
ಭಾರತ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮತ್ತೊಂದು ಭರ್ಜರಿ ದಾಖಲೆ ಬರೆದಿದ್ದಾರೆ. ಈ ಬಾರಿ ದಾಖಲೆ ಬರೆದಿರುವುದು ನ್ಯೂಝಿಲೆಂಡ್ನ ಶ್ರೇಷ್ಠ ಆಟಗಾರ್ತಿ ಸುಝಿ ಬೇಟ್ಸ್ ಅವರ ರೆಕಾರ್ಡ್ ಅನ್ನು ಮುರಿಯುವ ಮೂಲಕ ಎಂಬುದು ವಿಶೇಷ. (PC: GettyImages)
ದುಬೈನಲ್ಲಿ ನಡೆದ ಮಹಿಳಾ ಏಷ್ಯಾಕಪ್ನ 3ನೇ ಪಂದ್ಯದಲ್ಲಿ ಥೈಲ್ಯಾಂಡ್ ವಿರುದ್ಧ ಆರಂಭಿಕಳಾಗಿ ಕಣಕ್ಕಿಳಿದ ಸ್ಮೃತಿ ಮಂಧಾನ 10 ಎಸೆತಗಳಲ್ಲಿ 19 ರನ್ ಬಾರಿಸಿದ್ದರು. ಈ ಹತ್ತೊಂಬತ್ತು ರನ್ಗಳೊಂದಿಗೆ ಸ್ಮೃತಿ, ಮಹಿಳಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. (PC: GettyImages)
ಇದಕ್ಕೂ ಮುನ್ನ ಮಹಿಳಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಬ್ಯಾಟರ್ಗಳ ಪಟ್ಟಿಯಲ್ಲಿ ನ್ಯೂಝಿಲೆಂಡ್ನ ಸುಝಿ ಬೇಟ್ಸ್ ದ್ವಿತೀಯ ಸ್ಥಾನದಲ್ಲಿದ್ದರು. ಸುಝಿ ಒಟ್ಟು 10,740 ರನ್ ಕಲೆಹಾಕುವ ಮೂಲಕ ಈ ಸಾಧನೆ ಮಾಡಿದ್ದರು. (PC: GettyImages)
ಇದೀಗ ಸುಝಿ ಬೇಟ್ಸ್ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದು ಸ್ಮೃತಿ ಮಂಧಾನ ದ್ವಿತೀಯ ಸ್ಥಾನಕ್ಕೇರಿದ್ದಾರೆ. ಮೂರು ಸ್ವರೂಪಗಳಲ್ಲೂ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿರುವ ಸ್ಮೃತಿ ಒಟ್ಟು 10,756* ರನ್ ಕಲೆಹಾಕುವ ಮೂಲಕ ಈ ಸಾಧನೆ ಮಾಡಿದ್ದಾರೆ. (PC: GettyImages)
ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಟೀಮ್ ಇಂಡಿಯಾದ ಮಾಜಿ ನಾಯಕಿ ಮಿಥಾಲಿ ರಾಜ್. ಟೀಮ್ ಇಂಡಿಯಾ 314 ಇನಿಂಗ್ಸ್ ಆಡಿರುವ ಮಿಥಾಲಿ ಒಟ್ಟು 10,868 ರನ್ ಕಲೆಹಾಕಿದ್ದಾರೆ. ಈ ಮೂಲಕ ಮಹಿಳಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತೀ ಹೆಚ್ಚು ರನ್ ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. (PC: GettyImages)