AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಸ್ಮೃತಿ ಮಂಧಾನ

India Women vs Sri Lanka Women: ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ ಜಯಭೇರಿ ಬಾರಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 121 ರನ್​ ಕಲೆಹಾಕಿತು. ಈ ಗುರಿಯನ್ನು ಟೀಮ್ ಇಂಡಿಯಾ 14.4 ಓವರ್​​​ಗಳಲ್ಲಿ ಚೇಸ್ ಮಾಡಿ 8 ವಿಕೆಟ್​​ಗಳ ಭರ್ಜರಿ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Dec 22, 2025 | 7:24 AM

Share
ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ತಂಡ ಭರ್ಜರಿ ಜಯ ಸಾಧಿಸಿದೆ. ಈ ಜಯದೊಂದಿಗೆ ಟೀಮ್ ಇಂಡಿಯಾದ ಉಪನಾಯಕಿ ಸ್ಮೃತಿ ಮಂಧಾನ (Smriti Mandhana) ವಿಶೇಷ ದಾಖಲೆಯನ್ನು ಸಹ ನಿರ್ಮಿಸಿದ್ದಾರೆ. ಅಲ್ಲದೆ ಈ ವಿಶ್ವ ದಾಖಲೆ ಬರೆದ ವಿಶ್ವದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

1 / 5
ವಿಶಾಖಪಟ್ಟಣದಲ್ಲಿ ನಡೆದ ಈ ಪಂದ್ಯದಲ್ಲಿ ಆರಂಭಿಕಳಾಗಿ ಕಣಕ್ಕಿಳಿದ ಸ್ಮೃತಿ ಮಂಧಾನ 25 ರನ್​ ಬಾರಿಸಿದ್ದರು. ಈ ಇಪ್ಪತ್ತೈದು ರನ್​ಗಳೊಂದಿಗೆ ಸ್ಮೃತಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 4000 ರನ್​ಗಳನ್ನು ಪೂರೈಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಭಾರತ ಮೊದಲ ಮಹಿಳಾ ಬ್ಯಾಟರ್ ಎನಿಸಿಕೊಂಡಿದ್ದಾರೆ.

2 / 5
ಅಷ್ಟೇ ಅಲ್ಲದೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 4000 ರನ್​ ಕಲೆಹಾಕಿದ ವಿಶ್ವದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಕೂಡ ಸ್ಮೃತಿ ಮಂಧಾನ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ಸಾಧನೆ ಮಾಡಿದ ಏಕೈಕ ಬ್ಯಾಟರ್ ನ್ಯೂಝಿಲೆಂಡ್​ನ ಸುಝಿ ಬೆಟ್ಸ್​.

3 / 5
ನ್ಯೂಝಿಲೆಂಡ್ ಪರ 178 ಟಿ20 ಪಂದ್ಯಗಳನ್ನಾಡಿರುವ ಸುಝಿ ಬೆಟ್ಸ್ ಬರೋಬ್ಬರಿ 4748 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ಗಳಿಸಿದ ಮಹಿಳಾ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದೀಗ ಈ ಪಟ್ಟಿಯಲ್ಲಿ ಸ್ಮೃತಿ ಮಂಧಾನ ದ್ವಿತೀಯ ಸ್ಥಾನಕ್ಕೇರಿದ್ದಾರೆ.

4 / 5
ಸ್ಮೃತಿ ಮಂಧಾನ ಟೀಮ್ ಇಂಡಿಯಾ ಪರ ಈವರೆಗೆ 155 ಮ್ಯಾಚ್​ಗಳನ್ನಾಡಿದ್ದಾರೆ. ಈ ವೇಳೆ 1 ಶತಕ ಹಾಗೂ 31 ಅರ್ಧಶತಕಗಳನ್ನು ಬಾರಿಸಿರುವ ಸ್ಮೃತಿ ಒಟ್ಟು 4007 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 4 ಸಾವಿರ ರನ್ ಕಲೆಹಾಕಿದ ಭಾರತದ ಮೊದಲ ಮಹಿಳಾ ಬ್ಯಾಟರ್ ಹಾಗೂ ವಿಶ್ವದ 2ನೇ ಆಟಗಾರ್ತಿ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

5 / 5
Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ

ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್

ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ

ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ

ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್

BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ

ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ

ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ

ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ