ವಿಶೇಷ ಮೈಲುಗಲ್ಲು ದಾಟಿದ ಸ್ಮೃತಿ ಮಂಧಾನ

Updated on: Feb 18, 2025 | 7:29 AM

WPL 2025: ವುಮೆನ್ಸ್ ಪ್ರೀಮಿಯರ್‌ ಲೀಗ್‌‌ನ 4ನೇ ಪಂದ್ಯದಲ್ಲಿ RCB ತಂಡ 8 ವಿಕೆಟ್‌ಗಳ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ನೀಡಿದ 142 ರನ್ ಗಳ ಗುರಿಯನ್ನು ಆರ್ ಸಿ ಬಿ 16.2 ಓವರುಗಳಲ್ಲಿ ಚೇಸ್ ಮಾಡಿದೆ. ಈ ಪಂದ್ಯದ ಮೂಲಕ ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ವಿಶೇಷ ದಾಖಲೆಯನ್ನು ಸಹ ಬರೆದಿದ್ದಾರೆ.

1 / 6
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡದ ನಾಯಕಿ ಸ್ಮೃತಿ ಮಂಧಾನ ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ಹೊಸ ಮೈಲುಗಲ್ಲು ದಾಟಿದ್ದಾರೆ. ವಡೋದರಾದ ಕೋಟಂಬಿ ಸ್ಟೇಡಿಯಂನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸುವ ಮೂಲಕ ಸ್ಮೃತಿ ಈ ಸಾಧನೆ ಮಾಡಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ಬೌಲಿಂಗ್ ಆಯ್ದುಕೊಂಡಿದ್ದರು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡದ ನಾಯಕಿ ಸ್ಮೃತಿ ಮಂಧಾನ ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ಹೊಸ ಮೈಲುಗಲ್ಲು ದಾಟಿದ್ದಾರೆ. ವಡೋದರಾದ ಕೋಟಂಬಿ ಸ್ಟೇಡಿಯಂನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸುವ ಮೂಲಕ ಸ್ಮೃತಿ ಈ ಸಾಧನೆ ಮಾಡಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ಬೌಲಿಂಗ್ ಆಯ್ದುಕೊಂಡಿದ್ದರು.

2 / 6

ಅದರಂತೆ ಮೊದಲು ಬ್ಯಾಟ್ ಮಾಡಿ ಡೆಲ್ಲಿ ಕ್ಯಾಪಿಟಲ್ಸ್ ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ಆದರೆ ಮಧ್ಯಮ ಕ್ರಮಾಂಕದಲ್ಲಿ ಜೆಮಿಮಾ ರೊಡ್ರಿಗಸ್ ಬಾರಿಸಿದ 34 ರನ್ ಗಳ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ 19.3 ಓವರುಗಳಲ್ಲಿ 141 ರನ್ ಕಲೆಹಾಕಿತು.

3 / 6

ಈ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ತಂಡಕ್ಕೆ ಸ್ಮೃತಿ ಮಂಧಾನ ಹಾಗೂ ಡೇನಿಯಲ್ ವ್ಯಾಟ್ ಸ್ಪೋಟಕ ಆರಂಭ ಒದಗಿಸಿದ್ದರು. ಅಲ್ಲದೆ ಮೊದಲ ವಿಕೆಟ್ 107 ರನ್ ಪೇರಿಸಿದ ಬಳಿಕ ವ್ಯಾಟ್ (42) ವಿಕೆಟ್ ಒಪ್ಪಿಸಿದರು. ಇದಾಗ್ಯೂ ಸ್ಮೃತಿ ಅಬ್ಬರ ಮುಂದುವರೆದಿತ್ತು.

4 / 6

ಡೆಲ್ಲಿ ಕ್ಯಾಪಿಟಲ್ಸ್ ಬೌಲರ್‌ಗಳನ್ನು ಮನಸೋ ಇಚ್ಛೆ ದಂಡಿಸಿದ ಸ್ಮೃತಿ ಮಂಧಾನ ಕೇವಲ 27 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಲ್ಲದೆ 47 ಎಸೆತಗಳಲ್ಲಿ 3 ಸಿಕ್ಸ್, 10 ಫೋರ್ ಗಳೊಂದಿಗೆ 81 ರನ್ ಚಚ್ಚಿದರು.

5 / 6

ಈ 81 ರನ್ ಗಳೊಂದಿಗೆ ಸ್ಮೃತಿ ಮಂಧಾನ ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ 500 ರನ್ ಪೂರೈಸಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಆರ್​ಸಿಬಿ ತಂಡದ 2ನೇ ಆಟಗಾರ್ತಿ ಎನಿಸಿಕೊಂಡಿದ್ದಾರೆ. ಆರ್​ಸಿಬಿ ಪರ 20 ಪಂದ್ಯಗಳನ್ನಾಡಿರುವ ಸ್ಮೃತಿ 3 ಅರ್ಧಶತಕಗಳೊಂದಿಗೆ ಈವರೆಗೆ 539 ರನ್ ಕಲೆಹಾಕಿದ್ದಾರೆ.

6 / 6

ಇನ್ನು ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿ ಮೆಗ್ ಲ್ಯಾನಿಂಗ್ ಹೆಸರಿನಲ್ಲಿದೆ. ಈವರೆಗೆ 20 ಪಂದ್ಯಗಳನ್ನಾಡಿರುವ ಮೆಗ್ ಲ್ಯಾನಿಂಗ್ 6 ಅರ್ಧಶತಕಗಳೊಂದಿಗೆ ಒಟ್ಟು 708 ರನ್ ಬಾರಿಸಿ ಈ ದಾಖಲೆ ನಿರ್ಮಿಸಿದ್ದಾರೆ. ಇನ್ನು ದ್ವಿತೀಯ ಸ್ಥಾನದಲ್ಲಿರುವುದು ಆರ್​ಸಿಬಿಯ ಎಲ್ಲಿಸ್ ಪೆರ್ರಿ. 19 ಪಂದ್ಯಗಳನ್ನಾಡಿರುವ ಪೆರ್ರಿ ಈವರೆಗೆ 664 ರನ್ ಕಲೆಹಾಕಿದ್ದಾರೆ.

Loading...
Unable to load recommendations.
Follow Us