Smriti Mandhana: ಅಧಿಕ ಶತಕ, ಸಿಕ್ಸರ್, ಮೊದಲ ಏಷ್ಯನ್; ಸ್ಮೃತಿ ಸ್ಫೋಟಕ್ಕೆ ದಾಖಲೆಗಳೆಲ್ಲ ಧ್ವಂಸ

|

Updated on: Jan 15, 2025 | 5:58 PM

Smriti Mandhana: ಸ್ಮೃತಿ ಮಂಧಾನ ಅವರು ಹರ್ಮನ್‌ಪ್ರೀತ್ ಕೌರ್ ಅವರ ಅನುಪಸ್ಥಿತಿಯಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿಯಾಗಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಐರ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ 135 ರನ್‌ಗಳ ಇನಿಂಗ್ಸ್ ಆಡಿದ ಸ್ಮೃತಿ ಕೇವಲ 70 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ದಾಖಲೆ ಬರೆದಿದ್ದಾರೆ. ಇದು ಏಕದಿನ ಕ್ರಿಕೆಟ್‌ನಲ್ಲಿ ಸ್ಮೃತಿ ಅವರ 10ನೇ ಶತಕವಾಗಿದ್ದು, ಈ ಮೈಲಿಗಲ್ಲು ದಾಟಿದ ಮೊದಲ ಏಷ್ಯನ್ ಬ್ಯಾಟರ್ ಎನಿಸಿಕೊಂಡಿದ್ದಾರೆ.

1 / 7
ಹರ್ಮನ್‌ಪ್ರೀತ್ ಕೌರ್ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾದ ನಾಯಕತ್ವವಹಿಸಿಕೊಂಡಿರುವ ಸ್ಮೃತಿ ಮಂಧಾನ ನಾಯಕಿಯಾಗಿಯೂ ಹಾಗೂ ಆರಂಭಿಕ ಆಟಗಾರ್ತಿಯಾಗಿಯೂ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಈ ಮೊದಲು ನಾಯಕಿಯ ವಿಂಡೀಸ್ ವಿರುದ್ಧ ಟಿ20 ಸರಣಿ ಗೆಲ್ಲಿಸಿಕೊಟ್ಟಿದ್ದ ಸ್ಮೃತಿ, ಇದೀಗ ಐರ್ಲೆಂಡ್ ವಿರುದ್ಧ ಏಕದಿನ ಸರಣಿಯನ್ನು ಭಾರತದ ಖಾತೆಗೆ ಹಾಕಿದ್ದಾರೆ.

2 / 7
ಇನ್ನು ಆಟಗಾರ್ತಿಯಾಗಿಯೂ ಅತ್ಯಧ್ಬುತ ಫಾರ್ಮ್​ನಲ್ಲಿರುವ ಮಂಧಾನ ಕಳೆದ 10 ಇನ್ನಿಂಗ್ಸ್​ಗಳಲ್ಲಿ ಕೇವಲ 2 ಬಾರಿ ಮಾತ್ರ ಅರ್ಧಶತಕ ವಂಚಿತರಾಗಿದ್ದಾರೆ. ಉಳಿದಂತೆ 8 ಇನ್ನಿಂಗ್ಸ್​ಗಳಲ್ಲಿ 50 ಕ್ಕೂ ಅಧಿಕ ರನ್ ಬಾರಿಸುವುದರೊಂದಿಗೆ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಡುವುದರೊಂದಿಗೆ ತಂಡದ ಗೆಲುವಿಗೆ ಪ್ರಮುಖ ಕಾಣಿಕೆ ನೀಡುತ್ತಿದ್ದಾರೆ.

3 / 7
ಪ್ರಸ್ತುತ ಐರ್ಲೆಂಡ್ ವಿರುದ್ಧ ನಡೆಯುತ್ತಿರುವ ಏಕದಿನ ಸರಣಿಯಲ್ಲೂ ಅಬ್ಬರಿಸಿರುವ ಸ್ಮೃತಿ, ಮೂರನೇ ಏಕದಿನ ಪಂದ್ಯದಲ್ಲಿ 135 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಕಟ್ಟಿದ್ದಾರೆ. ಅದರಲ್ಲೂ ಕೇವಲ 70 ಎಸೆತಗಳಲ್ಲಿ ಶತಕ ಪೂರೈಸಿದ ಮಂಧಾನ ಏಕದಿನ ಕ್ರಿಕೆಟ್​ನಲ್ಲಿ ಅತಿ ಕಡಿಮೆ ಎಸೆತಗಳಲ್ಲಿ ಶತಕ ಪೂರೈಸಿದ ದಾಖಲೆ ನಿರ್ಮಿಸಿದ್ದು, ಈ ವಿಚಾರದಲ್ಲಿ ಹರ್ಮನ್‌ಪ್ರೀತ್ ಕೌರ್​ ಅವರ ದಾಖಲೆಯನ್ನು ಮುರಿಯುವಲ್ಲಿ ಯಶಸ್ವಿಯಾಗಿದ್ದಾರೆ.

4 / 7
ಐರ್ಲೆಂಡ್ ವಿರುದ್ಧ ಕೇವಲ 70 ಎಸೆತಗಳಲ್ಲಿ ಈ ಸಾಧನೆ ಮಾಡಿದ ಮಂಧಾನ, ಕಳೆದ ವರ್ಷ ದಕ್ಷಿಣ ಆಫ್ರಿಕಾ ವಿರುದ್ಧ ನಡೆದಿದ್ದ ಏಕದಿನ ಪಂದ್ಯದಲ್ಲಿ ಕೇವಲ 87 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದ ನಿಯಮಿತ ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರ ದಾಖಲೆಯನ್ನು ಮುರಿದಿದ್ದಾರೆ. ಹರ್ಮನ್‌ಪ್ರೀತ್ ಮತ್ತು ಜೆಮಿಮಾ ರಾಡ್ರಿಗಸ್ ಕೂಡ 90 ಎಸೆತಗಳಲ್ಲಿ ಶತಕ ಸಿಡಿಸಿದ್ದಾರೆ.

5 / 7
ಇದು ಏಕದಿನ ಕ್ರಿಕೆಟ್​ನಲ್ಲಿ ಮಂಧಾನ  ಸಿಡಿಸಿದ 10ನೇ ಶತಕವಾಗಿದ್ದು, ಈ ಮಾದರಿಯಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ ಮತ್ತು ಮೊದಲ ಏಷ್ಯನ್ ಆಟಗಾರ್ತಿಯೆಂಬ ಇತಿಹಾಸ ಸೃಷ್ಟಿಸಿದ್ದಾರೆ. ಹಾಗೆಯೇ ಮಹಿಳಾ ಏಕದಿನ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಮೂರನೇ ಆರಂಭಿಕ ಆಟಗಾರ್ತಿಯಾಗಿದ್ದಾರೆ. ಸ್ಮೃತಿ ಹೊರತುಪಡಿಸಿ ಮೆಗ್ ಲ್ಯಾನಿಂಗ್ (15) ಮತ್ತು ಸುಜಿ ಬೇಟ್ಸ್ (13) ಮಾತ್ರ ಅವರಿಗಿಂತ ಮುಂದಿದ್ದಾರೆ.

6 / 7
ಇದಲ್ಲದೆ ಮಹಿಳಾ ಏಕದಿನ ಕ್ರಿಕೆಟ್‌ನ ಇತಿಹಾಸದಲ್ಲಿ ಜಂಟಿಯಾಗಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಭಾರತೀಯ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಸ್ಮೃತಿ ಮಂಧಾನ ಪಾತ್ರರಾಗಿದ್ದಾರೆ. ಹರ್ಮನ್‌ಪ್ರೀತ್ ಕೌರ್ ಮತ್ತು ಸ್ಮೃತಿ ಪ್ರಸ್ತುತ ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ ತಲಾ 52 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

7 / 7
ಇಂದಿನ ಪಂದ್ಯದ ತಮ್ಮ ಇನ್ನಿಂಗ್ಸ್​ನಲ್ಲಿ 7 ಸಿಕ್ಸರ್​ಗಳನ್ನು ಸಿಡಿಸುವ ಮೂಲಕ ಸ್ಮೃತಿ, ಮಹಿಳಾ ಏಕದಿನ ಕ್ರಿಕೆಟ್‌ನ ಪಂದ್ಯವೊಂದರಲ್ಲಿ ಜಂಟಿಯಾಗಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಭಾರತೀಯ ಆಟಗಾರ್ತಿ ಎನಿಸಿಕೊಂಡಿದ್ದಾರೆ. ಈ ಹಿಂದೆ ಹರ್ಮನ್‌ಪ್ರೀತ್ 2017 ರ ಏಕದಿನ ವಿಶ್ವಕಪ್‌ನ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ 171 ರನ್ ಕಲೆಹಾಕಿದ್ದರು. ಈ ವೇಳೆ ತಮ್ಮ ಇನ್ನಿಂಗ್ಸ್‌ನಲ್ಲಿ 7 ಸಿಕ್ಸರ್‌ಗಳನ್ನು ಸಹ ಬಾರಿಸಿದ್ದರು.