AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC ODI Rankings: ಏಕದಿನ ಕ್ರಿಕೆಟ್​ನಲ್ಲಿ ಮತ್ತೆ ಅಗ್ರಸ್ಥಾನಕ್ಕೇರಿದ ಸ್ಮೃತಿ ಮಂಧಾನ

ICC ODI Rankings: ಭಾರತದ ಉಪನಾಯಕಿ ಸ್ಮೃತಿ ಮಂಧಾನ ಐಸಿಸಿ ಮಹಿಳಾ ಏಕದಿನ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಮತ್ತೆ ನಂ.1 ಸ್ಥಾನಕ್ಕೇರಿದ್ದಾರೆ. 790 ರೇಟಿಂಗ್ ಪಾಯಿಂಟ್‌ಗಳೊಂದಿಗೆ ದಕ್ಷಿಣ ಆಫ್ರಿಕಾದ ಲಾರಾ ವೋಲ್ವಾರ್ಡ್ ಅವರನ್ನು ಹಿಂದಿಕ್ಕಿದ್ದಾರೆ. ಆಸ್ಟ್ರೇಲಿಯಾ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡದಿದ್ದರೂ ಅಗ್ರಸ್ಥಾನಕ್ಕೇರಿರುವುದು ವಿಶೇಷ. ಭಾರತದ ನಾಯಕಿ ಹರ್ಮನ್‌ಪ್ರೀತ್ ಕೌರ್ ಸಹ ಒಂಬತ್ತನೇ ಸ್ಥಾನಕ್ಕೆ ಜಿಗಿದು ಶ್ರೇಯಾಂಕದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಪೃಥ್ವಿಶಂಕರ
|

Updated on: Mar 03, 2026 | 4:48 PM

Share
ಐಸಿಸಿ ಬಿಡುಗಡೆ ಮಾಡಿರುವ ನೂತನ ಮಹಿಳಾ ಏಕದಿನ ಬ್ಯಾಟರ್​ಗಳ ಶ್ರೇಯಾಂಕದಲ್ಲಿ ಟೀಂ ಇಂಡಿಯಾದ ಉಪನಾಯಕಿ ಸ್ಮೃತಿ ಮಂಧಾನ ಮತ್ತೆ ನಂ. 1 ಸ್ಥಾನವನ್ನು ಅಲಂಕರಿಸಿದ್ದಾರೆ. 790 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿರುವ ಸ್ಮೃತಿ ಮಂಧಾನ ದಕ್ಷಿಣ ಆಫ್ರಿಕಾದ ನಾಯಕಿ ಲಾರಾ ವೋಲ್ವಾರ್ಡ್ ಅವರನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ್ದಾರೆ.

1 / 5
ವಾಸ್ತವವಾಗಿ ಹೋಬಾರ್ಟ್‌ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಖಾತೆ ತೆರೆಯಲು ವಿಫಲವಾದರೂ ನಂಬರ್ 1 ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಮಂಧಾನಾ ವಿಶೇಷವಾಗಿ ಉತ್ತಮ ಪ್ರದರ್ಶನ ನೀಡಲಿಲ್ಲ, ಬ್ರಿಸ್ಬೇನ್‌ನಲ್ಲಿ 58 ರನ್ ಮತ್ತು ಹೋಬಾರ್ಟ್‌ನಲ್ಲಿ 31 ರನ್ ಗಳಿಸಿದರು. ಆದಾಗ್ಯೂ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಅಗ್ರಸ್ಥಾನವನ್ನು ತಲುಪಿದ್ದಾರೆ.

2 / 5
ಸ್ಮೃತಿ ಮಂಧಾನ ಐಸಿಸಿ ಶ್ರೇಯಾಂಕದಲ್ಲಿ 790 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿದ್ದರೆ, 782 ಅಂಕಗಳನ್ನು ಹೊಂದಿರುವ ಲಾರಾ ವೊಲ್ಪರ್ಟ್‌ ಎರಡನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಬೆತ್ ಮೂನಿ ಮೂರನೇ ಸ್ಥಾನದಲ್ಲಿದ್ದರೆ, ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾದ ಅಲಿಸಾ ಹೀಲಿ 744 ರೇಟಿಂಗ್ ಪಾಯಿಂಟ್‌ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ. ಆಶ್ಲೀ ಗಾರ್ಡ್ನರ್ ಐದನೇ ಸ್ಥಾನದಲ್ಲಿದ್ದಾರೆ.

3 / 5
ಇನ್ನು ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯನ್ನು 0-3 ಅಂತರದಿಂದ ಸೋತರೂ, ಭಾರತದ ನಾಯಕಿ ಹರ್ಮನ್‌ಪ್ರೀತ್ ಕೌರ್ ಕೂಡ ಶ್ರೇಯಾಂಕದಲ್ಲಿ ಮುಂಬಡ್ತಿ ಪಡೆದಿದ್ದಾರೆ. ಈ ಸರಣಿಯಲ್ಲಿ ಕ್ರಮವಾಗಿ 53, 54 ಮತ್ತು 25 ರನ್​ಗಳ ಇನ್ನಿಂಗ್ಸ್ ಆಡಿದ್ದ ಹರ್ಮನ್​ಪ್ರೀತ್, ನಾಲ್ಕು ಸ್ಥಾನಗಳನ್ನು ಮೇಲೇರಿ 652 ಅಂಕಗಳೊಂದಿಗೆ ಒಂಬತ್ತನೇ ಸ್ಥಾನಕ್ಕೆ ತಲುಪಿದ್ದಾರೆ.

4 / 5
ಭಾರತದ ಪರ ಇದುವರೆಗೆ 120 ಏಕದಿನ ಪಂದ್ಯಗಳನ್ನಾಡಿರುವ ಮಂಧಾನ, 47.88 ಸರಾಸರಿಯೊಂದಿಗೆ 5,411 ರನ್ ಗಳಿಸಿದ್ದಾರೆ. ಇದರಲ್ಲಿ 14 ಶತಕಗಳು ಮತ್ತು 35 ಅರ್ಧಶತಕಗಳು ಸೇರಿವೆ. ಹಾಗೆಯೇ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ 160 ಪಂದ್ಯಗಳನ್ನಾಡಿರುವ ಮಂಧಾನ 30.43 ಸರಾಸರಿಯಲ್ಲಿ 4,231 ರನ್ ಗಳಿಸಿದ್ದಾರೆ, ಒಂದು ಶತಕದೊಂದಿಗೆ. ಮಂಧಾನ ಪ್ರಸ್ತುತ ವಿಶ್ವದ ನಂ. 2 ಟಿ20 ಬ್ಯಾಟರ್ ಕೂಡ ಆಗಿದ್ದಾರೆ.

5 / 5
Follow Us
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ

ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು

ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು

ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ

ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್

ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ

ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ