- Kannada News Photo gallery Cricket photos Smriti Mandhana Sets New Record: India's Highest Scorer in Women's World Cup History
World Cup 2025: ವಿಶ್ವಕಪ್‌ನಲ್ಲಿ ಮಾಜಿ ನಾಯಕಿಯ ದಾಖಲೆ ಮುರಿದ ಸ್ಮೃತಿ ಮಂಧಾನ
Smriti Mandhana record: ನವಿಮುಂಬೈನಲ್ಲಿ ನಡೆಯುತ್ತಿರುವ ಮಹಿಳಾ ವಿಶ್ವಕಪ್ ಫೈನಲ್‌ನಲ್ಲಿ ಸ್ಮೃತಿ ಮಂಧಾನ ಐತಿಹಾಸಿಕ ದಾಖಲೆ ನಿರ್ಮಿಸಿದ್ದಾರೆ. ಒಂದೇ ಆವೃತ್ತಿಯಲ್ಲಿ 434 ರನ್ ಗಳಿಸುವ ಮೂಲಕ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿ ಎನಿಸಿಕೊಂಡಿದ್ದಾರೆ. 2017ರ ವಿಶ್ವಕಪ್‌ನಲ್ಲಿ ಮಿಥಾಲಿ ರಾಜ್ ಗಳಿಸಿದ್ದ 409 ರನ್‌ಗಳ ದಾಖಲೆಯನ್ನು ಮಂಧಾನ ಮುರಿದಿದ್ದಾರೆ. ಈ ಟೂರ್ನಿಯಲ್ಲಿ ಅವರು ಒಂದು ಶತಕ ಮತ್ತು ಮೂರು ಅರ್ಧಶತಕಗಳನ್ನು ಬಾರಿಸಿ, ಭಾರತಕ್ಕೆ ಉತ್ತಮ ಆರಂಭ ಒದಗಿಸಿದ್ದಾರೆ.
Updated on: Nov 02, 2025 | 7:45 PM

ನವಿಮುಂಬೈನಲ್ಲಿ ನಡೆಯುತ್ತಿರುವ ಮಹಿಳಾ ವಿಶ್ವಕಪ್ ಫೈನಲ್‌ನಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡಕ್ಕೆ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಉತ್ತಮ ಆರಂಭ ಒದಗಿಸಿಕೊಟ್ಟರು. ಈ ಪಂದ್ಯದಲ್ಲಿ 45 ರನ್‌ಗಳ ಇನ್ನಿಂಗ್ಸ್ ಆಡಿದ ಸ್ಮೃತಿ ಮಂಧಾನ ಮಹಿಳಾ ವಿಶ್ವಕಪ್‌ನ ಒಂದೇ ಆವೃತ್ತಿಯಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಈ ಮೂಲಕ 2017 ರ ವಿಶ್ವಕಪ್‌ನಲ್ಲಿ 409 ರನ್ ಬಾರಿಸಿದ್ದ ಭಾರತದ ಮಾಜಿ ನಾಯಕಿ ಮಿಥಾಲಿ ರಾಜ್ ಅವರ ದಾಖಲೆಯನ್ನು ಸ್ಮೃತಿ ಮಂಧಾನ ಮುರಿದಿದ್ದಾರೆ. ಸ್ಮೃತಿ ಮಂಧಾನ ಈ ಟೂರ್ನಿಯಲ್ಲಿ ಇದುವರೆಗೆ 434 ರನ್ ಬಾರಿಸಿದ್ದಾರೆ.

ಸ್ಮೃತಿ ಮಂಧಾನ 2025 ರ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಒಟ್ಟು ಒಂಬತ್ತು ಸಿಕ್ಸರ್‌ಗಳು ಮತ್ತು 50 ಬೌಂಡರಿಗಳನ್ನು ಬಾರಿಸಿದ್ದಾರೆ. 54.25 ರ ಸರಾಸರಿಯಲ್ಲಿ ರನ್ ಕಲೆಹಾಕಿರುವ ಸ್ಮೃತಿ ಒಂದು ಶತಕ ಮತ್ತು ಮೂರು ಅರ್ಧಶತಕಗಳನ್ನು ಬಾರಿಸಿದ್ದಾರೆ.

ಆದಾಗ್ಯೂ ಈ ಫೈನಲ್ ಪಂದ್ಯದಲ್ಲಿ ಸ್ಮೃತಿ ಮಂಧಾನ ದೊಡ್ಡ ಇನ್ನಿಂಗ್ಸ್ ಆಡುವಲ್ಲಿ ವಿಫಲರಾದರು. ಫೈನಲ್‌ನಲ್ಲಿ 58 ಎಸೆತಗಳನ್ನು ಎದುರಿಸಿದ ಸ್ಮೃತಿ 8 ಬೌಂಡರಿಗಳ ಸಹಿತ 45 ರನ್ ಬಾರಿಸಿದರು. ಸ್ಮೃತಿ ಮಂಧಾನ ಫೈನಲ್‌ನಲ್ಲಿ ಶಫಾಲಿ ವರ್ಮಾ ಅವರೊಂದಿಗೆ 104 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು.

ಐಸಿಸಿ ಮಹಿಳಾ ಏಕದಿನ ವಿಶ್ವಕಪ್ 2025 ರ ಅಂತಿಮ ಪಂದ್ಯವು ಮಳೆಯಿಂದಾಗಿ ಎರಡು ಗಂಟೆಗಳ ವಿಳಂಬದೊಂದಿಗೆ ಪ್ರಾರಂಭವಾಯಿತು. ಎರಡೂ ತಂಡಗಳ ಆಡುವ 11 ರ ಬಳಗದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಏತನ್ಮಧ್ಯೆ, ಶಫಾಲಿ ಮತ್ತು ಸ್ಮೃತಿ ಜೋಡಿ ಈ ನಿರ್ಣಾಯಕ ಪಂದ್ಯದಲ್ಲಿ ಟೀಂ ಇಂಡಿಯಾಕ್ಕೆ ಬಲವಾದ ಆರಂಭವನ್ನು ಒದಗಿಸಿಕೊಟ್ಟರು.
