AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶತಕಗಳ ಮೇಲೆ ಶತಕ: ಹೊಸ ಇತಿಹಾಸ ರಚಿಸಿದ ಸ್ಮೃತಿ ಮಂಧಾನ

India Women vs Sri Lanka Women, Final: ಭಾರತ, ಶ್ರೀಲಂಕಾ ಮತ್ತು ಸೌತ್ ಆಫ್ರಿಕಾ ನಡುವಣ ತ್ರಿಕೋನ ಸರಣಿಯ ಫೈನಲ್ ಪಂದ್ಯವು ಕೊಲಂಬೊದಲ್ಲಿ ನಡೆಯುತ್ತಿದೆ. ಈ ಸರಣಿಯ ಅಂತಿಮ ಹಣಾಹಣಿಯಲ್ಲಿ ಭಾರತ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 50 ಓವರ್​ಗಳಲ್ಲಿ 342 ರನ್ ಕಲೆಹಾಕಿದೆ.

ಝಾಹಿರ್ ಯೂಸುಫ್
|

Updated on: May 11, 2025 | 2:09 PM

Share
ಕೊಲಂಬೊದಲ್ಲಿ ನಡೆಯುತ್ತಿರುವ ತ್ರಿಕೋನ ಸರಣಿಯ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಆರ್​. ಪ್ರೇಮದಾಸ ಮೈದಾನದಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಈ ಪಂದ್ಯದಲ್ಲಿ  ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕಿ ಹರ್ಮನ್​ಪ್ರೀತ್ ಕೌರ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

1 / 5
ಅದರಂತೆ ಮೊದಲು ಬ್ಯಾಟ್ ಮಾಡಿದ ಭಾರತ ತಂಡಕ್ಕೆ ಸ್ಮೃತಿ ಮಂಧಾನ ಹಾಗೂ ಪ್ರತಿಕಾ ರಾವಲ್ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 70 ರನ್ ಪೇರಿಸಿದ ಬಳಿಕ ಪ್ರತಿಕಾ 30 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಇದಾಗ್ಯೂ ಮತ್ತೊಂದೆಡೆ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಸ್ಮೃತಿ ಮಂಧಾನ ಮೈದಾನದ ಮೂಲೆ ಮೂಲೆಗೆ ಫೋರ್​ಗಳನ್ನು ಬಾರಿಸಿದರು.

2 / 5
ಈ ಮೂಲಕ ಕೇವಲ 92 ಎಸೆತಗಳಲ್ಲಿ ಶತಕ ಪೂರೈಸಿದರು. ವಿಶೇಷ ಎಂದರೆ ಇದು ಸ್ಮೃತಿ ಮಂಧಾನ ಅವರ 11ನೇ ಏಕದಿನ ಶತಕ. ಈ ಸೆಂಚುರಿಯೊಂದಿಗೆ ಮಹಿಳಾ ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ಶತಕ ಸಿಡಿಸಿದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ ವುಮೆನ್ಸ್ ಕ್ರಿಕೆಟ್​ನಲ್ಲಿ 10 ಕ್ಕಿಂತ ಅಧಿಕ ಶತಕ ಸಿಡಿಸಿ ಮೊದಲ ಭಾರತೀಯ ಆಟಗಾರ್ತಿ ಹಾಗೂ ವಿಶ್ವದ ಮೂರನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

3 / 5
ಮಹಿಳಾ ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ಶತಕ ಸಿಡಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಆಸ್ಟ್ರೇಲಿಯಾ ತಂಡದ ಮಾಜಿ ನಾಯಕಿ ಮೆಗ್ ಲ್ಯಾನಿಂಗ್. ಮೆಗ್ 103 ಏಕದಿನ ಪಂದ್ಯಗಳಲ್ಲಿ ಒಟ್ಟು 15 ಶತಕ ಸಿಡಿಸಿದ್ದಾರೆ. ಹಾಗೆಯೇ ನ್ಯೂಝಿಲೆಂಡ್​ನ ಸುಝಿ ಬೆಟ್ಸ್ 171 ಏಕದಿನ ಪಂದ್ಯಗಳಿಂದ 13 ಶತಕ ಬಾರಿಸಿದ್ದಾರೆ.

4 / 5
ಇದೀಗ ಸ್ಮೃತಿ ಮಂಧಾನ 102 ಏಕದಿನ ಪಂದ್ಯಗಳ ಮೂಲಕ ಒಟ್ಟು 11 ಶತಕ ಬಾರಿಸಿದ್ದಾರೆ. ಈ ಮೂಲಕ ಮಹಿಳಾ ಏಕದಿನ ಕ್ರಿಕೆಟ್​ನಲ್ಲಿ ಹತ್ತಕ್ಕಿಂತ ಅಧಿಕ ಸೆಂಚುರಿ ಸಿಡಿಸಿದ ವಿಶ್ವದ 3ನೇ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಸ್ಮೃತಿ ಮಂಧಾನ ತಮ್ಮದಾಗಿಸಿಕೊಂಡಿದ್ದಾರೆ.

5 / 5
ಬಳ್ಳಾರಿಯಲ್ಲಿ ಶೋಧ ನಡೆಸುತ್ತಿರುವ ಕೇರಳ ಎಸ್ಐಟಿ

ಪೋಷಕರೇ ಗಮನಿಸಿ: ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ಇರಲಿ ಎಚ್ಚರ

ಬೆಂಕಿ ಜ್ವಾಲೆಗೆ 4 ಅಂಗಡಿಗಳು ಸುಟ್ಟು ಕರಕಲು: ಅಷ್ಟಕ್ಕೂ ಆಗಿದ್ದೇನು?

ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆಶಿ: ಏನಂದ್ರು ನೋಡಿ

ಬಿಗ್ ಬಾಸ್ ಧನುಷ್​​ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್​​ಮೆಂಟ್

2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ

ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!

ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ

ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?

ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್