Smriti Mandhana: ವಿಶೇಷ ದಾಖಲೆ ಬರೆದ ಸ್ಮೃತಿ ಮಂಧಾನ

| Updated By: ಝಾಹಿರ್ ಯೂಸುಫ್

Updated on: Jan 06, 2024 | 8:56 AM

Smriti Mandhana Records: 142 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾಗೆ ಸ್ಮೃತಿ ಮಂಧಾನ ಉತ್ತಮ ಆರಂಭ ಒದಗಿಸಿದರು. 52 ಎಸೆತಗಳನ್ನು ಎದುರಿಸಿದ ಸ್ಮೃತಿ 1 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 54 ರನ್​ ಬಾರಿಸಿ ವಿಕೆಟ್ ಒಪ್ಪಿಸಿದರು.

1 / 6
ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ಮಹಿಳಾ ತಂಡದ ವಿರುದ್ಧದ ಮೊದಲ ಪಂದ್ಯದಲ್ಲಿ ಭಾರತ ಮಹಿಳಾ ತಂಡ 9 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಬೌಲಿಂಗ್ ಆಯ್ದುಕೊಂಡಿತು.

2 / 6
ಅದರಂತೆ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ಟಿಟಾಸ್ ಸಾಧು ಅವರ ಮಾರಕ ದಾಳಿಗೆ ತತ್ತರಿಸಿತು. ಪರಿಣಾಮ 19.2 ಓವರ್​ಗಳಲ್ಲಿ ಆಸ್ಟ್ರೇಲಿಯಾ ತಂಡ 141 ರನ್​ಗಳಿಸಿ ಆಲೌಟ್ ಆಗಿದೆ. ಭಾರತದ ಪರ ಟಿಟಾಸ್ ಸಾಧು 4 ಓವರ್​ಗಳಲ್ಲಿ ಕೇವಲ 17 ರನ್ ನೀಡಿ 4 ವಿಕೆಟ್ ಕಬಳಿಸಿ ಮಿಂಚಿದರು.

3 / 6
ಇನ್ನು 142 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾಗೆ ಸ್ಮೃತಿ ಮಂಧಾನ ಉತ್ತಮ ಆರಂಭ ಒದಗಿಸಿದರು. 52 ಎಸೆತಗಳನ್ನು ಎದುರಿಸಿದ ಸ್ಮೃತಿ 1 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 54 ರನ್​ ಬಾರಿಸಿ ವಿಕೆಟ್ ಒಪ್ಪಿಸಿದರು.

4 / 6
ಈ ಅರ್ಧಶತಕದೊಂದಿಗೆ ಸ್ಮೃತಿ ಮಂಧಾನ ಟಿ20 ಕ್ರಿಕೆಟ್​ನಲ್ಲಿ 3000 ರನ್ ಪೂರೈಸಿದ್ದಾರೆ. ಈ ಸಾಧನೆ ಮಾಡಿದ ಭಾರತದ 2ನೇ ಆಟಗಾರ್ತಿ ಹಾಗೂ ವಿಶ್ವದ 6ನೇ ಮಹಿಳಾ ಬ್ಯಾಟರ್ ಎಂಬ ಹೆಗ್ಗಳಿಕೆ ಸ್ಮೃತಿ ಪಾತ್ರರಾದರು.

5 / 6
ಇದಕ್ಕೂ ಮುನ್ನ ಮಹಿಳಾ ಟಿ20 ಕ್ರಿಕೆಟ್​ನಲ್ಲಿ ಭಾರತದ ಪರ ಹರ್ಮನ್​ಪ್ರೀತ್ ಕೌರ್ (3195) 3 ಸಾವಿರ ರನ್ ಪೂರೈಸಿದ್ದರು. ಇದೀಗ ಈ ವಿಶೇಷ ಸಾಧಕರ ಪಟ್ಟಿಗೆ ಸ್ಮೃತಿ ಮಂಧಾನ (3052) ಕೂಡ ಸೇರ್ಪಡೆಯಾಗಿದ್ದಾರೆ.

6 / 6
ಇನ್ನು ಈ ಪಂದ್ಯದಲ್ಲಿ ಸ್ಮೃತಿ ಮಂಧಾನ (54) ಹಾಗೂ ಶಫಾಲಿ ವರ್ಮಾ (64) ಬಾರಿಸಿದ ಅರ್ಧಶತಕದ ನೆರವಿನಿಂದ ಟೀಮ್ ಇಂಡಿಯಾ 17.4 ಓವರ್​ಗಳಲ್ಲಿ 1 ವಿಕೆಟ್ ನಷ್ಟಕ್ಕೆ 145 ರನ್ ಬಾರಿಸಿ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಆಸ್ಟ್ರೇಲಿಯಾ ತಂಡವನ್ನು 9 ವಿಕೆಟ್​ಗಳಿಂದ ಬಗ್ಗು ಬಡಿದು ಶುಭಾರಂಭ ಮಾಡಿದೆ.