AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಕ್ಸ್ ಸಿಡಿಸಿಯೇ ಹೊಸ ಇತಿಹಾಸ ನಿರ್ಮಿಸಿದ ಸ್ಮೃತಿ ಮಂಧಾನ

India Women vs Pakistan Women: ಮಹಿಳಾ ಟಿ20 ವಿಶ್ವಕಪ್‌ನ 6ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ 20 ಓವರುಗಳಲ್ಲಿ 6 ವಿಕೆಟ್ ಕಳೆದುಕೊಂಡು 170 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ 17 ಓವರುಗಳಲ್ಲಿ 106 ರನ್ ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ 64 ರನ್ ಗಳ ಭರ್ಜರಿ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Jun 15, 2026 | 7:31 AM

Share
ಭಾರತೀಯ ಮಹಿಳಾ ಕ್ರಿಕೆಟ್‌ನ ಸ್ಟಾರ್ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ (Smriti Mandhana) ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅಭೂತಪೂರ್ವ ಮೈಲಿಗಲ್ಲೊಂದನ್ನು ಸಾಧಿಸಿದ್ದಾರೆ. ಅದು ಸಹ ಚುಟುಕು ಕ್ರಿಕೆಟ್​ನಲ್ಲಿ ಸಿಕ್ಸ್ ಸಿಡಿಸಿ ಎಂಬುದು ವಿಶೇಷ. (PC: BCCI)

1 / 5
ಬರ್ಮಿಂಗ್ಹ್ಯಾಮ್​ನ ಎಡ್ಜ್​ಬಾಸ್ಟನ್ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಸ್ಮೃತಿ ಮಂಧಾನ 44 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 9 ಫೋರ್ ಗಳೊಂದಿಗೆ 68 ರನ್ ಬಾರಿಸಿದ್ದರು. ಈ ಎರಡು ಸಿಕ್ಸರ್ ಗಳೊಂದಿಗೆ ಸ್ಮೃತಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಭಾರತದ ಪರ ಅತ್ಯಧಿಕ ಸಿಕ್ಸರ್ ಸಿಡಿಸಿದ ಆಟಗಾರ್ತಿ ಎಂಬ ಐತಿಹಾಸಿಕ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. (PC: BCCI)

2 / 5
ಇದಕ್ಕೂ ಮುನ್ನ ಈ ದಾಖಲೆ ಟೀಮ್ ಇಂಡಿಯಾ ನಾಯಕಿ ಹರ್ಮನ್‌ಪ್ರೀತ್ ಕೌರ್ ಹೆಸರಿನಲ್ಲಿತ್ತು. ಭಾರತದ ಪರ 177 ಟಿ20 ಇನಿಂಗ್ಸ್ ಆಡಿರುವ ಹರ್ಮನ್ ಒಟ್ಟು 86 ಸಿಕ್ಸ್ ಸಿಡಿಸುವ ಮೂಲಕ ಈ ದಾಖಲೆ ನಿರ್ಮಿಸಿದ್ದರು. ಇದೀಗ ಸ್ಮೃತಿ ಮಂಧಾನ ಈ ದಾಖಲೆ ಮುರಿದಿದ್ದಾರೆ. (PC: BCCI)

3 / 5
ಟೀಮ್ ಇಂಡಿಯಾ ಪರ ಈವರೆಗೆ 161 ಟಿ20 ಇನಿಂಗ್ಸ್ ಆಡಿರುವ ಸ್ಮೃತಿ ಮಂಧಾನ ಒಟ್ಟು 87 ಸಿಕ್ಸ್ ಸಿಡಿಸಿದ್ದಾರೆ. ಈ ಮೂಲಕ ಭಾರತದ ಸಿಕ್ಸರ್ ಕ್ವೀನ್ ಎನಿಸಿಕೊಂಡಿದ್ದಾರೆ. 'ಎಡಗೈ ಬ್ಯಾಟಿಂಗ್‌ನ ನಯನಮನೋಹರ ಶೈಲಿಗೆ ಹೆಸರಾಗಿರುವ ಸ್ಮೃತಿ ಮಂಧಾನ ಕೇವಲ ಸಿಕ್ಸರ್‌ಗಷ್ಟೇ ಸೀಮಿತವಾಗಿಲ್ಲ. (PC: BCCI)

4 / 5
ಇತ್ತೀಚೆಗಷ್ಟೇ ಅವರು ಟಿ20 ಕ್ರಿಕೆಟ್‌ನಲ್ಲಿ 4,000 ರನ್ ಪೂರೈಸಿದ ಅತಿ ವೇಗದ ಮತ್ತು ಮೊದಲ ಭಾರತೀಯ ಮಹಿಳಾ ಆಟಗಾರ್ತಿ ಎಂಬ ವಿಶ್ವದಾಖಲೆಯನ್ನು ಬರೆದಿದ್ದರು. ಅಷ್ಟೇ ಅಲ್ಲದೆ, ಕ್ರಿಕೆಟ್‌ನ ಮೂರೂ ಮಾದರಿಗಳಲ್ಲಿ (ಟೆಸ್ಟ್, ಏಕದಿನ, ಟಿ20) ಶತಕ ಬಾರಿಸಿದ ಏಕೈಕ ಭಾರತೀಯ ಮಹಿಳಾ ಬ್ಯಾಟರ್ ಎಂಬ ಕೀರ್ತಿಯೂ ಇವರಿಗಿದೆ. (PC: BCCI)

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us