ಅತೀ ವೇಗದ ಶತಕ ಸಿಡಿಸಿ ದಾಖಲೆ ಬರೆದ ಸ್ಮೃತಿ ಮಂಧಾನ
India Women vs Ireland Women: ಐರ್ಲೆಂಡ್ ಮಹಿಳಾ ತಂಡದ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದೆ. ಈ ಪಂದ್ಯದಲ್ಲಿ ಆರಂಭಿಕಳಾಗಿ ಕಣಕ್ಕಿಳಿದ ಸ್ಮೃತಿ ಮಂಧಾನ ಸ್ಪೋಟಕ ಸೆಂಚುರಿ ಸಿಡಿಸಿ ಹೊಸ ದಾಖಲೆಯನ್ನು ಬರೆದಿದ್ದಾರೆ. ಈ ದಾಖಲೆಯ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...
1 / 5
ರಾಜ್ಕೋಟ್ನ ನಿರಂಜನ್ ಶಾ ಸ್ಟೇಡಿಯಂನಲ್ಲಿ ಐರ್ಲೆಂಡ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಟೀಮ್ ಇಂಡಿಯಾ ಹಂಗಾಮಿ ನಾಯಕಿ ಸ್ಮೃತಿ ಮಂಧಾನ ಭರ್ಜರಿ ಶತಕ ಸಿಡಿಸಿದ್ದಾರೆ. ಈ ಶತಕದೊಂದಿಗೆ ಭಾರತದ ಪರ ಮಹಿಳಾ ಏಕದಿನ ಕ್ರಿಕೆಟ್ನಲ್ಲಿ ಅತೀ ವೇಗದ ಸೆಂಚರಿ ಸಿಡಿಸಿದ ದಾಖಲೆ ನಿರ್ಮಿಸಿದ್ದಾರೆ.
2 / 5
ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡವು ಬ್ಯಾಟಿಂಗ್ ಆಯ್ದುಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಸ್ಮೃತಿ ಮಂಧಾನ ಹಾಗೂ ಪ್ರತೀಕಾ ರಾವಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಒಂದೆಡೆ ಪ್ರತೀಕಾ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದರೆ, ಮತ್ತೊಂದೆಡೆ ಸ್ಮೃತಿ ಮಂಧಾನ ಸ್ಪೋಟಕ ಇನಿಂಗ್ಸ್ ಆಡಿದರು.
3 / 5
ಬಿರುಸಿನ ಬ್ಯಾಟಿಂಗ್ನೊಂದಿಗೆ ಐರ್ಲೆಂಡ್ ಬೌಲರ್ಗಳ ಬೆಂಡೆತ್ತಿದ ಸ್ಮೃತಿ ಕೇವಲ 70 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಮೂಲಕ ಮಹಿಳಾ ಏಕದಿನ ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾ ಪರ ಅತೀ ವೇಗದ ಶತಕ ಬಾರಿಸಿದ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡರು.
4 / 5
ಇದಕ್ಕೂ ಮುನ್ನ ಈ ದಾಖಲೆ ಟೀಮ್ ಇಂಡಿಯಾ ನಾಯಕಿ ಹರ್ಮನ್ಪ್ರೀತ್ ಕೌರ್ ಹೆಸರಿನಲ್ಲಿತ್ತು. 2024 ರಲ್ಲಿ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ಹರ್ಮನ್ಪ್ರೀತ್ ಕೌರ್ ಕೇವಲ 87 ಎಸೆತಗಳಲ್ಲಿ ಶತಕ ಸಿಡಿಸಿ ದಾಖಲೆ ಬರೆದಿದ್ದರು.
5 / 5
ಇದೀಗ ಈ ದಾಖಲೆಯನ್ನು ಮುರಿದು ಸ್ಮೃತಿ ಮಂಧಾನ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅಲ್ಲದೆ ಈ ಪಂದ್ಯದಲ್ಲಿ 80 ಎಸೆತಗಳನ್ನು ಎದುರಿಸಿದ ಸ್ಮೃತಿ 7 ಭರ್ಜರಿ ಸಿಕ್ಸ್ ಹಾಗೂ 12 ಫೋರ್ಗಳೊಂದಿಗೆ 135 ರನ್ ಬಾರಿಸಿ ಔಟಾದರು. ಇದೀಗ ಬ್ಯಾಟಿಂಗ್ ಮುಂದುವರೆಸಿರುವ ಟೀಮ್ ಇಂಡಿಯಾ 30 ಓವರ್ಗಳ ಮುಕ್ತಾಯದ ವೇಳೆಗೆ 1 ವಿಕೆಟ್ ಕಳೆದುಕೊಂಡು 256 ರನ್ ಕಲೆಹಾಕಿದೆ.