ಕಣಕ್ಕಿಳಿಯುತ್ತಿದ್ದಂತೆ ವಿಶೇಷ ದಾಖಲೆ ಬರೆದ ಸ್ಮೃತಿ ಮಂಧಾನ
England Women vs India Women: ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 181 ರನ್ ಕಲೆಹಾಕಿದರೆ, ಇಂಗ್ಲೆಂಡ್ 157 ರನ್ಗಳಿಸಲಷ್ಟೇ ಶಕ್ತರಾದರು. ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಆಟಗಾರ್ತಿ ಸ್ಮೃತಿ ಮಂಧಾನ ವಿಶೇಷ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡರು.
ಬ್ರಿಸ್ಟಲ್ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ (Smriti Mandhana) ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ರೋಹಿತ್ ಶರ್ಮಾ ಹಾಗೂ ಹರ್ಮನ್ಪ್ರೀತ್ ಕೌರ್ ಅವರ ಸಾಧನೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.
1 / 5
ಹೌದು, ಸ್ಮೃತಿ ಮಂಧಾನ ಭಾರತದ ಪರ 150 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ಎರಡನೇ ಭಾರತೀಯ ಆಟಗಾರ್ತಿ ಎನಿಸಿಕೊಂಡಿದ್ದಾರೆ. ಹಾಗೆಯೇ ಈ ಸಾಧನೆ ಮಾಡಿದ ಟೀಮ್ ಇಂಡಿಯಾದ ಮೂರನೇ ಪ್ಲೇಯರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
2 / 5
2013 ರಿಂದ ಟಿ20 ಅಂತಾರಾಷ್ಟ್ರೀಯ ಪಂಂದ್ಯಗಳನ್ನಾಡುತ್ತಿರುವ ಸ್ಮೃತಿ ಮಂಧಾನ ಇದೀಗ 150 ಮ್ಯಾಚ್ಗಳ ಮೈಲಿಗಲ್ಲು ಮುಟ್ಟಿದ್ದಾರೆ. ಈ ವೇಳೆ ಒಟ್ಟು 144 ಇನಿಂಗ್ಸ್ ಆಡಿರುವ ಅವರು 3126 ಎಸೆತಗಳನ್ನು ಎದುರಿಸಿ ಒಟ್ಟು 3886 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ರನ್ಗಳಿಸಿದ ವಿಶ್ವದ 2ನೇ ಆಟಗಾರ್ತಿ ಎನಿಸಿಕೊಂಡಿದ್ದಾರೆ.
3 / 5
ಇನ್ನು ಟೀಮ್ ಇಂಡಿಯಾ ಪರ 150 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ಮೊದಲ ಆಟಗಾರ್ತಿ ಹರ್ಮನ್ಪ್ರೀತ್ ಕೌರ್. 2009 ರಿಂದ ಭಾರತದ ಪರ ಕಣಕ್ಕಿಳಿಯುತ್ತಿರುವ ಹರ್ಮನ್ಪ್ರೀತ್ ಈವರೆಗೆ 179 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 159 ಇನಿಂಗ್ಸ್ ಆಡಿರುವ ಅವರು 3305 ಎಸೆತಗಳಲ್ಲಿ 3590 ರನ್ ಕಲೆಹಾಕಿದ್ದಾರೆ.
4 / 5
ಹಾಗೆಯೇ ಭಾರತ ಪುರುಷರ ತಂಡದ ಪರ ಅತ್ಯಧಿಕ ಟಿ20 ಪಂದ್ಯಗಳನ್ನಾಡಿದ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿದೆ. ಟೀಮ್ ಇಂಡಿಯಾ ಪರ ಹಿಟ್ಮ್ಯಾನ್ 159 ಟಿ20 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ಈ ವೇಳೆ 151 ಇನಿಂಗ್ಸ್ ಆಡಿರುವ ಅವರು 3003 ಎಸೆತಗಳಲ್ಲಿ 4231 ರನ್ ಕಲೆಹಾಕಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.