
ಏಕದಿನ ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾ ಆಟಗಾರ್ತಿ ಸ್ಮೃತಿ ಮಂಧಾನ (Smriti mandhana) ಭರ್ಜರಿ ದಾಖಲೆ ನಿರ್ಮಿಸಿದ್ದಾರೆ. ಈ ದಾಖಲೆಯ ಮೂಲಕ ಸ್ಮೃತಿ, ವಿರಾಟ್ ಕೊಹ್ಲಿಯ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯೊಂದನ್ನು ಮುರಿದಿದ್ದಾರೆ. ಅದು ಸಹ ಅತೀ ಕಡಿಮೆ ಇನಿಂಗ್ಸ್ಗಳ ಮೂಲಕ.

ವಿಶಾಖಪಟ್ಟಣದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮಹಿಳಾ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಆರಂಭಿಕಳಾಗಿ ಕಣಕ್ಕಿಳಿದ ಸ್ಮೃತಿ ಮಂಧಾನ 80 ರನ್ ಬಾರಿಸಿ ಮಿಂಚಿದ್ದರು. ಈ 80 ರನ್ಗಳೊಂದಿಗೆ ಸ್ಮೃತಿ ಮಂಧಾನ ಏಕದಿನ ಕ್ರಿಕೆಟ್ನಲ್ಲಿ 5000 ರನ್ ಪೂರೈಸಿದ್ದಾರೆ.

ಇದರೊಂದಿಗೆ ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಅತೀ ವೇಗವಾಗಿ 5000 ರನ್ ಗಳಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆ ಸ್ಮೃತಿ ಮಂಧಾನ ಪಾಲಾಗಿದೆ. ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ರನ್ ಮಷಿನ್ ಖ್ಯಾತಿಯ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು.

ವಿರಾಟ್ ಕೊಹ್ಲಿ 114 ಏಕದಿನ ಇನಿಂಗ್ಸ್ಗಳ ಮೂಲಕ 5000 ರನ್ ಪೂರೈಸಿದ್ದರು. ಈ ಮೂಲಕ ಏಕದಿನ ಕ್ರಿಕೆಟ್ನಲ್ಲಿ ಅತೀ ವೇಗವಾಗಿ 5 ಸಾವಿರ ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ಎಂಬ ಭರ್ಜರಿ ದಾಖಲೆ ಬರೆದಿದ್ದರು. ಇದೀಗ ಈ ದಾಖಲೆಯನ್ನು ಸ್ಮೃತಿ ಮಂಧಾನ ಮುರಿದಿದ್ದಾರೆ.

ಸ್ಮೃತಿ ಮಂಧಾನ ಏಕದಿನ ಕ್ರಿಕೆಟ್ನಲ್ಲಿ 5000 ರನ್ ಕಲೆಹಾಕಲು ತೆಗೆದುಕೊಂಡಿದ್ದು ಕೇವಲ 112 ಇನಿಂಗ್ಸ್ಗಳನ್ನು ಮಾತ್ರ. ಈ ಮೂಲಕ ಒಡಿಐ ಕ್ರಿಕೆಟ್ನಲ್ಲಿ ಅತೀ ವೇಗವಾಗಿ 5 ಸಾವಿರ ರನ್ ಗಳಿಸಿದ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.