AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ ದಾಖಲೆಯನ್ನೇ ಉಡೀಸ್ ಮಾಡಿದ ಸ್ಮೃತಿ ಮಂಧಾನ!

ಸ್ಮೃತಿ ಮಂಧಾನ ಹೆಸರಿಗೆ ಮತ್ತೊಂದು ದಾಖಲೆ ಸೇರ್ಪಡೆಯಾಗಿದೆ. ಈ ಬಾರಿ ಸೇರ್ಪಡೆಯಾಗಿರುವುದು ವಿಶ್ವ ದಾಖಲೆ ಎಂಬುದು ವಿಶೇಷ. ಈ ವಿಶ್ವ ದಾಖಲೆ ನಿರ್ಮಾಣವಾಗಿದ್ದು ರನ್​ ರಾಶಿಯೊಂದಿಗೆ. ಅಂದರೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್​ ಗಳಿಸಿದ ಬ್ಯಾಟರ್ ಎಂಬ ವರ್ಲ್ಡ್​ ರೆಕಾರ್ಡ್ ಅನ್ನು ಸ್ಮೃತಿ ಮಂಧಾನ ತಮ್ಮದಾಗಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: Sep 20, 2026 | 11:48 AM

Share
ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಡ್ಯಾಷಿಂಗ್ ಓಪನರ್ ಸ್ಮೃತಿ ಮಂಧಾನ ಜಾಗತಿಕ ಕ್ರಿಕೆಟ್‌ನಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಅದು ಕೂಡ ವಿಶ್ವ ದಾಖಲೆಯನ್ನು ಮುರಿಯುವ ಮೂಲಕ. ಅಂದರೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎಂಬ ವಿಶ್ವ ದಾಖಲೆ ಇದೀಗ ಸ್ಮೃತಿ ಮಂಧಾನ ಪಾಲಾಗಿದೆ. (PC: Getty Images)

1 / 5
ಬಾಂಗ್ಲಾದೇಶ್ ವಿರುದ್ಧ ನಡೆದ ಏಷ್ಯನ್ ಗೇಮ್ಸ್​ನ ಸೆಮಿಫೈನಲ್ ಪಂದ್ಯದಲ್ಲಿ ಆರಂಭಿಕಳಾಗಿ ಕಣಕ್ಕಿಳಿದ ಸ್ಮೃತಿ ಮಂಧಾನ 19 ಎಸೆತಗಳಲ್ಲಿ 37 ರನ್ ಬಾರಿಸಿದರು. ಈ ಮೂವತ್ತೇಳು ರನ್​ಗಳೊಂದಿಗೆ ಟಿ20 ಇಂಟರ್​ನ್ಯಾಷನಲ್​ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್​ ಗಳಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡರು. (PC: Getty Images)

2 / 5
ಇದಕ್ಕೂ ಮುನ್ನ ಈ ದಾಖಲೆ ನ್ಯೂಝಿಲೆಂಡ್​ನ ಸುಝಿ ಬೇಟ್ಸ್ ಹೆಸರಿನಲ್ಲಿತ್ತು. ನ್ಯೂಝಿಲೆಂಡ್ ಪರ 178 ಇನಿಂಗ್ಸ್ ಆಡಿರುವ ಸುಝಿ ಬೇಟ್ಸ್ 4,758 ರನ್​ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದರು. (PC: Getty Images)

3 / 5
ಇದೀಗ ಈ ದಾಖಲೆಯನ್ನು ಸ್ಮೃತಿ ಮಂಧಾನ ಅಳಿಸಿ ಹಾಕಿದ್ದಾರೆ. ಟೀಮ್ ಇಂಡಿಯಾ ಪರ ಈವರೆಗೆ 171 ಇನಿಂಗ್ಸ್ ಆಡಿರುವ ಸ್ಮೃತಿ ಒಟ್ಟು 4,765 ರನ್​ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಇಂಟರ್​ನ್ಯಾಷನಲ್​ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ರನ್​ ಕಲೆಹಾಕಿದ ಬ್ಯಾಟರ್ ಎಂಬ ವಿಶ್ವ ದಾಖಲೆ ನಿರ್ಮಿಸಿದ್ದಾರೆ. (PC: Getty Images)

4 / 5
ಈ ವಿಶ್ವ ದಾಖಲೆಯೊಂದಿಗೆ ಸ್ಮೃತಿ ಮಂಧಾನ ಮತ್ತೊಂದು ಮೈಲುಗಲ್ಲಿನತ್ತ ಹೆಜ್ಜೆಯನ್ನಿಟ್ಟಿದ್ದಾರೆ. ಅಂದರೆ ಮುಂಬರುವ ಸರಣಿ ಹಾಗೂ ಟೂರ್ನಿಗಳ ಮೂಲಕ ಸ್ಮೃತಿ 235 ರನ್ ಕಲೆಹಾಕಿದರೆ, ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲೇ 5000 ರನ್​ ಕಲೆಹಾಕಿದ ವಿಶ್ವದ ಏಕೈಕ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. (PC: Getty Images)

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ

ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ

ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ

ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ

ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ

ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಸೌಜನ್ಯ ಕೇಸ್​: SITಗೆ ನೀಡಿದ ಮುಚ್ಚಿದ ಲಕೋಟೆ ಬಗ್ಗೆ ಜಯಂತ್ ಸ್ಫೋಟಕ ಹೇಳಿಕೆ

‘ನಿಮಗೆ ಪಾಠ ಕಲಿಸೋದು ಹೇಗೆಂದು ಗೊತ್ತು’: ಕಿಚ್ಚನ ಕ್ಲಾಸ್​​ಗೆ ರೆಡಿಯಾಗಿ

ಮಾವಿನಕೆರೆ ರಂಗನಾಥ ಸ್ವಾಮಿ ದೇವಾಲಯದಲ್ಲಿ ದೇವೇಗೌಡ ಪೂಜೆ

ಮಹಾಲಯ ಅಮಾವಾಸ್ಯೆಯಂದೇ ಪಿಡಬ್ಲೂಡಿ ಕಚೇರಿಯಲ್ಲಿ ವಾಮಾಚಾರ!