ಯುಎಇಯಲ್ಲಿ ನಡೆದ ಮಹಿಳಾ ಟಿ20 ವಿಶ್ವಕಪ್ನ ಗುಂಪು ಹಂತದ ಪಂದ್ಯಗಳು ಮುಗಿದಿದ್ದು, ಸೆಮಿಫೈನಲ್‌ಗೆ 4 ತಂಡಗಳು ಅರ್ಹತೆ ಪಡೆದುಕೊಂಡಿವೆ. ಎ ಗುಂಪಿನಿಂದ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ಅರ್ಹತೆ ಪಡೆದಿದ್ದರೆ, ವೆಸ್ಟ್ ಇಂಡೀಸ್ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಬಿ ಗುಂಪಿನಿಂದ ಸ್ಥಾನ ಪಡೆದಿವೆ. ಆದರೆ ಪ್ರಶಸ್ತಿಗೆ ಪ್ರಬಲ ಸ್ಪರ್ಧಿ ಎನಿಸಿಕೊಡಿದ್ದ ಭಾರತ ವನಿತಾ ಪಡೆ ಲೀಗ್ ಹಂತದಲ್ಲೇ ತನ್ನ ಪ್ರಯಾಣ ಮುಗಿಸಿದೆ.