AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ಮಹಿಳಾ ತಂಡಕ್ಕೆ ಸ್ಮೃತಿ ಮಂಧಾನ ನೂತನ ನಾಯಕಿ..!

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ನಾಯಕಿಯಾಗಿ ಸ್ಮೃತಿ ಮಂಧಾನ ಅವರನ್ನು ನೇಮಿಸಲಾಗಿದೆ. ಹರ್ಮನ್‌ಪ್ರೀತ್ ಕೌರ್ ರಾಜೀನಾಮೆ ನೀಡಿದ ನಂತರ, ಬಿಸಿಸಿಐ ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಮಂಧಾನ ಏಕದಿನ ಮತ್ತು ಟಿ20 ಪಂದ್ಯಗಳಿಗೆ ತಂಡವನ್ನು ಮುನ್ನಡೆಸಲಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ ಅನುಭವ ಹೊಂದಿರುವ ಸ್ಮೃತಿ, ಈ ಹೊಸ ಜವಾಬ್ದಾರಿಯನ್ನು ಅತ್ಯುತ್ತಮವಾಗಿ ನಿರ್ವಹಿಸುವ ವಿಶ್ವಾಸವಿದೆ ಎಂದಿದ್ದಾರೆ.

ಪೃಥ್ವಿಶಂಕರ
|

Updated on: Oct 06, 2026 | 9:43 PM

Share
ಭಾರತೀಯ ಮಹಿಳಾ ಕ್ರಿಕೆಟ್ ತಂಡದಲ್ಲಿ ಒಂದೇ ದಿನ ಎರಡು ಪ್ರಮುಖ ಬೆಳವಣಿಗೆಗಳಾಗಿವೆ. ಇಂದು ಬೆಳಿಗ್ಗೆ ಭಾರತ ಮಹಿಳಾ ತಂಡದ ನಾಯಕಿ ಹರ್ಮನ್​​ಪ್ರೀತ್ ಕೌರ್ ನಾಯಕತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಅವರಿಂದ ತೆರನಾದ ಸ್ಥಾನಕ್ಕೆ ಇದೀಗ ಮತ್ತೊಬ್ಬ ನಾಯಕಿಯ ಆಯ್ಕೆಯಾಗಿದೆ. ಈ ಮೊದಲೇ ನಿರೀಕ್ಷಿಸಿದಂತೆ ಸ್ಮೃತಿ ಮಂಧಾನ ಅವರನ್ನು ನೂತನ ನಾಯಕಿಯಾಗಿ ಆಯ್ಕೆಮಾಡಲಾಗಿದೆ(PC-PTI).

1 / 6
ಗುವಾಹಟಿಯಲ್ಲಿ ನಡೆದ ಸಭೆಯಲ್ಲಿ ಬಿಸಿಸಿಐ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ವಾಸ್ತವವಾಗಿ ಹರ್ಮನ್ಪ್ರೀತ್ ರಾಜೀನಾಮೆ ನೀಡಿದ ಬಳಿಕ ಅವರ ಸ್ಥಾನಕ್ಕೆ ಸ್ಮೃತಿ ಬರುವುದು ಖಚಿತವಾಗಿತ್ತು. ಅದರಂತೆ ಈಗ ಆ ಸುದ್ದಿಯನ್ನು ಬಿಸಿಸಿಐ ಖಚಿತಪಡಿಸಿದೆ. ಹರ್ಮನ್‌ಪ್ರೀತ್ ಅವರಿಂದ ಕಲಿತು ಅವರ ಅನುಪಸ್ಥಿತಿಯಲ್ಲಿ ತಂಡವನ್ನು ಮುನ್ನಡೆಸಿದ ಅನುಭವ ಮಂಧಾನ ಅವರಿಗಿದೆ(PC-PTI).

2 / 6
ಇದಲ್ಲದೆ ಸ್ಮೃತಿ ಮಂದಾನ ಮಹಿಳಾ ತಂಡದ ಉಪನಾಯಕಿಯಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದಾರೆ. ನಾಯಕಿಯಾಗಿಯೂ ಅಪಾರ ಅನುಭವ ಹೊಂದಿರುವ ಸ್ಮೃತಿ ಮಂಧಾನ 2024 ಮತ್ತು 2026 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರನ್ನು ಮಹಿಳಾ ಪ್ರೀಮಿಯರ್ ಲೀಗ್ ಪ್ರಶಸ್ತಿಗಳಿಗೆ ಮುನ್ನಡೆಸಿದ್ದಾರೆ. ಸ್ಮೃತಿ 2013 ರಿಂದ ಭಾರತೀಯ ತಂಡದ ಭಾಗವಾಗಿದ್ದು, ಈ ಪಾತ್ರದಲ್ಲಿ ಸಾಕಷ್ಟು ಅನುಭವ ಹೊಂದಿದ್ದಾರೆ(PC-PTI).

3 / 6
ಆದಾಗ್ಯೂ ಸ್ಮೃತಿ ಮಂಧಾನ ಅವರನ್ನು ಏಕದಿನ ಮತ್ತು ಟಿ20 ಪಂದ್ಯಗಳಿಗೆ ಮಾತ್ರ ನಾಯಕಿಯಾಗಿ ನೇಮಿಸಲಾಗಿದೆ. ಅಂದರೆ ಟೆಸ್ಟ್ ಮಾದರಿಗೆ ನಾಯಕಿ ಯಾರು ಎಂಬುದು ಇನ್ನು ಖಚಿತವಾಗಿಲ್ಲ. ಉಳಿದಂತೆ ಸ್ಮೃತಿ ಮಂಧಾನ ಈ ಹಿಂದೆ 18 ಟಿ20 ಮತ್ತು ನಾಲ್ಕು ಏಕದಿನ ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ ಅನುಭವ ಹೊಂದಿದ್ದಾರೆ(PC-PTI).

4 / 6
ಈ ಬಗ್ಗೆ ಮಾಹಿತಿ ನೀಡಿರುವ ಬಿಸಿಸಿಐ ಅಧ್ಯಕ್ಷ ಮಿಥುನ್ ಮನ್ಹಾಸ್, ‘ಭಾರತೀಯ ಮಹಿಳಾ ಕ್ರಿಕೆಟ್ ತಂಡದ ನಾಯಕಿಯಾಗಿ ನೇಮಕಗೊಂಡಿದ್ದಕ್ಕಾಗಿ ಸ್ಮೃತಿ ಮಂಧಾನ ಅವರನ್ನು ನಾನು ಅಭಿನಂದಿಸುತ್ತೇನೆ. ಅವರು ಹಲವು ವರ್ಷಗಳಿಂದ ಭಾರತೀಯ ಕ್ರಿಕೆಟ್‌ನ ಅವಿಭಾಜ್ಯ ಅಂಗವಾಗಿದ್ದಾರೆ ಮತ್ತು ನಾಯಕತ್ವಕ್ಕೆ ಅಗತ್ಯವಾದ ಗುಣಗಳನ್ನು ನಿರಂತರವಾಗಿ ಪ್ರದರ್ಶಿಸಿದ್ದಾರೆ. ಬಿಸಿಸಿಐ ಸ್ಮೃತಿ ಅವರ ಮೇಲೆ ಸಂಪೂರ್ಣ ವಿಶ್ವಾಸ ಹೊಂದಿದೆ, ಮತ್ತು ಅವರು ತಮ್ಮ ವೃತ್ತಿಜೀವನದುದ್ದಕ್ಕೂ ಪ್ರದರ್ಶಿಸಿದ ಅದೇ ವೃತ್ತಿಪರತೆಯೊಂದಿಗೆ ಈ ಪಾತ್ರವನ್ನು ನಿರ್ವಹಿಸುತ್ತಾರೆ ಎಂಬ ವಿಶ್ವಾಸ ನನಗಿದೆ’ ಎಂದಿದ್ದಾರೆ(PC-PTI).

5 / 6
ನಾಯಕಿಯಾದ ನಂತರ ಹರ್ಷ ವ್ಯಕ್ತಪಡಿಸಿರುವ ಸ್ಮೃತಿ ಮಂಧಾನ, ‘ಇದು ನನಗೆ ಸಿಕ್ಕ ದೊಡ್ಡ ಗೌರವವಾಗಿದೆ. ದೇಶವನ್ನು ಮುನ್ನಡೆಸುವುದು ಯಾವಾಗಲೂ ಅರ್ಥಪೂರ್ಣವಾಗಿದೆ. ಬಿಸಿಸಿಐ, ಆಯ್ಕೆದಾರರು, ನನ್ನ ತಂಡದ ಸದಸ್ಯರು ಮತ್ತು ನನ್ನ ಪ್ರಯಾಣದುದ್ದಕ್ಕೂ ನನ್ನನ್ನು ಬೆಂಬಲಿಸಿದ ಮತ್ತು ನಂಬಿದ ಎಲ್ಲರಿಗೂ ನಾನು ಕೃತಜ್ಞಳಾಗಿದ್ದೇನೆ. ನನ್ನ ಅತ್ಯುತ್ತಮವಾದದ್ದನ್ನು ನೀಡಲು ನಾನು ಶ್ರಮಿಸುತ್ತೇನೆ’ ಎಂದಿದ್ದಾರೆ(PC-PTI).

6 / 6
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
‘ಪ್ರೇಮದ ಊರಲಿ’ ನಟಿಯರಿಗೆ ಕನ್ನಡದ ಬಗ್ಗೆ ಸಂಕಲ್ಪ ಮಾಡಿಸಿದ ರಂಗಾಯಣ ರಘು

ಕೊನೆಗೂ ತಾಲೂಕು, ಜಿಲ್ಲಾ ಪಂಚಾಯ್ತಿ ಚುನಾವಣೆಗೆ ಮುಹೂರ್ತ ಫಿಕ್ಸ್

ಜಿಬಿಎ ವ್ಯಾಪ್ತಿಯಲ್ಲಿ ಐದು ನಗರ ಪೊಲೀಸ್ ಕಮಿಷನರೇಟ್‌ಗಳಿಗೆ ಸಂಪುಟ ಅನುಮೋದನೆ

ದಸರಾ, ದೀಪಾವಳಿ ಹೊತ್ತಲ್ಲೇ ಬೆಲೆ ಏರಿಕೆ ಶಾಕ್: ಹಾಲಿನ ದರ 8 ರೂ. ಹೆಚ್ಚಳ

ಕೆಪಿಎಸ್​ಸಿ ಅಕ್ರಮ: ಮಾಜಿ ಅಧ್ಯಕ್ಷ ಶಿವಶಂಕರಪ್ಪ,ಸದಸ್ಯೆ ಗೀತಾ ಇಡಿ ವಶಕ್ಕೆ

ಬಿಗ್​​ಬಾಸ್ ಕನ್ನಡ: ‘ಅಯ್ಯೋ ಉರಿ’ ಕಣ್ಣೀರು ಹಾಕಿದ ಕಿರಣ್ ಶಾಸ್ತ್ರಿ

ನಮ್ಮ್ ಸಿಎಂ ಫೋನ್‌ಗೆ ಸಿಗಲ್ಲ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ದಾವಣಗೆರೆ: ಭತ್ತದ ವ್ಯಾಪಾರಿಯಿಂದ 4 ಕೋಟಿ ವಂಚನೆ ಆರೋಪ

ಪ್ರತಿಭಟನೆ ವೇಳೆ ಬ್ಯಾರಿಕೇಡ್ ಹತ್ತಿ ಧ್ವಜ ಬೀಸಿದ ರಾಹುಲ್ ಗಾಂಧಿ!

ಕೈದಿ ಬಿಡುಗಡೆಗೆ ಪತ್ನಿ ಮೇಲೆ ಆಸೆ: ಅಪರಾಧಿ ಪತ್ನಿಗೆ ಡಿಐಜಿ ವಿಡಿಯೋ ಕಾಲ್!