IND W vs AUS W: ಆಸ್ಟ್ರೇಲಿಯಾ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಸ್ಮೃತಿ ಮಂಧಾನ

Updated on: Sep 17, 2025 | 4:51 PM

Smriti Mandhana's Blazing Century: ಭಾರತ ಮತ್ತು ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡಗಳ ನಡುವಿನ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಸ್ಮೃತಿ ಮಂಧಾನ ಅವರು ಅದ್ಭುತವಾದ ಶತಕ ಗಳಿಸಿದ್ದಾರೆ. 77 ಎಸೆತಗಳಲ್ಲಿ ಶತಕ ಗಳಿಸಿ ಭಾರತಕ್ಕೆ ಬೃಹತ್ ಮೊತ್ತ ಕಟ್ಟಿಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇದು ಭಾರತದ ಪರ ಎರಡನೇ ಅತಿ ವೇಗದ ಶತಕವಾಗಿದೆ. ಪ್ರತೀಕ್ಷಾ ರಾವಲ್ ಜೊತೆಗೆ ಅರ್ಧಶತಕದ ಜೊತೆಯಾಟವನ್ನೂ ನಿರ್ಮಿಸಿದ್ದಾರೆ.

1 / 6
ಮಹಿಳಾ ಏಕದಿನ ವಿಶ್ವಕಪ್​ಗೂ ಮುನ್ನ ಭಾರತ ಹಾಗೂ ಆಸ್ಟ್ರೇಲಿಯಾ ಮಹಿಳಾ ತಂಡಗಳು ಭಾರತದಲ್ಲಿ ಏಕದಿನ ಸರಣಿಯನ್ನು ಆಡುತ್ತಿವೆ. ಸರಣಿಯ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ಏಕಪಕ್ಷೀಯವಾಗಿ ಗೆದ್ದುಕೊಂಡಿತ್ತು. ಇದೀಗ ಸರಣಿಯನ್ನು ಸಮಬಲಗೊಳಿಸುವ ಇರಾದೆಯಲ್ಲಿರುವ ಭಾರತ ಮಹಿಳಾ ತಂಡ ಎರಡನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡುತ್ತಿದ್ದು, ಬೃಹತ್ ಮೊತ್ತದತ್ತ ದಾಪುಗಾಲಿಟ್ಟಿದೆ.

2 / 6
ತಂಡದ ಪರ ಸ್ಫೋಟಕ ಇನ್ನಿಂಗ್ಸ್ ಆಡಿರುವ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಕೇವಲ 77 ಎಸೆತಗಳಲ್ಲಿ ಅದ್ಭುತ ಶತಕ ಗಳಿಸುವ ಮೂಲಕ ಆಸ್ಟ್ರೇಲಿಯಾದ ಬೌಲರ್‌ಗಳ ಬೆವರಿಳಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯದಲ್ಲಿ 58 ರನ್ ಗಳಿಸಿದ್ದ ಸ್ಮೃತಿ ಮಂಧಾನ, ಎರಡನೇ ಪಂದ್ಯದಲ್ಲಿ ಶತಕ ಬಾರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಾತ್ರವಲ್ಲದೆ ಪ್ರತಿಕ್ಷಾ ರಾವಲ್ ಅವರೊಂದಿಗೆ ಮೊದಲ ವಿಕೆಟ್‌ಗೆ ಅರ್ಧಶತಕದ ಜೊತೆಯಾಟವನ್ನು ನಿರ್ಮಿಸಿದ್ದಾರೆ.

3 / 6
ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಸ್ಫೋಟಕ ಶತಕ ಬಾರಿಸಿರುವ ಸ್ಮೃತಿ ಮಂಧಾನ ಭಾರತದ ಪರ ಎರಡನೇ ಅತಿ ವೇಗದ ಶತಕ ಬಾರಿಸಿದ ದಾಖಲೆಯನ್ನು ನಿರ್ಮಿಸಿದ್ದಾರೆ. ವಾಸ್ತವವಾಗಿ ಭಾರತದ ಪರ ಅತಿ ವೇಗದ ಶತಕ ಬಾರಿಸಿದ ದಾಖಲೆಯೂ ಸ್ಮೃತಿ ಮಂಧಾನ  ಹೆಸರಿನಲ್ಲಿದೆ. ಈ ವರ್ಷದ ಆರಂಭದಲ್ಲಿ ಐರ್ಲೆಂಡ್ ವಿರುದ್ಧ ಸ್ಮೃತಿ 70 ಎಸೆತಗಳಲ್ಲಿ ಶತಕ ಗಳಿಸಿದ್ದರು.

4 / 6
ಇದೀಗ ಆಸ್ಟ್ರೇಲಿಯಾ ವಿರುದ್ಧ ಕೇವಲ 77 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ನಾಯಕಿ ಹರ್ಮನ್ಪ್ರೀತ್ ಕೌರ್ 2024 ರಲ್ಲಿ ಇಂಗ್ಲೆಂಡ್ ವಿರುದ್ಧ 82 ಎಸೆತಗಳಲ್ಲಿ ಶತಕ ಗಳಿಸಿದ್ದರು. ಜೆಮಿಮಾ ರೊಡ್ರಿಗಸ್ ಈ ವರ್ಷದ ಆರಂಭದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 89 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದರು.

5 / 6
ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಲು ಆಯ್ಕೆ ಮಾಡಿಕೊಂಡ ಭಾರತ ತಂಡವು ಉತ್ತಮ ಆರಂಭವನ್ನು ಪಡೆಯಿತು. ಸ್ಮೃತಿ ಮಂಧಾನ ಮತ್ತು ಪ್ರತೀಕ್ಷಾ ರಾವಲ್ (25) ಮೊದಲ ವಿಕೆಟ್‌ಗೆ 69 ಎಸೆತಗಳಲ್ಲಿ 70 ರನ್‌ಗಳ ಜೊತೆಯಾಟ ನೀಡಿದರು. ನಂತರ ಹರ್ಲೀನ್ ಡಿಯೋಲ್ (10) ಅವರೊಂದಿಗೆ ಎರಡನೇ ವಿಕೆಟ್‌ಗೆ 49 ರನ್‌ಗಳ ಜೊತೆಯಾಟ ನಡೆಸಿದರು. ಸ್ಮೃತಿ ಮೂರನೇ ವಿಕೆಟ್‌ಗೆ ನಾಯಕಿ ಹರ್ಮನ್ಪ್ರೀತ್ ಕೌರ್ ಅವರೊಂದಿಗೆ 33 ರನ್‌ಗಳ ಜೊತೆಯಾಟ ನಡೆಸಿದರು.

6 / 6
ನಾಲ್ಕನೇ ಬ್ಯಾಟರ್​ ಆಗಿ ಔಟಾದ ಸ್ಮೃತಿ ಮಂಧಾನ ಕೇವಲ 91 ಎಸೆತಗಳಲ್ಲಿ 14 ಬೌಂಡರಿ ಮತ್ತು ನಾಲ್ಕು ಸಿಕ್ಸರ್‌ಗಳ ಸಹಾಯದಿಂದ 117 ರನ್ ಬಾರಿಸಿದರು. ಇದು ಸ್ಮೃತಿ ಅವರ 12 ನೇ ಏಕದಿನ ಶತಕವಾಗಿದೆ. ಸ್ಮೃತಿ ಇದುವರೆಗೆ 107 ಏಕದಿನ ಪಂದ್ಯಗಳಲ್ಲಿ 47.48 ಸರಾಸರಿಯಲ್ಲಿ 4748 ರನ್ ಗಳಿಸಿದ್ದು, ಇದರಲ್ಲಿ 32 ಅರ್ಧಶತಕಗಳು ಸೇರಿವೆ.