AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೆಯ ರೆಕಾರ್ಡ್​​ಗಳು ಉಡೀಸ್: ಹೊಸ ವಿಶ್ವ ದಾಖಲೆ ನಿರ್ಮಿಸಿದ ಸ್ಮೃತಿ ಮಂಧಾನ

India Women vs West Indies Women: ಟೀಮ್ ಇಂಡಿಯಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಮಹಿಳಾ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 159 ರನ್​ ಕಲೆಹಾಕಿದರೆ, ವೆಸ್ಟ್ ಇಂಡೀಸ್ ತಂಡವು 15.4 ಓವರ್​​ಗಳಲ್ಲಿ ಈ ಗುರಿಯನ್ನು ಚೇಸ್ ಮಾಡಿದ್ದಾರೆ. ಈ ಮೂಲಕ 3 ಪಂದ್ಯಗಳ ಸರಣಿಯನ್ನು 1-1 ಅಂತರದಿಂದ ಸಮಗೊಳಿಸಿದೆ.

ಝಾಹಿರ್ ಯೂಸುಫ್
|

Updated on: Dec 18, 2024 | 9:30 AM

ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸಿ ಸ್ಮತಿ ಮಂಧಾನ ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ ನ್ಯೂಝಿಲೆಂಡ್​ನ ಸ್ಟಾರ್ ಆಟಗಾರ್ತಿ ಸುಝಿ ಬೆಟ್ಸ್ ಅವರ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತರೂ ಟೀಮ್ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆಯಿತು.

1 / 5
ಅದರಂತೆ ಇನಿಂಗ್ಸ್ ಆರಂಭಿಸಿದ ಭಾರತ ತಂಡಕ್ಕೆ ಸ್ಮತಿ ಮಂಧಾನ ಉತ್ತಮ ಆರಂಭ ಒದಗಿಸಿದ್ದರು. 41 ಎಸೆತಗಳನ್ನು ಎದುರಿಸಿದ ಸ್ಮೃತಿ 1 ಸಿಕ್ಸ್ ಹಾಗೂ 9 ಫೋರ್​​ಗಳೊಂದಿಗೆ 62 ರನ್​ ಸಿಡಿಸಿದರು. ಈ ಅರ್ಧಶತಕದೊಂದಿಗೆ ಮಹಿಳಾ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅತ್ಯಧಿಕ ಅರ್ಧಶತಕ ಬಾರಿಸಿದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡರು.

2 / 5
ಇದಕ್ಕೂ ಮುನ್ನ ಈ ವರ್ಲ್ಡ್ ರೆಕಾರ್ಡ್​ ನ್ಯೂಝಿಲೆಂಡ್​ನ ಸುಝಿ ಬೆಟ್ಸ್ ಹೆಸರಿನಲ್ಲಿತ್ತು. 171 ಟಿ20 ಪಂದ್ಯಗಳಲ್ಲಿ 168 ಇನಿಂಗ್ಸ್ ಆಡಿರುವ ಸುಝಿ ಒಟ್ಟು 28 ಅರ್ಧಶತಕ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆ ಮುರಿಯುವಲ್ಲಿ ಸ್ಮೃತಿ ಯಶಸ್ವಿಯಾಗಿದ್ದಾರೆ.

3 / 5
ಟೀಮ್ ಇಂಡಿಯಾ ಪರ 147 ಟಿ20 ಪಂದ್ಯಗಳಲ್ಲಿ 141 ಇನಿಂಗ್ಸ್ ಆಡಿರುವ ಸ್ಮೃತಿ ಮಂಧಾನ ಒಟ್ಟು 29 ಅರ್ಧಶತಕ ಬಾರಿಸಿದ್ದಾರೆ. ಈ ಮೂಲಕ ಮಹಿಳಾ ಟಿ20 ಇತಿಹಾಸದಲ್ಲೇ ಅತೀ ಹೆಚ್ಚು ಹಾಫ್ ಸೆಂಚುರಿ ಸಿಡಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ.

4 / 5
ಇನ್ನು ಸ್ಮೃತಿ ಮಂಧಾನ ಅವರ ಈ ಅರ್ಧಶತಕದ ನೆರವಿನಿಂದ ಈ ಪಂದ್ಯದಲ್ಲಿ ಟೀಮ್ ಇಂಡಿಯಾ 20 ಓವರ್​​ಗಳಲ್ಲಿ 9 ವಿಕೆಟ್ ಕಳೆದುಕೊಂಡು 159 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ವೆಸ್ಟ್ ಇಂಡೀಸ್ ತಂಡವು 15.4 ಓವರ್​​ಗಳಲ್ಲಿ 1 ವಿಕೆಟ್ ಕಳೆದುಕೊಂಡು 160 ರನ್ ಬಾರಿಸಿ 9 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

5 / 5
Follow us
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್

ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...

ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ

ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್

ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ

ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ

ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್

ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ

ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ