನ್‌ಪ್ರೀತ್ ಕೌರ್ 16ನೇ ಸ್ಥಾನದಲ್ಲಿದ್ದು, 607 ರೇಟಿಂಗ್ ಅಂಕಗಳನ್ನು ಹೊಂದಿರುವ ಅವರು ಐದು ಸ್ಥಾನಗಳನ್ನು ಕಳೆದುಕೊಂಡಿದ್ದಾರೆ.

ಇನ್ನು ಬೌಲರ್‌ಗಳ ಪೈಕಿ ಏಷ್ಯಾಕಪ್ ಟೂರ್ನಿಯಲ್ಲಿ ಏಳು ವಿಕೆಟ್ ಪಡೆದಿದ್ದ ವೇಗದ ಬೌಲರ್ ರೇಣುಕಾ ಸಿಂಗ್ ಠಾಕೂರ್ ಪ್ರಸ್ತುತ ಐದನೇ ಸ್ಥಾನ ಪಡೆದುಕೊಂಡಿದ್ದಾರೆ. ಒಂದು ಸ್ಥಾನ ಮೇಲೇರಿರುವ ರೇಣುಕಾ 743 ರೇಟಿಂಗ್ ಅಂಕಗಳನ್ನು ಹೊಂದಿದ್ದಾರೆ. ಉಳಿದಂತೆ ಭಾರತದ ದೀಪ್ತಿ ಶರ್ಮಾ ಮೂರನೇ ಸ್ಥಾನದಲ್ಲಿದ್ದಾರೆ.




