AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾರ್ಡ್ಸ್ ಮೈದಾನದಲ್ಲಿ ವಿಶ್ವ ದಾಖಲೆ ಬರೆದ ಸ್ಮೃತಿ ಮಂಧಾನ

England Women vs India Women: ಲಾರ್ಡ್ಸ್​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧದ ಟೆಸ್ಟ್​ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿರುವ ಟೀಮ್ ಇಂಡಿಯಾ ಮೊದಲ ದಿನದಾಟದ ಮುಕ್ತಾಯದ ವೇಳೆಗೆ 285 ರನ್​ಗಳಿಸಿ ಆಲೌಟ್ ಆಗಿದೆ. ಈ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಸ್ಮೃತಿ ಮಂಧಾನ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Jul 11, 2026 | 10:13 AM

Share
ಕ್ರಿಕೆಟ್‌ನ ಕಾಶಿ ಎಂದೇ ಕರೆಯಲ್ಪಡುವ ಇಂಗ್ಲೆಂಡ್‌ನ ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ಕಣಕ್ಕಿಳಿಯುವ ಮೂಲಕ ಭಾರತದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಅದು ಸಹ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 300 ಪಂದ್ಯಗಳನ್ನಾಡುವ ಮೂಲಕ ಎಂಬುದು ವಿಶೇಷ. (PC: Getty Images)

1 / 6
ಭಾರತದ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕಿ ನ್ಯಾಟ್ ಸೀವರ್ ಬ್ರಂಟ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಲು ಕ್ರೀಸ್​ಗೆ ಆಗಮಿಸಿದ ಸ್ಮತಿ ಮಂಧಾನ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 300 ಪಂದ್ಯಗಳನ್ನಾಡಿದ ಸಾಧನೆ ಮಾಡಿದರು. (PC: Getty Images)

2 / 6
ಈ ಸಾಧನೆಯೊಂದಿಗೆ ಮಹಿಳಾ ಕ್ರಿಕೆಟ್ ಇತಿಹಾಸದಲ್ಲೇ 300 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ಅತ್ಯಂತ ಕಿರಿಯ ಆಟಗಾರ್ತಿ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ಸೌತ್ ಆಫ್ರಿಕಾದ ಸುನೆ ಲೂಸ್ ಹೆಸರಿನಲ್ಲಿತ್ತು. (PC: Getty Images)

3 / 6
ಸೌತ್ ಆಫ್ರಿಕಾ ಪರ 300 ಪಂದ್ಯಗಳನ್ನಾಡುವಾಗ ಸುನೆ ಲೂಸ್ ಅವರ ವಯಸ್ಸು  30 ವರ್ಷ 163 ದಿನಗಳು. ಈ ಮೂಲಕ ಅತೀ ಕಡಿಮೆ ವಯಸ್ಸಿನಲ್ಲಿ 300ನೇ ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ ವಿಶ್ವದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಸ್ಮೃತಿ ಮುರಿದಿದ್ದಾರೆ. (PC: Getty Images)

4 / 6
ಸ್ಮೃತಿ ಮಂಧಾನ ಕೇವಲ 29 ವರ್ಷ 357 ದಿನಗಳ ವಯಸ್ಸಿನಲ್ಲಿ ಈ ಮೈಲಿಗಲ್ಲು ತಲುಪುವ ಮೂಲಕ ವಿಶ್ವ ಕ್ರಿಕೆಟ್ ಇತಿಹಾಸದಲ್ಲೇ 300 ಪಂದ್ಯಗಳನ್ನಾಡಿದ ಅತ್ಯಂತ ಕಿರಿಯ ಮಹಿಳಾ ಆಟಗಾರ್ತಿ ಎಂಬ ಜಾಗತಿಕ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: Getty Images)

5 / 6
ಇನ್ನು ಈ ಪಂದ್ಯದಲ್ಲಿ 108 ಎಸೆತಗಳನ್ನು ಎದುರಿಸಿದ ಸ್ಮೃತಿ ಮಂಧಾನ 83 ರನ್ ಗಳಿಸಿ ಔಟಾಗಿದ್ದರು. ಈ ಅರ್ಧಶತಕದೊಂದಿಗೆ ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದಲ್ಲಿ ಅರ್ಧಶತಕ ಸಿಡಿಸಿದ ಮೊದಲ ಮಹಿಳಾ ಬ್ಯಾಟರ್ ಎಂಬ ಸಾರ್ವಕಾಲಿಕ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: Getty Images)

6 / 6
Follow Us
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು

ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ

ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ

‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ

RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್

ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು

ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ

ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು

440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ