ಪ್ರಸ್ತುತ ಐರ್ಲೆಂಡ್ ವಿರುದ್ಧ ನಡೆಯುತ್ತಿರುವ ಏಕದಿನ ಸರಣಿಯಲ್ಲೂ ಅಬ್ಬರಿಸಿರುವ ಸ್ಮೃತಿ, ಮೂರನೇ ಏಕದಿನ ಪಂದ್ಯದಲ್ಲಿ 135 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಕಟ್ಟಿದ್ದಾರೆ. ಅದರಲ್ಲೂ ಕೇವಲ 70 ಎಸೆತಗಳಲ್ಲಿ ಶತಕ ಪೂರೈಸಿದ ಮಂಧಾನ ಏಕದಿನ ಕ್ರಿಕೆಟ್‌ನಲ್ಲಿ ಅತಿ ಕಡಿಮೆ ಎಸೆತಗಳಲ್ಲಿ ಶತಕ ಪೂರೈಸಿದ ದಾಖಲೆ ನಿರ್ಮಿಸಿದ್ದು, ಈ ವಿಚಾರದಲ್ಲಿ ಹರ್ಮನ್‌ಪ್ರೀತ್ ಕೌರ್ ಅವರ ದಾಖಲೆಯನ್ನು ಮುರಿಯುವಲ್ಲಿ ಯಶಸ್ವಿಯಾಗಿದ್ದಾರೆ.