- Kannada News Photo gallery Cricket photos Smriti Mandhana becomes first Indian to Reach 4000 runs in T20I
ಟಿ20 ಕ್ರಿಕೆಟ್ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಸ್ಮೃತಿ ಮಂಧಾನ
India Women vs Sri Lanka Women: ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ ಜಯಭೇರಿ ಬಾರಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 121 ರನ್ ಕಲೆಹಾಕಿತು. ಈ ಗುರಿಯನ್ನು ಟೀಮ್ ಇಂಡಿಯಾ 14.4 ಓವರ್ಗಳಲ್ಲಿ ಚೇಸ್ ಮಾಡಿ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
Updated on: Dec 22, 2025 | 7:24 AM

ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ತಂಡ ಭರ್ಜರಿ ಜಯ ಸಾಧಿಸಿದೆ. ಈ ಜಯದೊಂದಿಗೆ ಟೀಮ್ ಇಂಡಿಯಾದ ಉಪನಾಯಕಿ ಸ್ಮೃತಿ ಮಂಧಾನ (Smriti Mandhana) ವಿಶೇಷ ದಾಖಲೆಯನ್ನು ಸಹ ನಿರ್ಮಿಸಿದ್ದಾರೆ. ಅಲ್ಲದೆ ಈ ವಿಶ್ವ ದಾಖಲೆ ಬರೆದ ವಿಶ್ವದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

ವಿಶಾಖಪಟ್ಟಣದಲ್ಲಿ ನಡೆದ ಈ ಪಂದ್ಯದಲ್ಲಿ ಆರಂಭಿಕಳಾಗಿ ಕಣಕ್ಕಿಳಿದ ಸ್ಮೃತಿ ಮಂಧಾನ 25 ರನ್ ಬಾರಿಸಿದ್ದರು. ಈ ಇಪ್ಪತ್ತೈದು ರನ್ಗಳೊಂದಿಗೆ ಸ್ಮೃತಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 4000 ರನ್ಗಳನ್ನು ಪೂರೈಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಭಾರತ ಮೊದಲ ಮಹಿಳಾ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಅಷ್ಟೇ ಅಲ್ಲದೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 4000 ರನ್ ಕಲೆಹಾಕಿದ ವಿಶ್ವದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಕೂಡ ಸ್ಮೃತಿ ಮಂಧಾನ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ಸಾಧನೆ ಮಾಡಿದ ಏಕೈಕ ಬ್ಯಾಟರ್ ನ್ಯೂಝಿಲೆಂಡ್ನ ಸುಝಿ ಬೆಟ್ಸ್.

ನ್ಯೂಝಿಲೆಂಡ್ ಪರ 178 ಟಿ20 ಪಂದ್ಯಗಳನ್ನಾಡಿರುವ ಸುಝಿ ಬೆಟ್ಸ್ ಬರೋಬ್ಬರಿ 4748 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ರನ್ಗಳಿಸಿದ ಮಹಿಳಾ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದೀಗ ಈ ಪಟ್ಟಿಯಲ್ಲಿ ಸ್ಮೃತಿ ಮಂಧಾನ ದ್ವಿತೀಯ ಸ್ಥಾನಕ್ಕೇರಿದ್ದಾರೆ.

ಸ್ಮೃತಿ ಮಂಧಾನ ಟೀಮ್ ಇಂಡಿಯಾ ಪರ ಈವರೆಗೆ 155 ಮ್ಯಾಚ್ಗಳನ್ನಾಡಿದ್ದಾರೆ. ಈ ವೇಳೆ 1 ಶತಕ ಹಾಗೂ 31 ಅರ್ಧಶತಕಗಳನ್ನು ಬಾರಿಸಿರುವ ಸ್ಮೃತಿ ಒಟ್ಟು 4007 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ 4 ಸಾವಿರ ರನ್ ಕಲೆಹಾಕಿದ ಭಾರತದ ಮೊದಲ ಮಹಿಳಾ ಬ್ಯಾಟರ್ ಹಾಗೂ ವಿಶ್ವದ 2ನೇ ಆಟಗಾರ್ತಿ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.
