
ಕ್ರಿಕೆಟ್‌ನ ಕಾಶಿ ಎಂದೇ ಕರೆಯಲ್ಪಡುವ ಇಂಗ್ಲೆಂಡ್‌ನ ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ಕಣಕ್ಕಿಳಿಯುವ ಮೂಲಕ ಭಾರತದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಅದು ಸಹ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 300 ಪಂದ್ಯಗಳನ್ನಾಡುವ ಮೂಲಕ ಎಂಬುದು ವಿಶೇಷ. (PC: Getty Images)

ಭಾರತದ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕಿ ನ್ಯಾಟ್ ಸೀವರ್ ಬ್ರಂಟ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಲು ಕ್ರೀಸ್ಗೆ ಆಗಮಿಸಿದ ಸ್ಮತಿ ಮಂಧಾನ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 300 ಪಂದ್ಯಗಳನ್ನಾಡಿದ ಸಾಧನೆ ಮಾಡಿದರು. (PC: Getty Images)

ಈ ಸಾಧನೆಯೊಂದಿಗೆ ಮಹಿಳಾ ಕ್ರಿಕೆಟ್ ಇತಿಹಾಸದಲ್ಲೇ 300 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ಅತ್ಯಂತ ಕಿರಿಯ ಆಟಗಾರ್ತಿ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ಸೌತ್ ಆಫ್ರಿಕಾದ ಸುನೆ ಲೂಸ್ ಹೆಸರಿನಲ್ಲಿತ್ತು. (PC: Getty Images)

ಸೌತ್ ಆಫ್ರಿಕಾ ಪರ 300 ಪಂದ್ಯಗಳನ್ನಾಡುವಾಗ ಸುನೆ ಲೂಸ್ ಅವರ ವಯಸ್ಸು 30 ವರ್ಷ 163 ದಿನಗಳು. ಈ ಮೂಲಕ ಅತೀ ಕಡಿಮೆ ವಯಸ್ಸಿನಲ್ಲಿ 300ನೇ ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ ವಿಶ್ವದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಸ್ಮೃತಿ ಮುರಿದಿದ್ದಾರೆ. (PC: Getty Images)

ಸ್ಮೃತಿ ಮಂಧಾನ ಕೇವಲ 29 ವರ್ಷ 357 ದಿನಗಳ ವಯಸ್ಸಿನಲ್ಲಿ ಈ ಮೈಲಿಗಲ್ಲು ತಲುಪುವ ಮೂಲಕ ವಿಶ್ವ ಕ್ರಿಕೆಟ್ ಇತಿಹಾಸದಲ್ಲೇ 300 ಪಂದ್ಯಗಳನ್ನಾಡಿದ ಅತ್ಯಂತ ಕಿರಿಯ ಮಹಿಳಾ ಆಟಗಾರ್ತಿ ಎಂಬ ಜಾಗತಿಕ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: Getty Images)

ಇನ್ನು ಈ ಪಂದ್ಯದಲ್ಲಿ 108 ಎಸೆತಗಳನ್ನು ಎದುರಿಸಿದ ಸ್ಮೃತಿ ಮಂಧಾನ 83 ರನ್ ಗಳಿಸಿ ಔಟಾಗಿದ್ದರು. ಈ ಅರ್ಧಶತಕದೊಂದಿಗೆ ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದಲ್ಲಿ ಅರ್ಧಶತಕ ಸಿಡಿಸಿದ ಮೊದಲ ಮಹಿಳಾ ಬ್ಯಾಟರ್ ಎಂಬ ಸಾರ್ವಕಾಲಿಕ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: Getty Images)