AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಹಿತ್ ಶರ್ಮಾ ದಾಖಲೆ ಪುಡಿಗಟ್ಟಲು ಸಜ್ಜಾದ ಸ್ಮೃತಿ ಮಂಧಾನ

ದುಬೈನಲ್ಲಿ ನಡೆಯುತ್ತಿರುವ ಮಹಿಳಾ ಟಿ20 ಏಷ್ಯಾಕಪ್‌ನಲ್ಲಿ ಸ್ಮೃತಿ ಮಂಧಾನ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಗಳಿಸಿದರೆ, ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ ಅವರ ಅತಿ ಹೆಚ್ಚು 50+ ಸ್ಕೋರ್‌ಗಳ ದಾಖಲೆಯನ್ನು ಮುರಿಯಲಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿ ನಂತರ ಅತಿ ಹೆಚ್ಚು 50+ ರನ್ ಗಳಿಸಿದ ಎರಡನೇ ಭಾರತೀಯ ಆಟಗಾರ್ತಿಯಾಗಿ ಹೊರಹೊಮ್ಮಲಿದ್ದಾರೆ.

ಪೃಥ್ವಿಶಂಕರ
|

Updated on:Sep 05, 2026 | 5:44 PM

Share
ದುಬೈನಲ್ಲಿ ನಡೆಯುತ್ತಿರುವ 2026 ರ ಮಹಿಳಾ ಟಿ20 ಏಷ್ಯಾಕಪ್‌ನಲ್ಲಿ ಭಾರತ ಮಹಿಳಾ ತಂಡದ ನಾಯಕಿ ಸ್ಮೃತಿ ಮಂಧಾನ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಹಾಂಗ್ ಕಾಂಗ್ ಚೀನಾ ವಿರುದ್ಧದ ಪಂದ್ಯದಲ್ಲಿ ಶತಕದ ಇನ್ನಿಂಗ್ಸ್ ಆಡುವ ಮೂಲಕ ಎರಡೆರಡು ವಿಶ್ವದಾಖಲೆಗಳನ್ನು ಮುರಿದಿದ್ದ ಸ್ಮೃತಿ ಇದೀಗ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಅಬ್ಬರಿಸುವ ಮೂಲಕ ಮತ್ತೊಂದು ದಾಖಲೆ ನಿರ್ಮಿಸುವ ಸನಿಹದಲ್ಲಿದ್ದಾರೆ(PC-PTI).

1 / 6
ಭಾರತ ಹಾಗೂ ಪಾಕಿಸ್ತಾನ ಮಹಿಳಾ ತಂಡಗಳ ನಡುವಿನ ಏಷ್ಯಾಕಪ್ ಪಂದ್ಯ ಸೆಪ್ಟೆಂಬರ್ 5 ರ ಶನಿವಾರದಂದು ನಡೆಯಲಿದೆ. ಈ ಪಂದ್ಯದಲ್ಲಿ ಸ್ಮೃತಿ ಮಂಧಾನ ಅರ್ಧಶತಕದ ಇನ್ನಿಂಗ್ಸ್ ಆಡಿದರೆ, ಟೀಂ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ ಅವರ ಪ್ರಮುಖ ದಾಖಲೆಯನ್ನು ಮುರಿಯಲಿದ್ದಾರೆ. ಅಂದರೆ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಭಾರತದ ಪರ ಅತಿ ಹೆಚ್ಚು 50 ಪ್ಲಸ್ ಸ್ಕೋರ್​ಗಳ ಇನ್ನಿಂಗ್ಸ್ ಆಡಿದವರ ಪಟ್ಟಿಯಲ್ಲಿ ಮಂಧಾನ ರೋಹಿತ್ ಶರ್ಮಾ ಅವರನ್ನು ಹಿಂದಿಕ್ಕಲಿದ್ದಾರೆ(PC-PTI).

2 / 6
ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಅತಿ ಹೆಚ್ಚು 50 ಪ್ಲಸ್ ಸ್ಕೋರ್​ಗಳ ಇನ್ನಿಂಗ್ಸ್ ಆಡಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ಸ್ಮೃತಿ ಮಂಧಾನ ಮತ್ತು ರೋಹಿತ್ ಶರ್ಮಾ ಪ್ರಸ್ತುತ ಎರಡನೇ ಸ್ಥಾನದಲ್ಲಿದ್ದಾರೆ. ರೋಹಿತ್ ಶರ್ಮಾ ಅಂತರರಾಷ್ಟ್ರೀಯ ಟಿ20ಯಲ್ಲಿ 37 ಬಾರಿ 50 ಪ್ಲಸ್ ರನ್​ಗಳ ಇನ್ನಿಂಗ್ಸ್‌ ಆಡಿದ್ದರೆ, ಇತ್ತ ಸ್ಮೃತಿ ಮಂಧಾನ ಕೂಡ 37 ಬಾರಿ ಈ ಸಾಧನೆ ಮಾಡಿದ್ದಾರೆ(PC-PTI).

3 / 6
ಇದೀಗ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಸ್ಮೃತಿ ಮಂಧಾನ 50 ರನ್​ಗಳ ಗಡಿ ದಾಟಿದರೆ, ಅತಿ ಹೆಚ್ಚು ಅರ್ಧಶತಕಗಳನ್ನು ಬಾರಿಸಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ರೋಹಿತ್ ಶರ್ಮಾ ಅವರನ್ನು ಹಿಂದಿಕ್ಕಿ ಎರಡನೇ ಸ್ಥಾನದಲ್ಲಿ ಉಳಿಯುತ್ತಾರೆ. ಇತ್ತ ರೋಹಿತ್ ಶರ್ಮಾ ಮೂರನೇ ಸ್ಥಾನಕ್ಕೆ ಕುಸಿಯಲಿದ್ದಾರೆ(PC-PTI).

4 / 6
ಅಂತರರಾಷ್ಟ್ರೀಯ ಟಿ20ಕ್ರಿಕೆಟ್​ನಲ್ಲಿ ಅತಿ ಹೆಚ್ಚು 50+ ಇನ್ನಿಂಗ್ಸ್‌ ಆಡಿರುವ ಭಾರತೀಯ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ. ಕೊಹ್ಲಿ ಇದುವರೆಗೆ 39 ಬಾರಿ ಈ ಸಾಧನೆ ಮಾಡಿದ್ದಾರೆ. ಮಾಜಿ ನಾಯಕ ಸೂರ್ಯಕುಮಾರ್ ಯಾದವ್ ಪ್ರಸ್ತುತ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದು, 29 ಬಾರಿ 50+ ಇನ್ನಿಂಗ್ಸ್‌ಗಳನ್ನು ಆಡಿದ್ದಾರೆ(PC-PTI).

5 / 6
24 ಬಾರಿ ಈ ಸಾಧನೆ ಮಾಡಿರುವ ಕನ್ನಡಿಗ ಕೆಎಲ್ ರಾಹುಲ್ ನಾಲ್ಕನೇ ಸ್ಥಾನದಲ್ಲಿದ್ದಾರೆ. ಹರ್ಮನ್‌ಪ್ರೀತ್ ಕೌರ್ ಮತ್ತು ಶಫಾಲಿ ವರ್ಮಾ ಈ ಪಟ್ಟಿಯಲ್ಲಿ ಜಂಟಿಯಾಗಿ ಐದನೇ ಸ್ಥಾನದಲ್ಲಿದ್ದು, ಇವರಿಬ್ಬರು ತಲಾ 19 ಬಾರಿ ಈ ಸಾಧನೆ ಮಾಡಿದ್ದಾರೆ. ಮಿಥಾಲಿ ರಾಜ್ ಈ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದ್ದರೆ, ಜೆಮಿಮಾ ರೊಡ್ರಿಗಸ್ ಏಳನೇ ಸ್ಥಾನದಲ್ಲಿದ್ದಾರೆ. ಅಭಿಷೇಕ್ ಶರ್ಮಾ ಮತ್ತು ಇಶಾನ್ ಕಿಶನ್ 8 ನೇ ಸ್ಥಾನದಲ್ಲಿದ್ದಾರೆ(PC-PTI).

6 / 6

Published On - 5:37 pm, Sat, 5 September 26

ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್

ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?

ಮೈಸೂರು ದಸರಾ 2026: ಗಜಪಡೆಗೆ ಸಿಡಿಮದ್ದು ತರಬೇತಿ

ದಾವಣಗೆರೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಭ್ರೂಣ ಲಿಂಗ ಪತ್ತೆ ಶಂಕೆ

ಧರೆಗುರುಳಿದ ಬೃಹತ್ ಮರ, ಹೊಯ್ಸಳ ಪೊಲೀಸ್ ಕಾರು ಜಸ್ಟ್ ಮಿಸ್

ಸ್ಟಿಂಗ್ ಆಪರೇಷನ್​​: ಪೆನ್‌ಡ್ರೈವ್​ ಪ್ರದರ್ಶಿಸಿ ಗಣಿಗ ರವಿ ಸ್ಫೋಟಕ ಆರೋಪ

ಪಿಜಿಸಿಇಟಿ ಕೌನ್ಸಿಲಿಂಗ್ ವಿಳಂಬ: ಕೆಇಎ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ!

ಗಾನವಿ ಕೊಟ್ಟ ಕೌಂಟರ್​​ಗೆ ಸೈಲೆಂಟ್ ಆದ ತಾಂಡವ್ ರಾಮ್

ಬೆಂಗಳೂರಿನಲ್ಲಿ ಭಕ್ತರ ಗಮನ ಸೆಳೆಯುತ್ತಿದೆ ಮಂತ್ರಾಲಯದ ಮಾದರಿಯ ಗಣೇಶ ಮಂಟಪ!

ಸಂಕೇಶ್ವರ: ಟಿಪ್ಪರ್​ಗೆ KSRTC ಬಸ್ ಡಿಕ್ಕಿ, ಚಾಲಕ ಸಾವು, 12 ಮಂದಿಗೆ ಗಾಯ